ಬಜೆಟ್‌ ಲೈವ್‌….!

ಬೆಂಗಳೂರು

ರಾಜ್ಯದ ಹಣಕಾಸು ಸಚಿವ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಧಿಕಾರ ಸ್ವೀಕರಿಸಿದ ಮೇಲೆ ಎರಡನೇ ಬಾರಿಗೆ ‘ರಾಜ್ಯ ಬಜೆಟ್ 2023-24’ ಮಂಡಿಸಲಿದ್ದಾರೆ. ಫೆಬ್ರವರಿ 17 ರಂದು ಶುಕ್ರವಾರ ಬೆಳಗ್ಗೆ 10.15ಕ್ಕೆ ಆಯವ್ಯಯ ಮಂಡಿಸಲಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ಕರ್ನಾಟಕದ ಜನತೆಯು ಸರ್ಕಾರದ ಭರಪೂರ ಕೊಡುಗೆ/ಘೋಷಣೆಗಳ ನಿರೀಕ್ಷೆಯಲ್ಲಿದ್ದಾರೆ.

ಸದನದಿಂದ ಲೈವ್‌ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

12:36 PM : ಉತ್ತರ ಕರ್ನಾಟಕಕ್ಕೆ ಮತ್ಸ್ಯಘಮ, ಮೀನುಗಾರಿಕೆ ದೋಣಿಗೆ ಹಣ!

ರಾಜ್ಯದ ಮೀನುಗಾರರಿಗೆ ನೆರವಾಗುವ ದೃಷ್ಟಿಯಿಂದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಅದರಂತೆ ಹಾವೇರಿಯಲ್ಲಿ ಮೀನು ಪಾಲನಾ ಕೇಂದ್ರ ಹಾಗೂ ಬೈಂದೂರಿನಲ್ಲಿ ಸೀಫುಡ್‌ ಪಾರ್ಕ್‌ ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ.

12:16 PM ಹೇಗಿರಲಿದೆ ತೆರಿಗೆ ಮತ್ತು ಆಯವ್ಯಯ?

12:13 PM 110 ಹಳ್ಳಿಗಳಿಗೆ ಕಾವೇರಿ ನೀರು ಲಭ್ಯ

ರಾಜ್ಯ ಬಜೆಟ್‌ನಲ್ಲಿ ಬೆಂಗಳೂರಿಗೆ ಬರೋಬ್ಬರಿ 9,698 ಕೋಟಿ ರೂ. ಅನುದಾನ ನೀಡಲಾಗಿದೆ. ಹವಾಮಾನ ಬದಲಾವಣೆಯ ಪರಿಣಾಮ ತಗ್ಗಿಸಲು ಮತ್ತು ಪ್ರವಾಹವನ್ನು ನಿಯಂತ್ರಿಸಲು 3,000 ಕೋಟಿ ರೂ. ಯೋಜನೆ ಅನುಷ್ಠಾನ ಮಾಡಲಾಗುತ್ತದೆ. ಈ ವರ್ಷ ಕಾವೇರಿ ಕುಡಿಯುವ ನೀರು ಎಲ್ಲರುಗೂ ಲಭ್ಯವಾಗಲಿದೆ.

12:12 PM 

ಬೊಮ್ಮಾಯಿಗೆ  ಸಿದ್ದು ಟಾಂಗ್

ಕಾಂಗ್ರೆಸ್’ನವರು ಕಿವಿ ಮೇಲೆ ಹೂವಿಟ್ಟುಕೊಳ್ಳುತ್ತೇನೆ ಎಂದರೆ ಬೇಡ ಎನ್ನುವುದಿಲ್ಲ, ಜನರ ಮೇಲೆ ಕಿವಿ ಮೇಲೆ ಹೂವಿಡುತ್ತಿದ್ದರು. ಈಗ ಜನರೇ ಕಾಂಗ್ರೆಸ್ ಕಿವಿ ಮೇಲೆ ಹೂವಿಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಬಜೆಟ್ ಮಂಡನೆ ವೇಳೆ ಅವರು, ಕಾಂಗ್ರೆಸ್’ಗೆ ಟಾಂಗ್ ನೀಡಿದರು. ಸಿಎಂ ಮಾತಿಗೆ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದು, ಇದೇನು ಬಜೆಟ್ ಭಾಷಣವೇ ಎಂದು ಅವರು ಕಿಡಿ ಕಾರಿದರು. 600 ಭರವಸೆಗಳಲ್ಲಿ 50 ಭರವಸೆಗಳನ್ನೂ ಈಡೇರಿಸಲು ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು. ಸಿಎಂ ಬಜೆಟ್ ಮಂಡನೆ ವೇಳೆ ಹೈಡ್ರಾಮಾ ನಡೆದಿದ್ದು, ಆಡಳಿತ- ವಿಪಕ್ಷಗಳ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. 

12:10 PM IST

ಈ ಬಾರಿ 70295 ಕೋಟಿ ರೂ ಸಾಲ 

ಈ ಬಾರಿ 70295 ಕೋಟಿ ರೂ ಸಾಲ ಮಾಡಲು ತಿರ್ಮಾನ…
ಇದೇ ವರ್ಷ 17997 ಕೋಟಿ ರೂ ಸಾಲ ಮರುಪಾವತಿಗೆ ನಿಗದಿ….
ಕೋರೋನಾ ಕಾಲದಲ್ಲಿ ರಾಜ್ಯದ ಜನರ ತಲಾ ಆದಾಯ 2.04 ಲಕ್ಷ ರೂ..
ಈ ವರ್ಷ ಜನರ ತಲಾ ಆದಾಯ – 3.32 ಕೋಟಿ ರೂ ಗಳಿಗೆ ಏರಿಕೆ..
ಶಿಶುಮರಣ ಮತ್ತು ತಾಯಿ‌ಮರಣದ ಪ್ರಮಾಣ ರಾಜ್ಯದಲ್ಲಿ ಗಣನೀಯ ಇಳಿಕೆ….

12:07 PM IST

ರಾಮನಗರದಲ್ಲಿ ರಾಮಮಂದಿರ

ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ರಾಮನಗರದ ರಾಮದೇವರ ಬೆಟ್ಟದಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಮಾಡುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆಯಾಗಿದೆ. ಅದರೊಂದಿಗೆ ರಾಜ್ಯದ ವಿವಿಧ ದೇವಸ್ಥಾನ ಹಾಗೂ ಮಠಗಳ ಜೀರ್ಣೋದ್ದಾರಕ್ಕೆ ಮುಂದಿನ 2 ವರ್ಷಗಳಲ್ಲಿ 1 ಸಾವಿರ ಕೋಟಿ ನೀಡುವುದಾಗಿ ಘೋಷಣೆಯಾಗಿದೆ.

12:05 PM ರೈತರ ಆರ್ಥಿಕ ಸ್ಥಿತಿ ಸುಧಾರಣೆ 

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 2023ನೇ ಆರ್ಥಿಕ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೃಷಿ ಕ್ಷೇತ್ರದ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ರೈತರಿಗೆ ವಿವಿಧ ಸಹಾಯಧನಗಳ ಘೋಷಣೆ ಜೊತೆಗೆ ಭೂ ಸಿರಿ ಎಂಬ ನೂತನ ಯೋಜನೆಯನ್ನು ಕೂಡ ಘೋಷಿಸಿದ್ದಾರೆ

11:54 AM ಆದಾಯ ಎಲ್ಲಿಂದ ಬರುತ್ತದೆ

11:49 AM   ಜೀವಸುಧೆ ತಪಸಣಾ ಶಿಬಿರ

6 ಹೊಸ ಇಎಸ್‌ಐ ಆಸ್ಪತ್ರೆ, ಮನೆ ಮನೆಗೆ ಆರೋಗ್ಯ ಹೆಸರಲ್ಲಿ ಹಳ್ಳಿಗಳಲ್ಲಿ ಆರೋಗ್ಯ ಶಿಬಿರ. ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳ ಸಂಖ್ಯೆ ಹೆಚ್ಚಳ. ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಯಾದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯನ್ನು ಈ ಸಲದ ಬಜೆಟ್‌ನಲ್ಲಿ ಸಿಎಂ ಘೋಷಿಸಿದ್ದಾರೆ. ಇದಲ್ಲದೆ ಕ್ಷಯ ರೋಗಿಗಳ ತಪಾಸಣೆಗೆ ಯಂತ್ರಗಳ ಘೋಷಣೆ. ಕ್ಯಾನ್ಸರ್‌ ರೋಗ ತಡೆಗೆ ಜೀವಸುಧೆ ಎಂಬ ತಪಾಸಣಾ ಶಿಬಿರ

11:46 AM  ಸ್ಮಾರ್ಟ್ ವರ್ಚುಯಲ್ ಕ್ಲಿನಿಕ್ ಸ್ಥಾಪನೆ

ಬೆಂಗಳೂರಿನಲ್ಲಿ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ದೊರಕಿಸುವುದು ಸರ್ಕಾರದ ಆದ್ಯತೆಯಾಗಿದೆ. ಈ ಉದ್ದೇಶಕ್ಕಾಗಿ 2022-23 ನೇ ಸಾಲಿನಲ್ಲಿ 243 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್ ವರ್ಚುಯಲ್ ಕ್ಲಿನಿಕ್‌ಗಳನ್ನು ಅನುಮೋದಿಸಲಾಗಿದೆ.

