ವಿಧಾನಸಭೆಗೆ ಬಿಎಸ್ ವೈ ವಿದಾಯ…!

ಬೆಂಗಳೂರು:

    ಶಿಕಾರಿವೀರ ಎಂದೇ ಪ್ರಖ್ಯಾತಿ ಪಡೆದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ವಿದಾಯ ಭಾಷಣ ಮಾಡುವುದರೊಂದಿಗೆ  15ನೇ ವಿಧಾನಸಭೆಯ ಕೊನೆಯ ಅಧಿವೇಶನಕ್ಕೆ ಇಂದು ತೆರೆ ಬಿದ್ದಿದೆ.

      ವಿಧಾಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಅವರು ಇಂದು ವಿದಾಯ ಭಾಷಣ ಮಾಡಿದ ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

       ಈ ಸದನದವನ್ನು ಸ್ಪೀಕರ್ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಯಶಸ್ವಿಯಾಗಿ ನಡೆಸಿದ್ದಾರೆ. ನೀವು ಮುಂದಿನ ಬಾರಿ ಮಂತ್ರಿಯಾಗಿ ಇಲ್ಲಿ ಕೂರಬೇಕು. ಇಲ್ಲಿ ಮಹಿಳೆಯರು ಹೆಚ್ಚು ಆಯ್ಕೆ ಆಗಬೇಕು ಎಂದು ಹೇಳಿದರು.

     ಇದೇ ವೇಳೆ ಶಿಕಾರಿಪುರದ ಜನರಿಗೆ ಧನ್ಯವಾದ ಹೇಳಿದ ಯಡಿಯೂರಪ್ಪ, ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಫೆಬ್ರವರಿ 27ಕ್ಕೆ ನನಗೆ 80 ವರ್ಷ ತುಂಬುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಹುಟ್ಟು ಹಬ್ಬಕ್ಕೆ ಬರಲಿದ್ದಾರೆ. ಅಂದೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ ಎಂದರು.

     ಇದೇ ವೇಳೆ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಎಸ್‌ವೈ, ದೇವೇಗೌಡರು ನಮಗೆ ಆದರ್ಶ. ಅವರನ್ನು ನೋಡಿ ಕಲಿಯುವಂತದ್ದು ತುಂಬಾ ಇದೆ. ಈ ವಯಸ್ಸಿನಲ್ಲೂ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡುತ್ತಾರೆ, ಚಿಂತನೆ ಮಾಡುತ್ತಾರೆ. ಅವರು ನಮಗೆ ಆದರ್ಶ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap