ಬೆಂಗಳೂರು :
ಆರೋಗ್ಯ ಸಚಿವ ಡಾ.ಕೆ. ಸುಧಾಕರ್
ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು ಬೇರೆ ಬೇರೆ ರೋಗ ಲಕ್ಷಣಗಳಿಂದ ಬಳಲುತ್ತಿರುವವರಿಗೆ ಬೂಸ್ಟರ್ ಡೋಸ್ ಲಸಿಕೆ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರು, ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ಎಲ್ಲ ಮುಂಚೂಣಿ ವಾರಿಯರ್ ಗಳಿಗೆ ಮೂರನೇ ಅಥವಾ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ.
ಕೋವಿಡ್ 3 ನೇ ಅಲೆ ನಿಯಂತ್ರಣಕ್ಕೆ ಇನ್ನೂ ಬಿಗಿ ಕ್ರಮ ಕೈಗೊಳ್ಳಬಹುದು. ಆದರೆ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ. ಜನರು ಆತಂಕ ಪಡಬೇಕಾಗಿಲ್ಲ. ಈಗಲಾಕ್ ಡೌನ್ ಕಳೆದುಹೋಗಿರುವ ನೀತಿ. ಮತ್ತೆ ಹೇರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಕುರಿತ ವಿಚಾರ ಪ್ರಸ್ತಾಪವಾಗಿಲ್ಲ. ಕೋವಿಡ್ ಲಸಿಕೆ ಮತ್ತು ಔಷಧಗಳನ್ನು ಬಳಸಿ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತೇವೆ. ಕೋವಿಡ್ 3 ನೇ ಅಲೆ ನಿಭಾಯಿಸಲು ಮುಂದಿನ 2ತಿಂಗಳಿಗೆ ಅಗತ್ಯದಷ್ಟು ಔಷಧ ಶೇಖರಣೆ ಮಾಡಿದ್ದೇವೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