11:44 AM  ಜಲನಿಧಿ ಯೋಜನೆ

ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣಾ ಕಾಮಗಾರಿಗಳಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು. ನರೇಗಾ ಯೋಜನೆಯ ಸಮನ್ವಯದೊಂದಿಗೆ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹಿಸಲಾಗುವುದು.

11:43 AM  ಬಂಜಾರ ಅಕಾಡೆಮಿ  ಘೋಷಣೆ

ಕರ್ನಾಟಕದ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಬದ್ಧವಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಬಂಜಾರ ಸಂಸ್ಕೃತಿ ಮತ್ತು ಅಕಾಡೆಮಿಯನ್ನು ಹಾಗೂ ಯಕ್ಷರಂಗಾಯಣವನ್ನು ಸ್ಥಾಪಿಸಲಿದೆ.

11:42 AM ಭಾಷಾ ಬೆಳವಣಿಗೆಗೆ ಆದ್ಯತೆ

ಗಡಿನಾಡು ಪ್ರದೇಶದಲ್ಲಿ ಕನ್ನಡ ಭಾಷೆ, ಕಲೆ, ಶಿಕ್ಷಣ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಪ್ರಾಶಸ್ತ್ಯವನ್ನು ನೀಡುವುದಕ್ಕಾಗಿ ಹಾಗೂ ಗಡಿ ಪ್ರದೇಶಗಳ ರಸ್ತೆಗಳ ಹಾಗೂ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮುಖಾಂತರ 150 ಕೋಟಿ ರೂ. ಅನುದಾನ.

11:40 AM ಪ್ರವಾಸೋದ್ಯಮ

ನಂದಿ ಗಿರಿಧಾಮ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ, ನಂದಿಬೆಟ್ಟಕ್ಕೆ ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ರೋಪ್‌ ವೇ ನಿರ್ಮಾಣ, ಪ್ರವಾಸಿ ಗೈಡ್‌ಗಳ ಮಾಸಿಕ ಪ್ರೋತ್ಸಾಹ ಧನ 2 ರಿಂದ 5 ಸಾವಿರಕ್ಕೆ ಏರಿಕೆ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ರೂ. ಕೋಟಿ

11:36 AM  

‘ಮುಖ್ಯಮಂತ್ರಿ ವಿದ್ಯಾಶಕ್ತಿ’ ಪ್ರಾರಂಭ  

 ರಾಜ್ಯದ ಶಿಕ್ಷಣ ವಲಯದಲ್ಲಿ ಈ ದಿನ ಅವಿಸ್ಮರಣೀಯ ದಿನವಾಗಲಿದೆ. ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಅನುವು ಮಾಡಿಕೊಡುವ ದೃಷ್ಟಿಯಿಂದ ‘ಮುಖ್ಯಮಂತ್ರಿ ವಿದ್ಯಾಶಕ್ತಿ’ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ಇದರಡಿಯಲ್ಲಿ ಸರ್ಕಾರಿ ಪದವಿಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳು, ಅನುಕೂಲ ಪಡೆಯಲಿದ್ದಾರೆ.- ರಾಜ್ಯದಲ್ಲಿ ಈಗಾಗಲೇ 19 ಲಕ್ಷ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಸಾರ್ವಜನಿಕ ಬಸ್ ಸೇವೆಯನ್ನು ಅವಲಂಬಿಸಿರುತ್ತಾರೆ. ಇಂತಹ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವರ್ಷದಲ್ಲಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ 1,000 ಹೊಸ ಕಾರ್ಯಾಚರಣೆಗಳನ್ನು ಮಾಡಲು ‘ಮಕ್ಕಳ ಬಸ್ಸು’ ಎಂಬ ಯೋಜನೆಯನ್ನು ಪ್ರಾರಂಭಿಸಲಾಗುವುದು. ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.- ರಾಜ್ಯ ಸರ್ಕಾರವು ಶಾಲಾ ಕಾಲೇಜುಗಳಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸುವ ಮೂಲಕ ವಿದ್ಯಾರ್ಥಿಗಳಿಗೆ ಕಲಿಕಾ ವಾತಾವರಣ ಕಲ್ಪಿಸುವ ಉದ್ದೇಶ ಹೊಂದಿದೆ. ನಿಟ್ಟಿನಲ್ಲಿ ವಿವೇಕ ಯೋಜನೆಯಡಿಯಲ್ಲಿ 7,601 ಶಾಲೆಗಳ ಅಭಿವೃದ್ಧಿ.

11:27 AM ಮಹಿಳಾ ಸಬಲೀಕರಣಕ್ಕೆ ಮುಂದಾದ ಸರ್ಕಾರ

ರಾಜ್ಯದ ಮಹಿಳಾ ಕಾರ್ಮಿಕರಿಗೆ ತಲಾ 500 ರೂ. ಸಹಾಯಧನ ಹಾಗೂ ಉಚಿತ ಬಸ್‌ ಪಾಸ್‌ ನೀಡಲಾಗುವುದು. ಮತ್ತೊಂದೆಡೆ ಎಲ್ಲ ಶಾಲಾ- ಕಾಲೇಜು ವಿದ್ಯಾರ್ಥಿನಿಯರಿಗೂ ಉಚಿತ ಬಸ್‌ ಪಾಸ್‌ ನೀಡಲಾಗುವುದು.

11:21 AM  ಯುವಸ್ನೇಹಿ ಯೋಜನೆ

ಪದವಿ ಶಿಕ್ಷಣವನ್ನು ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಲು ‘ಯುವಸ್ನೇಹಿ’ ಎಂಬ ಹೊಸ ಯೋಜನೆಯಡಿ ತಲಾ 2,000 ರೂ. ಗಳ ಒಂದು ಈ ಬಾರಿಯ ಆರ್ಥಿಕ ನೆರವು

11:19 AM  ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ

ಶಿಕ್ಷಣ: 37,960 ಕೋಟಿ
ಜಲಸಂಪನ್ಮೂಲ: 22,854 ಕೋಟಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್: 20,494 ಕೋಟಿ
ನಗರಾಭಿವೃದ್ಧಿ: 17,938 ಕೋಟಿ
ಕಂದಾಯ: 15,943 ಕೋಟಿ
ಆರೋಗ್ಯ: 15,151 ಕೋಟಿ
ಒಳಾಡಳಿತ ಮತ್ತು ಸಾರಿಗೆ: 14509 ಕೋಟಿ
ಇಂಧನ: 13,803 ಕೋಟಿ
ಸಮಾಜ ಕಲ್ಯಾಣ: 11,163 ಕೋಟಿ
ಲೋಕೋಪಯೋಗಿ: 10,741 ಕೋಟಿ
ಕೃಷಿ ಮತ್ತು ತೋಟಗಾರಿಕೆ: 9,456 ಕೋಟಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ: 5,676 ಕೋಟಿ
ಆಹಾರ ಮತ್ತು ನಾಗರೀಕ ಸರಬರಾಜು: 4,600 ಕೋಟಿ
ವಸತಿ: 3,787 ಕೋಟಿ
ಇತರೆ: 1,16,968 ಕೋಟಿ

11:09 AM ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆ 

ಕೃಷಿ ಕ್ಷೇತ್ರದಲ್ಲಿ ನಮ್ಮ ಸರ್ಕಾರ ಹಲವು ಮಹತ್ವಪೂರ್ಣ ಕ್ರಮಗಳನ್ನು ಕೈಗೊಂಡಿದೆ. ತಂತ್ರಜ್ಞಾನ ಹಾಗೂ ವೈಜ್ಞಾನಿಕ ಪದ್ಧತಿ ಅಳವಡಿಕೆಯೊಂದಿಗೆ ರೈತರು ಮಾಹಿತಿಪೂರ್ಣ ನಿರ್ಧಾರ ಕೈಗೊಳ್ಳಲು ಪೂರಕ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಲಿದೆ. ಇದಲ್ಲದೆ, ಕೃಷಿಯನ್ನು ಲಾಭದಾಯಕವಾಗಿಸಲು ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆ ಮತ್ತು ರಫ್ತಿಗೆ ಒತ್ತು ನೀಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ಮೂಲಕ ರೈತರ ಆದಾಯದಲ್ಲಿ ಸ್ಥಿರತೆ ತರಲು ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.

