‘ಪ್ರಮಾಣವಚನ’ ಸ್ವೀಕರಿಸಿದ ದಿನವೇ ಸಿಎಂ ಬಿಎಸ್ವೈ ‘ಪದತ್ಯಾಗ’!!

ಬೆಂಗಳೂರು:  

      ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನವೇ ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿದಿರುವುದು ಅಚ್ಚರಿಗೆ ಕಾರಣವಾಗಿದೆ.

      ವಿಧಾನಸೌಧದಲ್ಲಿ ಇಂದು ಬಿಜೆಪಿ ಸರ್ಕಾರದ ಸಾಧನಾ ಪರ್ವ ಸಮಾವೇಶದಲ್ಲಿ ಅತ್ಯಂತ ಭಾವುಕರಾಗಿ ಮಾತನಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ನಂತರ ನೇರವಾಗಿ ರಾಜಭವನಕ್ಕೆ ಬಿ ಎಸ್ ಯಡಿಯೂರಪ್ಪ ಕಾರಿನಲ್ಲಿ ತೆರಳಿದರು. ನೇರವಾಗಿ ರಾಜಭವನಕ್ಕೆ ಬಂದು ರಾಜೀನಾಮೆ ಪತ್ರವನ್ನು ರಾಜ್ಯಪಾಲ ಗೆಹ್ಲೋಟ್ ಅವರಿಗೆ ಸಲ್ಲಿಸಿದರು.

    ಸಿಎಂ ಯಡಿಯೂರಪ್ಪ ರಾಜೀನಾಮೆ ಪತ್ರ ಸ್ವೀಕರಿಸಿದ ರಾಜ್ಯಪಾಲ ಗೆಹ್ಲೋಟ್,  ಮುಂದಿನ ಸಿಎಂ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ಬಿ ಎಸ್ ಯಡಿಯೂರಪ್ಪನವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ರಾಜಭವನ ಸುತ್ತಮುತ್ತ ತೀವ್ರ ಭದ್ರತೆ ಕಲ್ಪಿಸಲಾಗಿದೆ.

     ಸರ್ಕಾರದ ಸಾಧನಾ ಸಮಾವೇಶದ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು, ಬಳಿಕ ಸಂಪುಟ ಸಹೋದ್ಯೋಗಿಗಳ ಜೊತೆ ರಾಜಭವನಕ್ಕೆ ತೆರಳಿದ ಯಡಿಯೂರಪ್ಪ ರಾಜ್ಯಪಾಲ ಗೆಹ್ಲೋಟ್ ಅವರನ್ನು ಭೇಟಿಯಾಗಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap