ಪೋಕ್ಸೋ ಕೇಸ್​: ಸಮನ್ಸ್​ಗೆ ತಡೆ ನೀಡಿದ ಹೈಕೋರ್ಟ್, ಯಡಿಯೂರಪ್ಪಗೆ ರಿಲೀಫ್

ಬೆಂಗಳೂರು

    ಪೋಕ್ಸೋ ಪ್ರಕರಣದ   ಸಂಬಂಧ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​   ತಡೆ ನೀಡಿದೆ. ಹಾಗೇ, ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್​ ಯಡಿಯೂಪ್ಪ  ಅವರಿಗೆ  ರಿಲೀಫ್​ ಸಿಕ್ಕಿದೆ. 

    ವಿಚಾರಣೆ ವೇಳೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿತ್ತು. ಖುದ್ದು ಹಾಜರಾತಿಯಿಂದಲೂ ಹೈಕೋರ್ಟ್ ವಿನಾಯಿತಿ ನೀಡಿತ್ತು. 2024ರ ಫೆ‌ಬ್ರವರಿ 2ರಂದು ಅನುಚಿತವಾಗಿ ಸ್ಪರ್ಶಿಸಿದ ಆರೋಪವಿದೆ. ಒಂದು ತಿಂಗಳ ಬಳಿಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸ್ಥಳದಲ್ಲಿದ್ದ ಸಾಕ್ಷಿಗಳು ಆ ರೀತಿಯ ಘಟನೆ ನಡೆದಿಲ್ಲವೆಂದಿದ್ದಾರೆ. ಬಾಲಕಿ, ಆಕೆಯ ತಾಯಿಯ ಹೇಳಿಕೆ ಮೇಲೆ ಆರೋಪಪಟ್ಟಿ ದಾಖಲಿಸಿದ್ದಾರೆ. ತಾಯಿಯ ಮೊಬೈಲ್​ನಲ್ಲಿದ್ದ ಸಂಭಾಷಣೆ ಬಿಎಸ್ ​ಯಡಿಯೂರಪ್ಪ ಅಳಿಸಿಲ್ಲ. ಪೊಲೀಸರು ಹಾಕಿರುವ ಐಟಿ ಸೆಕ್ಷನ್ ದೂರುದಾರರಿಗೆ ಅನ್ವಯವಾಗುತ್ತದೆ ಎಂದು ವಾದಿಸಿದರು.

    1 ತಿಂಗಳು 12 ದಿನ ತಡವಾಗಿ ಪೊಕ್ಸೋ ಕೇಸ್ ದಾಖಲಿಸಲಾಗಿದೆ. ಘಟನೆ ನಡೆದಿದ್ದರೆ ಯಾರೂ ಇಷ್ಟು ತಡವಾಗಿ ದೂರು ದಾಖಲಿಸುತ್ತಿರಲಿಲ್ಲ. ಸಮನ್ಸ್ ರದ್ದುಪಡಿಸಿ ಹೊಸದಾಗಿ ಪರಿಶೀಲನೆಗೆ ಹಿಂದೆ ಆದೇಶಿಸಲಾಗಿತ್ತು. ಈಗ ವಿಶೇಷ ಕೋರ್ಟ್ ಕಾಗ್ನಿಜೆನ್ಸ್ ಪಡೆದು ಸಮನ್ಸ್ ಜಾರಿಗೊಳಿಸಿದೆ ಎಂದು ಬಿಎಸ್​ ಯಡಿಯೂರಪ್ಪ ಪರ ವಕೀಲರು ವಾದಿಸಿದರು. ಬಿಎಸ್​ ಯಡಿಯೂರಪ್ಪ ವಕೀಲರ ಮನವಿಗೆ ಅಡ್ವೊಕೇಟ್ ಜನರಲ್ ಆಕ್ಷೇಪಿಸಿದರು. ಹೈಕೋರ್ಟ್ ಸೂಚನೆಯಂತೆ ವಿಶೇಷ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಹೀಗಾಗಿ ಸಮನ್ಸ್​​ಗೆ ತಡೆ ನೀಡದಂತೆ ಮನವಿ ಮಾಡಿದರು.

    ವಾದ-ಪ್ರತಿವಾದ ಆಲಿಸಿದ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠ, ಬಿಎಸ್ ಯಡಿಯೂರಪ್ಪ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಹೇಳಿ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠ ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ತಡೆ ನೀಡಿದೆ. ಹಾಗೇ, ಖುದ್ದು ಹಾಜರಾತಿಯಿಂದಲೂ ಬಿಎಸ್ ಯಡಿಯೂರಪ್ಪ ಅವರಿಗೆ ವಿನಾಯಿತಿ ನೀಡಿದೆ. 

    ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ 2024 ರ ಮಾರ್ಚ್​ನಲ್ಲಿ ಕೇಳಿಬಂದಿತ್ತು. ಸಂತ್ರಸ್ತೆಯ ತಾಯಿ ಈ ಆರೋಪ ಮಾಡಿದ್ದರು. ಬಳಿಕ ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Recent Articles

spot_img

Related Stories

Share via
Copy link