11:07 AM ಕಳಸಾ ಬಂಡೂರಿಗೆ 80 ಕೋಟಿ ರೂ ಮೀಸಲು.

ನರೇಗಾ ಯೋಜನೆ – 1,000 ಕೋಟಿ

ಕಳಸಾ ಬಂಡೂರಿ – 80 ಕೋಟಿ ರೂ.
ಗಂಗಾ ಕಲ್ಯಾಣ್ 675 ಕೋಟಿ
ಮಹದಾಯಿ – 1,000 ಕೋಟಿ
ಬೆಂಗಳೂರು ಟ್ರಾಫಿಕ್ – 150 ಕೋಟಿ
ಅಂಜನಾದ್ರಿ ಬೆಟ್ಟ – 100 ಕೋಟಿ
ನೀರಾವರಿ ಕ್ಷೇತ್ರ – 25 ಸಾವಿರ ಕೋಟಿ
ಪ್ರಾಣಿ ಕಲ್ಯಾಣ ಮಂಡಳಿ – 5 ಕೋಟಿ ರೂ.
ಬಳ್ಳಾರಿ ಮೆಗಾ ಡೈರಿ – 100 ಕೋಟಿ ರೂ.
————-
ಬಸ್ ಖರೀದಿ – 500 ಕೋಟಿ 
ಸಾರಿಗೆ ಇಲಾಖೆ – 8,007 ಕೋಟಿ ರೂ
ಗಣಿ ಮತ್ತು ಭೂವಿಜ್ಞಾನ – 7,500 ಕೋಟಿ 
————–
ಒಟ್ಟು 6 ವಲಯವಾರು ವಿಂಗಡಣೆ
ಆಡಳಿತ ಸುಧಾರಣೆ ಸಾರ್ವಜನಿಕ ಸೇವೆಗಳು..
ಸಂಸ್ಕೃತಿ ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ..
ಬೆಂಗಳೂರು ಸಮಗ್ರ ಅಭಿವೃದ್ಧಿ..
ಆರ್ಥಿಕ ಅಭಿವೃದ್ಧಿ..
ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ..
ಕೃಷಿ ಮತ್ತು ಪೂರಕ ಚಟುವಟಿಕೆ ‌..
ಒಟ್ಟು ಬಜೆಟ್ ಗಾತ್ರ 309182 ಕೋಟಿ

11:05 AM  ಭುವನೇಶ್ವರಿ ಥೀಂ ಪಾರ್ಕ್

ಗ್ರಾಮ ಸಹಾಯಕರ ಗೌರವ ಧನ ಮಾಸಿಕ 13ರಿಂದ 14 ಸಾವಿರಕ್ಕೆ ಏರಿಕೆ
ಗ್ರಾಮ ಸಹಾಯಕರ ಹುದ್ದೆಗೆ ಜನಸೇವಕ ಎಂದು ಮರುನಾಮಕರಣ
ವನ್ಯಜೀವಿಗಳ ಪ್ರಾಣ ಹಾನಿ ಪರಿಹಾರ 7.5 ಲಕ್ಷದಿಂದ 15 ಲಕ್ಷ ರೂ.ಗೆ ಏರಿಕೆ
+++++++++
ಪದವಿ ಮುಗಿಸಿ ಉದ್ಯೋಗವಿಲ್ಲದ ಯುವಕರಿಗೆ ಯುವ ಸ್ನೇಹಿ ಯೋಜನೆ
ನಿರುದ್ಯೋಗಿ ಪದವೀಧರರಿಗೆ ಮಾಸಿಕ 2 ಸಾವಿರ ಆರ್ಥಿಕ ನೆರವು
+++++++
ಐಟಿಐ 3 ತಿಂಗಳ ತರಬೇತಿಗೆ 1,500 ರೂ. ಶಿಷ್ಯವೇತನ
ಐಟಿಐ ಅಪ್ರೆಂಟಿಸ್ ಕಾರ್ಯಕ್ರಮ ತಿಂಗಳಿಗೆ 1,500 ಶಿಷ್ಯವೇತನ
ಬದುಕುವ ದಾರಿ ಯೋಜನೆಯಡಿ ಹೊಸ ಯೋಜನೆ ಘೋಷಣೆ
+++++
ಗ್ರಾಮೀಣ ಸ್ವಯಂ ಉದ್ಯೋಗ ಮಾಡುವವರಿಗೆ ಪ್ರೋತ್ಸಾಹ ಧನ
ಒಂದು ಲಕ್ಷದಿಂದ 5 ಲಕ್ಷದವರೆಗೆ ಸಹಾಯಧನ, ಸುತ್ತುನಿಧಿ ಪ್ರೋತ್ಸಾಹ
++++++++
ಬೆಂಗಳೂರು ನಗರದಲ್ಲಿ ಶ್ರೀ ಭುವನೇಶ್ವರಿ ಥೀಂ ಪಾರ್ಕ್
+++++++
ಬೆಂಗಳೂರು ನಗರದಲ್ಲಿ 250  ಶಿ ಟಾಯ್ಲೆಟ್ ನಿರ್ಮಾಣಕ್ಕೆ 50 ಕೋಟಿ
ಫೀಡಿಂಗ್ ರೂಂ, ಮೊಬೈಲ್ ಚಾರ್ಜಿಂಗ್, ತುರ್ತು ಎಸ್ಒಸಿ ಸೌಲಭ್ಯ ಒದಗಿಸಲು ಆದ್ಯತೆ.
___
ಬೆಂಗಳೂರಿಗೆ 243 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್
27 ಸ್ಮಾರ್ಟ್ ವರ್ಚುವಲ್ ಕ್ಲಿನಿಕ್
50 ಡಯಾಲಿಸಿಸ್ ಹಾಸಿಗೆ, 300 ಹಾಸಿಗೆಗಳ ಆಸ್ಪತ್ರೆ
ಬೆಂಗಳೂರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 180 ಕೋಟಿ
+++++++++
ಬಿಬಿಎಂಪಿ ವ್ಯಾಪ್ತಿಯ 110 ಗ್ರಾಮಗಳಿಗೆ ಕುಡಿಯುವ ನೀರು : 200 ಕೋಟಿ
ಹೊನ್ನಾವರದಲ್ಲಿ ಚೆನ್ನೈಭೈರಾದೇವಿ ಸ್ಮಾರಕ ನಿರ್ಮಾಣ
ಕರ್ನಾಟಕದ ಗೋಲ್ ಗುಂಬಜ್, 
ಅಬಕಾರಿ ತೆರಿಗೆ : ಜೂನ್ ಒಳಗೆ ಮುಂಚಿತವಾಗಿ ಪಾವತಿಸಿದ್ದರೆ ಬಡ್ಡಿ, ದಂಡ ವಿನಾಯಿತಿ
ವೃತ್ತಿ ತೆರಿಗೆ ವಿನಾಯಿತಿ : ಸಂಬಳದಾರರಿಗೆ ಮಾಸಿಕ 15ರಿಂದ 25 ಸಾವಿರದವರೆಗೆ ಏರಿಕೆ
ಟಯರ್ 2 ನಗರಗಳಲ್ಲಿ ಮಿನಿ ಥಿಯೇಟರ್ ನಿರ್ಮಾಣಕ್ಕೆ ಪ್ರೋತ್ಸಾಹ ಧನ

11:03 AM ಕಾಡುಪ್ರಾಣಿ ದಾಳಿ : ಪರಿಹಾರ ಹೆಚ್ಚಳ

ಕಾಡುಪ್ರಾಣಿ ದಾಳಿಯಿಂದ ಪ್ರಾಣ ಕೊಳೆದು ಕೊಂಡವರಿಗೆ 7.50 ಲಕ್ಷದಿಂದ 15 ಲಕ್ಷಕ್ಕೆ ಪರಿಹಾರ  ಹೆಚ್ಚಳ

ಬೆಳೆಹಾನಿಗೆ ನೀಡುವ ಪರಿಹಾರ ಧನವೂ ದ್ವಿಗುಣ, ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಚಿರತೆ ಹಾವಳಿ ತಡೆಯಲು ಸಿಬ್ಬಂದಿ ನೇಮಕ
ಚಿರತೆ ಹಾವಳಿ ತಡೆಗೆ 199 ಸಿಬ್ಬಂದಿಗಳ ನೇಮಕ
ಕಲಬುರಗಿ ಜಿಲ್ಲೆಯ ಮಳಖೇಡ ಕೋಟೆ ಸಂಸ್ಕರಣೆಗೆ 20 ಕೋಟಿ ರೂ. ಅನುದಾನ
ರಕ್ಕಸಗಿ, ತಂಗಡಗಿ, ತಾಳಿಕೋಟೆ ಐತಿಹಾಸಿಕ ತಾಣಗಳ ಅಭಿವೃದ್ಧಿ
ಚಾಮುಂಡಿ ಬೆಟ್ಟದಲ್ಲಿ 10 ಕೋಟಿ ವೆಚ್ಚದಲ್ಲಿ ಮ್ಯೂಸಿಯಂ, ಕಲಾ ಗ್ಯಾಲರಿ ನಿರ್ಮಾಣ
ಹೊನ್ನಾವರದಲ್ಲಿ ಚನ್ನಭೈರಾದೇವಿ ಸ್ಮಾರಕ ಪಾರ್ಕ್ ನಿರ್ಮಾಣ
ರಾಮನಗರ ಜಿಲ್ಲೆ ಮಂಚನಬೆಲೆ ಡ್ಯಾಂ ಬಳಿ 10 ಎಕರೆಯಲ್ಲಿ 10 ಕೋಟಿ ವೆಚ್ಚದಲ್ಲಿ ರೆಸಾರ್ಟ್ ನಿರ್ಮಾಣ.

11:02 AM  ‘ನಮ್ಮ ನೆಲೆ’ ಹೊಸ ಯೋಜನೆ

60 ತಾಲೂಕುಗಳಲ್ಲಿ ತಲಾ ಒಂದು ಪದವಿ ಪೂರ್ವ ಕಾಲೇಜು ಅಭಿವೃದ್ಧಿಗೆ ಕ್ರಮ

ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯಗಳಲ್ಲಿ Dormitory ನಿರ್ಮಾಣ
47 ವಸತಿ ಶಾಲೆಗಳ ದುರಸ್ತಿ ಮತ್ತು ಸ್ಮಾರ್ಟ್ ಕ್ಲಾಸ್‌ರೂಮ್ ಗಳ ಅಭಿವೃದ್ಧಿ.
73 ಕರ್ನಾಟಕ ಪಬ್ಲಿಕ್ ಶಾಲೆಗಳು, 50 ಆದರ್ಶ ವಿದ್ಯಾಲಯಗಳಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ‘ಸೃಷ್ಟಿ’ ಟಿಂಕರಿಂಗ್ ಲ್ಯಾಬ್ ಸ್ಥಾಪನೆ
23 ತಾಲೂಕುಗಳಲ್ಲಿ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆ ಆರಂಭ
46 ಶಾಲೆಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ 
ವಿದೇಶದಲ್ಲಿ ವ್ಯಾಸಂಗ ಮಾಡುವ ಮುಸ್ಲಿಂ ವಿದ್ಯಾರ್ಥಿಗಳಿಗೆ 20 ಲಕ್ಷ ರೂ. ಸಾಲ
ಶೂನ್ಯ ಬಡ್ಡಿ ದರದಲ್ಲಿ 20 ಲಕ್ಷ ರೂವರೆಗೂ ಸಾಲ
ಎಸ್ಸಿ/ ಎಸ್ಟಿ ಗುತ್ತಿಗೆದಾರರಿಗೆ ಕಾಮಗಾರಿ ಮೀಸಲಾತಿ ಹೆಚ್ಚಳ
50 ಲಕ್ಷದಿಂದ 1 ಕೋಟಿ ರೂ.ಗೆ ಹೆಚ್ಚಳ
ಐಐಟಿ/ ಐಐಎಂ, ಐಐಎಸ್ಸಿ/ ಎನ್ಐಟಿ ಸಂಸ್ಥೆಗಳಿಗೆ ಪ್ರವೇಶ ಪಡೆಯುವ 
ಎಸ್ಸಿ/ ಎಸ್ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ 4 ಲಕ್ಷಕ್ಕೆ ಏರಿಕೆ
ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳ ಮಾಸಿಕ ಭೋಜನ ವೆಚ್ಚ 150 ರೂ.ಗೆ ಏರಿಕೆ

11:01 AM 

ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಜುಯಿಟಿ ಕೊಡಲು ಅನುದಾನ ಮೀಸಲು

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಯನ್ನು ಗುರುತಿಸಿರುವ ರಾಜ್ಯ ಸರ್ಕಾರವು 2023-24ನೇ ಸಾಲಿನಿಂದ ಅವರಿಗೆ ಉಪಧನವನ್ನು (Gratuity) ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 40 ಕೋಟಿ ರೂ. ಗಳ ಅನುದಾನ ಮೀಸಲಿಡಲಾಗಿದೆ.25 ವರ್ಷಗಳ ಅರ್ಹತಾ ಸೇವೆಯನ್ನು ಪೂರ್ಣಗೊಳಿಸಿದ ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ 50,000 ರೂ. ಗಳು ಹಾಗೂ ಅಂಗನವಾಡಿ ಸಹಾಯಕಿಯರಿಗೆ 30,000 ರೂ. ಗಳ ಆರ್ಥಿಕ ಭದ್ರತೆಯನ್ನು ಒಂದು ಬಾರಿಗೆ ನೀಡಿ ಸ್ವಯಂ ನಿವೃತ್ತಿಗೆ ಅವಕಾಶ ಕಲ್ಪಿಸಲಾಗುವುದು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ವಿಭಜಿಸಿ ಮಕ್ಕಳ ಪೌಷ್ಟಿಕತೆ ಕುರಿತು ಒಂದು ಪ್ರತ್ಯೇಕ ಇಲಾಖೆ ಮತ್ತು ಮಹಿಳಾ ಸಬಲೀಕರಣ ಇಲಾಖೆಯನ್ನು ರೂಪಿಸಲು ನಿರ್ಧರಿಸಿದೆ.ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮಹಿಳೆಯರು ದುಡಿಮೆಯಲ್ಲಿ ತೊಡಗಿಸಿಕೊಳ್ಳಲು ಉತ್ತಮ ಶಿಶುಪಾಲನಾ ಸೌಲಭ್ಯಗಳು ಅಗತ್ಯವಾಗಿದೆ. ಇದಕ್ಕಾಗಿ 2022-23ನೇ ಸಾಲಿನ ಆಯವ್ಯಯದಲ್ಲಿ ಪ್ರಸ್ತಾಪಿಸಿದ್ದ ಕಾರ್ಯಕ್ರಮವನ್ನು ವಿಸ್ತರಿಸಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗಾಗಿ ನಗರ ಪ್ರದೇಶದಲ್ಲಿ 4,000 ಶಿಶುಪಾಲನಾ ಕೇಂದ್ರಗಳು ಮತ್ತು ಗ್ರಾಮೀಣ ಭಾಗದಲ್ಲಿ ನರೇಗಾ

10:59 AM   ವಲಯವಾರು ವಿಂಗಡಣೆ

ಆಡಳಿತ ಸುಧಾರಣೆ ಸಾರ್ವಜನಿಕ ಸೇವೆಗಳು..
ಸಂಸ್ಕೃತಿ ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ..
ಬೆಂಗಳೂರು ಸಮಗ್ರ ಅಭಿವೃದ್ಧಿ..
ಆರ್ಥಿಕ ಅಭಿವೃದ್ಧಿ..
ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ..
ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಆದ್ಯತೆ.

10:58 AM  

ಶಕ್ತಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಿದೆ. ಇದರಡಿಯಲ್ಲಿ: ಕುಟುಂಬ ನಿರ್ವಹಣೆಯೊಂದಿಗೆ ಮನೆಯ ಆರ್ಥಿಕ ಸುಧಾರಣೆಗಾಗಿ ಶ್ರಮಿಸುವ ಮಹಿಳಾ ಕೃಷಿ ಕಾರ್ಮಿಕರ ಕುರಿತು ನಮ್ಮ ಸರ್ಕಾರ ಹೊಂದಿರುವ ಕಾಳಜಿಯ ಪ್ರತೀಕವಾಗಿ, ಶ್ರಮ ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಯೋಜನೆಯಡಿ ರಾಜ್ಯ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿ.ಬಿ.ಟಿ. ಮೂಲಕ ನೀಡಲಿದೆ. Industry ಪ್ರಾರಂಭಿಸಲು ಗೃಹಿಣಿಯರಿಗೆ ಮನೆಯಲ್ಲಿಯೇ ಲಾಭದಾಯಕ ಉದ್ಯಮ (Home based) ಅನುವಾಗುವಂತೆ ಪ್ರಸಕ್ತ ವರ್ಷದಲ್ಲಿ ಒಂದು ಲಕ್ಷ ಮಹಿಳೆಯರಿಗೆ ಉಚಿತವಾಗಿ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗುವುದು.

* ಬಾಲಕಿಯರು ಮತ್ತು ಮಹಿಳೆಯರ ಸಬಲೀಕರಣದ ಕುರಿತು life cycle approach ಹೊಂದಲು ನಿರ್ಧರಿಸಲಾಗಿದೆ. ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಯಲು ಆರೋಗ್ಯ ಪುಷ್ಟಿ’ ಯೋಜನೆಯಡಿ ಮಾತೃಪೂರ್ಣ ಯೋಜನೆಯಂತೆ ಅರ್ಹ ವಿವಾಹಿತ ಮಹಿಳೆಯರಿಗೆ ಅಂಗನವಾಡಿಗಳಲ್ಲಿ ಬಿಸಿಯೂಟ ಮತ್ತು Prophylactic IFA ಮಾತ್ರೆಗಳನ್ನು ಜೀವಿತಾವಧಿಯಲ್ಲಿ ಒಂದು ಬಾರಿ ಗರಿಷ್ಠ 6 ತಿಂಗಳ ಅವಧಿಗೆ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಒದಗಿಸಲಾಗುವುದು. ಈ ಯೋಜನೆಯಡಿ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಒತ್ತು ನೀಡಲಾಗುವುದು.

10:55 AM ಮಹಿಳೆಯರ ಆರ್ಥಿಕ  ಸ್ವಾವಲಂಬನೆಗೆ ಒತ್ತು

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದನ್ನು ಉತ್ತೇಜಿಸಲು ಸರ್ಕಾರ ಒತ್ತು ನೀಡಿದೆ. ಸ್ವಸಹಾಯ ಗುಂಪುಗಳಿಗೆ ಪ್ರಮಾಣಿತ ಉತ್ಪನ್ನಗಳನ್ನು ತಯಾರಿಸಲು ನೆರವಾಗುವ ಸ್ತ್ರೀ ಸಾಮರ್ಥ್ಯ ಯೋಜನೆಯಡಿ 50 ಸಾವಿರ ಸ್ವಸಹಾಯ ಗುಂಪುಗಳಿಗೆ ತಲಾ ಒಂದು ಲಕ್ಷ ರೂ. ನಂತೆ ಒಟ್ಟು 500 ಕೋಟಿ ರೂ. ಗಳ ಸಮುದಾಯ ಬಂಡವಾಳ ನಿಧಿ ನೀಡಲು ಕ್ರಮ ವಹಿಸಲಾಗುತ್ತಿದೆ. ವಿವಿಧ ಸ್ವಯಂ ಉದ್ಯೋಗ ಯೋಜನೆಗಳಡಿ 7,239 ಸ್ವಸಹಾಯ ಸಂಘಗಳಿಗೆ 108 ಕೋಟಿ ರೂ. ಸಮುದಾಯ ಬಂಡವಾಳ ನಿಧಿ ಹಾಗೂ 5.68 ಲಕ್ಷ ಸ್ವಸಹಾಯ ಗುಂಪುಗಳಿಗೆ ಬ್ಯಾಂಕ್ ಸಂಪರ್ಕದಡಿ 11,391 ಕೋಟಿ ರೂ. ಸಾಲವನ್ನು ಒದಗಿಸಲಾಗಿದೆ. ವೈಯಕ್ತಿಕ ಮತ್ತು ಗುಂಪುಗಳನ್ನೊಳಗೊಂಡ 9,688 ಫಲಾನುಭವಿಗಳಿಗೆ ಕಿರು ಉದ್ದಿಮೆ ಪ್ರಾರಂಭಿಸಲು ಬ್ಯಾಂಕ್‌ ಮೂಲಕ ಸಾಲ ಸೌಲಭ್ಯವನ್ನು ಒದಗಿಸಲಾಗಿದೆ.

10:53 AM ಕ್ಯಾನ್ಸರ್, ಕಿಡ್ನಿ ಸಮಸ್ಯೆಗೆ  ಔಷಧಿ

ಕೋಟಿ ರೂ. ವೆಚ್ಚದಲ್ಲಿ ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿಗಳಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಮುಂದುವರೆದು, ಪ್ರಸಕ್ತ ವರ್ಷದಲ್ಲಿ ರಾಯಚೂರಿನಲ್ಲಿ AIIMS ಮಾದರಿಯ ಆಸ್ಪತ್ರೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು.
ಬೆಂಗಳೂರು, ಹುಬ್ಬಳ್ಳಿ, ಮೈಸೂರು ಮತ್ತು ಕಲಬುರಗಿಯ 4 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ IVF ಕ್ಲಿನಿಕ್‌ಗಳನ್ನು 6 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣ ಸ್ವಯಂಚಾಲಿತ ಮತ್ತು ಕೇಂದ್ರೀಕೃತ ರಕ್ತನಿಧಿ ನಿರ್ವಹಣಾ ವ್ಯವಸ್ಥೆಯನ್ನು ಸ್ಥಾಪಿಸಲಾಗುವುದು.
ಬೆಂಗಳೂರಿನಲ್ಲಿ ದೇಶದ ಪ್ರಪ್ರಥಮ Gastroenterology ಮತ್ತು ಮರುಜೋಡಣೆಗೆ ಸಮರ್ಪಿತವಾದ ಸರ್ಕಾರಿ Institute of Gastroenterology and Organ Transplant ಕಾರ್ಯನಿರ್ವಹಿಸುತ್ತಿದೆ. ಜೀವನ ಸಾರ್ಥಕತೆ ಸಂಸ್ಥೆಯ ಮೂಲಕ 151 ದೇಹಗಳನ್ನು ಸಂಗ್ರಹಿಸಿದ್ದು, 503 ರೋಗಿಗಳಿಗೆ ಸಹಾಯವಾಗಿರುತ್ತದೆ. 

10:52 AM ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ 

ಕಾರವಾರದಲ್ಲಿ ಪ್ರಗತಿಯಲ್ಲಿರುವ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳ ನಿರ್ಮಾಣವನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು. ಬೆಂಗಳೂರಿನ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ.

ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉನ್ನತ ತಂತ್ರಜ್ಞಾನ ಆಧಾರಿತ ಹೈಟೆಕ್ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಹೈಪರ್ OF CHOKE B2, CADCAM, Cone Beam, CT scan ದಂತ ಚಿಕಿತ್ಸೆಗೆ ಸಂಬಂಧಿಸಿದಂತೆ Piezosurgery ಮುಂತಾದ ಹೈಟೆಕ್ ಚಿಕಿತ್ಸಾ ಸೌಲಭ್ಯಗಳನ್ನು ವೈದ್ಯಕೀಯ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತಿದೆ. ಜೊತೆಗೆ ಮಾನವ ಹಾಲು ಬ್ಯಾಂಕ್‌ ಮತ್ತು ಚರ್ಮ ಬ್ಯಾಂಕ್, ಕಿಮೋಥೆರಪಿ Infusion ಕೇಂದ್ರಗಳನ್ನು ಹಾಗೂ ಜಿನೋಮಿಕ್ ಸೀಕ್ವೆನ್ಸಿಂಗ್ ಲ್ಯಾಬ್ ಗಳನ್ನು ಸ್ಥಾಪಿಸಲಾಗಿದೆ.

– ಸಾರ್ವಜನಿಕರಿಗೆ ದ್ವಿತೀಯ ಹಾಗೂ ತೃತೀಯ ಆರೈಕೆ ಸೇವೆಗಳನ್ನು ಒದಗಿಸಲು 2022-23ನೇ ಸಾಲಿನಲ್ಲಿ ಶ್ರೀ ಜಯದೇವ ಸಂಸ್ಥೆಯ ಅಡಿಯಲ್ಲಿ 263 ಕೋಟಿ ರೂ. ವೆಚ್ಚದಲ್ಲಿ, ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮರ್ಥ್ಯ ಹಾಗೂ ಹುಬ್ಬಳ್ಳಿಯಲ್ಲಿ 430 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಚಿಕಿತ್ಸಾ ಆಸ್ಪತ್ರೆಗಳ ಆರಂಭ.

10:49 AM   ಸೇವಾಲಾಲ್ ಜನ್ಮಸ್ಥಳದಲ್ಲಿ ಅಭಿವೃದ್ಧಿ

ಸಂತ ಸೇವಾಲಾಲ್ ಜನ್ಮಸ್ಥಳದಲ್ಲಿ ಪ್ರವಾಸಿ ಸೌಲಭ್ಯಕ್ಕೆ 5 ಕೋಟಿ ರೂ. 

ಷಹಾಜಿ ಮಹಾರಾಜ್ ಸಮಾಧಿ ಸ್ಥಳದ ಅಭಿವೃದ್ಧಿ 5 ಕೋಟಿ ರೂ. 
ದಾವಣಗೆರೆ ಜಿಲ್ಲೆ ಚನ್ನಗಿರಿ ತಾ. ಹೊದಿಗೆರೆಯಲ್ಲಿ ಸಮಾಧಿ ಅಭಿವೃದ್ಧಿ
ಹಾವೇರಿ ಜಿಲ್ಲೆ ಬಂಕಾರಪುದ ನಗರವೇಶ್ವರ ದೇವಾಲಯದ ಅಭಿವೃದ್ಧಿ

ಅಂಜನಾದ್ರಿ ಅಭಿವೃದ್ಧಿಗೂ ಆದ್ಯತೆ :ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಮೂಲಸೌಲಭ್ಯಕ್ಕೆ 100 ಕೋಟಿ ರೂ. ಅನುದಾನ
ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾದ C.R.Z ಮಾನದಂಡಗಳನ್ನು ಸಡಿಲ
ಮಂತ್ರಾಲಯದ ‘ಪ್ರಸಾದ್’ ಯೋಜನೆ ಅಡಿಯಲ್ಲಿ ಚಾಮುಂಡಿಬೆಟ್ಟ ಅಭಿವೃದ್ಧಿ
ಸ್ವದೇಶ್‌ ದರ್ಶನ್ 2.0 ಅಡಿಯಲ್ಲಿ ಹಂಪಿಯ ಸ್ಮಾರಕ ಅಭಿವೃದ್ಧಿ ಮತ್ತು ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ
24 ಸಾವಿರ ಪೌರಕಾರ್ಮಿಕರ ನೇರ ನೇಮಕಾತಿಗೆ ನಿರ್ಧಾರ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಭಜನೆ
ಮಕ್ಕಳ ಪೌಷ್ಟಿಕತೆಗೆ ಪ್ರತ್ಯೇಕ ಇಲಾಖೆ ರಚನೆ
ತುಮಕೂರಿನಲ್ಲಿ ತೋಟಗಾರಿಕೆ ವಿಶ್ವವಿದ್ಯಾಲಯ

10:47 AM  ರಾಮನಗರದಲ್ಲಿ ರಾಮ ಮಂದಿರ ಸ್ಥಾಪನೆ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತವರು ಜಿಲ್ಲೆ ರಾಮನಗರದಲ್ಲಿ ರಾಮ ಮಂದಿರ ಸ್ಥಾಪಸುವುದಾಗಿ ಘೋಷಿಸಿದ ಬೊಮ್ಮಾಯಿ. ಆ ಮೂಲಕ ಸದಾ ಅಲ್ಪಸಂಖ್ಯಾತರ ಓಲೈಕೆಗೆ ಯತ್ನಿಸುವ ಜೆಡಿಎಸ್‌ಗೆ ಟಾಂಗ್ ನೀಡಿದ ಸಿಎಂ.

10:45 AM  ಸಿಆರ್‌ ಜಡ್‌ ಸಡಿಲಿಕೆ 

 ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾದ CRZ ಮಾನದಂಡಗಳನ್ನು ಸಡಿಲಗೊಳಿಸುವುದಕ್ಕೆ ಕೇಂದ್ರ ಸರ್ಕಾರವು ಒಪ್ಪಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ವಲಯ ನಿರ್ವಹಣೆ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಧಾರ್ಮಿಕ, ಸಾಹಸ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರೂಪುರೇಷೆಗಳನ್ನು ತಯಾರಿಸಲಾಗುವುದು.

ಮಂತ್ರಾಲಯದ ‘ಪ್ರಸಾದ್’

ಕೇಂದ್ರ ಪ್ರವಾಸೋದ್ಯಮ ಯೋಜನೆಯಡಿ ಮೈಸೂರು ನಗರದ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಹಾಗೂ ಸ್ವದೇಶ್‌ ದರ್ಶನ್ 2.0 ಅಡಿಯಲ್ಲಿ ಹಂಪಿಯ ಸ್ಮಾರಕ ಅಭಿವೃದ್ಧಿ ಮತ್ತು ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ

24 ಸಾವಿರ ಪೌರಕಾರ್ಮಿಕರ ನೇರ ನೇಮಕಾತಿಗೆ ನಿರ್ಧಾರ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಭಜನೆ
ಮಕ್ಕಳ ಪೌಷ್ಟಿಕತೆಗೆ ಪ್ರತ್ಯೇಕ ಇಲಾಖೆ ರಚನೆ
ತುಮಕೂರಿನಲ್ಲಿ  ತೋಟಗಾರಿಕೆ ವಿಶ್ವವಿದ್ಯಾಲಯ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿರಿಗೆ ಬಂಪರ್
ಗ್ರಾಚುಯಿಟಿ ನೀಡಲು 40 ಕೋಟಿ ರೂ. ಅನುದಾನ
20 ವರ್ಷ ಸೇವೆ ಪೂರೈಸಿ, ಮಾರಣಾಂತಿಕ ಕಾಯಿಲೆಯಿಂದ ಬಳಲುವ ಕಾರ್ಯಕರ್ತೆರಿಗೆ 50 ಸಾವಿರ ರೂ. ಸಹಾಯಧನ
ಸಹಾಯಕರಿಯರಿಗೆ 30 ಸಾವಿರ ರೂ.  ಸಹಾಯಧನ
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿರಿಗೆ ಸ್ವಯಂ ನಿವೃತ್ತಿಗೆ ಅವಕಾಶ

ಮೈಸೂರು, ಬೆಳಗಾವಿ ಹುಬ್ಬಳ್ಳಿ-ಧಾರವಾಡ
ಕಲಬುರಗಿ, ಮಂಗಳೂರಿನಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರತ್ಯೇಕ ಹಾಸ್ಟೆಲ್
ತಲಾ 1000 ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ

10:44 AM 

– ವಿಜ್ಞಾನ ಮತ್ತು ತಂತ್ರಜ್ಞಾನದ ವೃತ್ತಿಪರ ಕೋರ್ಸ್‌ಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದಕ್ಕೆ ರಾಜ್ಯದಲ್ಲಿ 100 ಆಯ್ದ ಪದವಿ ಕಾಲೇಜುಗಳಲ್ಲಿ ಪ್ರೊ, ಸಿ.ಎನ್.ಆರ್. ರಾವ್ ವಿಜ್ಞಾನ ಕಾರ್ಯಕ್ರಮದಡಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲಾಗುವುದು.

– ‘ಹಳ್ಳಿ ಮುತ್ತು’ ಎಂಬ ಯೋಜನೆಯಡಿ ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಾಲಾ ಶಿಕ್ಷಣವನ್ನು ಪೂರೈಸುವ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಅವರು CET ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಭರಿಸಲಾಗುವುದು.

– ಸಾರ್ವಜನಿಕ ವಿಶ್ವವಿದ್ಯಾಲಯಗಳ ಆಡಳಿತ ವ್ಯವಸ್ಥೆಯನ್ನು ಉತ್ತಮ ಪಡಿಸಲು 10 ಸುಶಾಸನ ಸೂಚ್ಯಂಕಗಳನ್ನು ರಚಿಸಲಾಗಿದೆ. ಇದರನ್ವಯ ಅತ್ಯುತ್ತಮ ಸಾಧನೆ ಮಾಡುವ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷ ರೂ. ಗಳಂತೆ ಪ್ರೋತ್ಸಾಹಧನ ನೀಡಲಾಗುವುದು.

– ಬೆಂಗಳೂರು ನಗರದ ಕೇಂದ್ರ ಭಾಗದ 5 ಕಿ.ಮೀ. ವ್ಯಾಪ್ತಿಯೊಳಗಿರುವ ಪಾರಂಪರಿಕ ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಹೊಂದಿರುವ ಪ್ರದೇಶವನ್ನು ಪಾರಂಪರಿಕ ಮತ್ತು ಶೈಕ್ಷಣಿಕ ಜಿಲ್ಲೆಯಾಗಿ ಘೋಷಿಸುವ ನಿಟ್ಟಿನಲ್ಲಿ ಕಾರ್ಯಸಾಧ್ಯತೆ ಅಧ್ಯಯನ ಮಾಡಲಾಗುವುದು.

10:42 AM  ವಿದ್ಯಾರ್ಥಿಗಳಿಗೆ ವಿಶೇಷ ಹಾಸ್ಟೆಲ್

ಮೈಸೂರು, ಬೆಳಗಾವಿ ಹುಬ್ಬಳ್ಳಿ-ಧಾರವಾಡ

ಕಲಬುರಗಿ, ಮಂಗಳೂರಿನಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರತ್ಯೇಕ ಹಾಸ್ಟೆಲ್
ತಲಾ 1000 ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ

10:41 AM 

ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಮಾಸಾಶನ ಹೆಚ್ಚಳ, ಶ್ವಾನ ಪ್ರೇಮ ತೋರಿದ ಸಿಎಂ

ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಮಾಸಾಶನ ಹೆಚ್ಚಳ
ಮಾಸಾಶನ 3 ಸಾವಿರ ದಿಂದ 10 ಸಾವಿರ ರೂ. ಏರಿಕೆ
ರಾಜೀವ್ ವಸತಿ ನಿಗಮದಿಂದ ವಸತಿ ಸೌಲಭ್ಯ
ಆ್ಯಸಿಡ್ ಸಂತ್ರಸ್ತೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ

ಕಾಂಗ್ರೆಸ್ ಗೃಹ ಲಕ್ಷ್ಮೀ ಯೋಜನೆಗೆ ಬಿಜೆಪಿ ಠಕ್ಕರ್
ಮಹಿಳೆಯರಿಗಾಗಿ ‘ಗೃಹಿಣಿ ಶಕ್ತಿ’ ಯೋಜನೆ ಘೋಷಣೆ
ಗೃಹ ಲಕ್ಷ್ಮೀಯರಿಗೆ ಬಂಪರ್ ಕೊಡುಗೆ..!

ಪ್ರಾಣಿಗಳ ಹಿಂಸೆ ತಡೆಯಲು- ಪ್ರಾಣಿ ಕಲ್ಯಾಣ ಮಂಡಳಿಗೆ 5 ಕೋಟಿ ರೂ. ಅನುದಾನ 
ನೀಡಲಾಗುವುದು. ಮಂಡಳಿಯ ವತಿಯಿಂದ ಬೆಂಗಳೂರಿನಲ್ಲಿ ನಿರ್ಲಕ್ಷಿತ ಪ್ರಾಣಿಗಳ ಸೂಕ್ತ ಚಿಕಿತ್ಸೆಗಾಗಿ ಸಂಚಾರಿ ಚಿಕಿತ್ಸಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು.

– ರಾಷ್ಟ್ರೀಯ ಪ್ರಾಣಿ ತಳಿ ಸಂಪನ್ಮೂಲ ಬ್ಯೂರೋದಿಂದ ಭಾರತೀಯ ದೇಶಿ ಶ್ವಾನ ತಳಿ ಎಂದು ಮಾನ್ಯತೆ ಪಡೆದ ಮುಧೋಳ ಹೌಂಡ್ ಶ್ವಾನ ತಳಿಯ ಅಭಿವೃದ್ಧಿಗಾಗಿ 5 ಕೋಟಿ ರೂ. ಅನುದಾನ ನೀಡಲಾಗುವುದು.

-ಬೀದಿನಾಯಿಗಳ ಆರೈಕೆ ಮತ್ತು ಪೋಷಣೆಗಾಗಿ ಸಾರ್ವಜನಿಕರು ದತ್ತು ತೆಗೆದುಕೊಳ್ಳಲು ಒಂದು ಆನ್-ಲೈನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುವುದು. ಇದರಿಂದ ಆಸಕ್ತ ಶ್ವಾನ ಪ್ರೇಮಿಗಳು ತಮ್ಮ ಹೆಸರು ನೋಂದಾಯಿಸಿಕೊಂಡು ದತ್ತು ಪಡೆಯಲು ಅವಕಾಶ ಕಲ್ಪಿಸಿದಂತಾಗುತ್ತದೆ.

– 2022-23ನೇ ಸಾಲಿನಲ್ಲಿ ನಮ್ಮ ಕರ್ನಾಟಕ ರಾಜ್ಯವನ್ನು ಅತ್ಯುತ್ತಮ ಕರಾವಳಿ ರಾಜ್ಯವೆಂದು ಕೇಂದ್ರ ಸರ್ಕಾರವು

ಎಸ್ಸಿ/ಎಸ್ಟಿ ಮನೆ ನಿರ್ಮಾಣದ ಅನುದಾನ ಹೆಚ್ಚಳ
1.75 ಲಕ್ಷದಿಂದ 2 ಲಕ್ಷರೂ.ಗೆ ಏರಿಕೆ
ಎಸ್ಸಿ/ಎಸ್ಟಿ 133 ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವ್ಯಾಸಂಗಕ್ಕೆ ಧನಸಹಾಯ
ಎಸ್ಸಿ/ಎಸ್ಟಿ/ ಒಬಿಸಿ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ತರಬೇತಿ
ಮೆಟ್ರಿಕ್ ನಂತರದ ವಸತಿ ಶಾಲೆಗಳಲ್ಲಿ 30 ಸಾವಿರ ಹೆಚ್ಚುವರಿ ಸೀಟ್
ಜಮೀನಿನಲ್ಲಿ ಆನಧಿಕೃತವಾಗಿ ಸಾಗುವಳಿ ಸಕ್ರಮದ ಅವಧಿ
ಒಂದು ವರ್ಷದ ಅವಧಿಯವರೆಗೆ ವಿಸ್ತರಣೆ

10:40 AM   KIT ಉನ್ನತೀಕರಣಕ್ಕೆ ಹೆಚ್ಚಿನ ಒತ್ತು

ಕಳೆದ ಆಯವ್ಯಯದಲ್ಲಿ ಘೋಷಿಸಿದಂತೆ ಮುಂದಿನ 5 ವರ್ಷಗಳಲ್ಲಿ ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಗಳಾಗಿ ಉನ್ನತೀಕರಿಸಲು ಬೆಂಗಳೂರು, ಹಾವೇರಿ, ಹಾಸನ, ಕೆ.ಆರ್.ಪೇಟೆ, ತಳ್ಳಲ್, ರಾಮನಗರ ಹಾಗೂ ಕಾರವಾರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಗುರುತಿಸಲಾಗಿದೆ. ಪ್ರೊ. ಸಡಗೋಪನ್ ನೇತೃತ್ವದ ತಜ್ಞರ ಸಮಿತಿಯು ಕೆಐಟಿಗಳಾಗಿ ಅಭಿವೃದ್ಧಿಪಡಿಸಲು ಅಗತ್ಯವಿರುವ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳ ಕುರಿತು ವರದಿ ಸಲ್ಲಿಸಿದೆ. ಸದರಿ ಸಮಿತಿಯ ಶಿಫಾರಸ್ಸಿನ ಅನ್ವಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಉದ್ದೇಶಕ್ಕಾಗಿ 50 ಕೋಟಿ ರೂ. ಗಳನ್ನು ನೀಡಲಾಗಿದೆ.ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಹಾಗೂ ವೃತ್ತಿಪರ ಕೋರ್ಸುಗಳಲ್ಲಿ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅನುವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್ ಪುಸ್ತಕಗಳು ಹಾಗೂ ಪಠ್ಯ ವಿಷಯಗಳನ್ನು ಮುಂದಿನ ಒಂದು ವರ್ಷದಲ್ಲಿ ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು.

10:38 AM  ಶಾಲೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ. 

ನಿರ್ಮಿಸಲು ಮತ್ತು ಕಾರ್ಯನಿರ್ವಹಿಸುತ್ತಿರುವ 46 ಶಾಲೆಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು. ಪ್ರಚಲಿತ ವಿದ್ಯಮಾನಗಳ ಕುರಿತು ಆಸಕ್ತಿ ಹಾಗೂ ಅರಿವು ಹೊಂದಲು ಅನುವಾಗುವಂತೆ 24,347 ಶಾಲೆಗಳಲ್ಲಿ 20 ಕೋಟಿ ರೂ. ಅನುದಾನದಲ್ಲಿ ಪುಸ್ತಕ, ಪತ್ರಿಕೆ ಹಾಗೂ ನಿಯತಕಾಲಿಕೆಗಳನ್ನು ಒದಗಿಸುವ ಮೂಲಕ ಗಂಥಾಲಯಗಳ ಬಲವರ್ಧನೆ ಹಾಗೂ ರೀಡಿಂಗ್‌ ಕಾರ್ನ‌್ರಗಳನ್ನು ಸ್ಥಾಪಿಸಲಾಗುವುದು.ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಜೆ-ಪಾಲ್ ಸಹಯೋಗದೊಂದಿಗೆ ಪರಿಹಾರಾತ್ಮಕ ಚಟುವಟಿಕೆ ‘ಅಭ್ಯುದಯ’ ಕಾರ್ಯಕ್ರಮ ಅನುಷ್ಠಾನ.ಬೀದರ್, ಹಾವೇರಿ, ಚಾಮರಾಜನಗರ, ಬಾಗಲಕೋಟೆ, ಕೊಡಗು, ಕೊಪ್ಪಳ – ಮತ್ತು ಹಾಸನ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ 7 ಮತ್ತು ಮಂಡ್ಯ ವಿಶ್ವವಿದ್ಯಾಲಯವನ್ನು ಸಂಯೋಜಿತ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸಲಾಗಿದೆ. ಈ ವರ್ಷದಲ್ಲಿ ಚಿಕ್ಕಮಗಳೂರಿನಲ್ಲಿ ಹೊಸ ವಿಶ್ವವಿದ್ಯಾಲಯವನ್ನು ತಂತ್ರಜ್ಞಾನದ ಗರಿಷ್ಠ ಬಳಕೆಗೆ ಒತ್ತು ನೀಡಲಾಗುವುದು.

10:36 AM  ಗ್ರಾಮ ಸಹಾಯಕರ ಹುದ್ದೆಗೆ ಮರುನಾಮಕರಣ

ಗ್ರಾಮ ಸಹಾಯಕರ ಹುದ್ದೆಯನ್ನು ಜನಸೇವಕ’ ಎಂದು ಮರುನಾಮಕರಣ 
ಗ್ರಾಮ ಸಹಾಯಕರ ಮಾಸಿಕ ಗೌರವಧನ ಹೆಚ್ಚಳ
13,000 ರೂ. ಗಳಿಂದ 14,000 ರೂ. ಗಳಿಗೆ ಗೌರವ ಧನ ಹೆಚ್ಚಳ
ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಹಾಯಧನ ಏರಿಕೆ
1000 ರೂ.ನಿಂದ 1500 ರೂಗೆ ಸಹಾಯಧನ ಏರಿಕೆ

10:35 AM  2022-23ರಲ್ಲಿ ರಾಜ್ಯದ ಆರ್ಥಿಕ ಬೆಳವಣಿಗೆ ಶೇ.7.9

*2022-23ರಲ್ಲಿ ರಾಜ್ಯದ ಆರ್ಥಿಕ ಬೆಳವಣಿಗೆ ಶೇ.7.9 
*ಕೃಷಿ ವಲಯದ ಬೆಳವಣಿಗೆ ಶೇ.5.5
*2022-23ರಲ್ಲಿ ರಾಜ್ಯದ ಹಣಕಾಸು ಸ್ಥಿತಿ ಸದೃಢವಾಗಿದೆ. 
*ತೆರಿಗೆ ಸಂಗ್ರಹದಲ್ಲಿ ಹೆಚ್ಚಳ
*ರಾಜ್ಯ ಸ್ವಂತ ತೆರಿಗೆಗಳ ಸಂಗ್ರಹ ಶೇ.20ರಷ್ಟು ಹೆಚ್ಚಳ

10:33 AM  ದೆವಸ್ಥಾನಗಳಿಗೆ 425 ಕೋಟಿ ಅನುದಾನ

ದೇವಸ್ಥಾನಗಳ ಮತ್ತು ಮಠಗಳ ಜೀರ್ಣೋದ್ಧಾರ ಕಾಮಗಾರಿಗಳಿಗೆ ಒಟ್ಟು 425 ಕೋಟಿ ರೂ. ಅನುದಾನ ನೀಡಲಾಗಿದೆ. ಮುಂದಿನ 2 ವರ್ಷಗಳಲ್ಲಿ ರಾಜ್ಯದಲ್ಲಿನ ವಿವಿಧ ದೇವಸ್ಥಾನ ಮತ್ತು ಮಠಗಳ ಜೀರ್ಣೋದ್ಧಾರಕ್ಕಾಗಿ ನಮ್ಮ ಸರ್ಕಾರ 1,000 ಕೋಟಿ ರೂ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಜಗತ್ತಿಗೆ ಸಂಸತ್ತಿನ ಪರಿಕಲ್ಪನೆಯನ್ನು ಪರಿಚಯಿಸಿದ ಬಸವಾದ ಶರಣರು ಸ್ಥಾಪಿಸಿದ ಅನುಭವ ಮಂಟಪದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನವನ್ನು 48,000 ರೂ. ಗಳಿಂದ 60,00 ರೂ. ಗಳಿಗೆ ಹೆಚ್ಚಿಸಲಾಗುವುದು. ಈ ಸೌಲಭ್ಯದಿಂದ 3,71 ಸಂಸ್ಥೆಗಳಿಗೆ ಅನುಕೂಲವಾಗಲಿದೆ.ಉಪನೋಂದಣ ಕಛೇರಿಗಳಾಗಿ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳನ್ನು ಪರಿವರ್ತಿಸಲಾಗುವುದು. ಮೊದಲನೇ ಹಂತದಲ್ಲಿ ಪ್ರಸಕ್ತ ಸಾಲಿನಲ್ಲಿ 8 ಕಛೇರಿಗಳ ಅಭಿವೃದ್ಧಿಪಡಿ ಸಲಾಗುವುದು.ರಾಷ್ಟ್ರೀಯ ಚಂಡಮಾರುತ ಅಪಾಯ ಉಪಶಮನ ಯೋಜನೆ ಹಂತ-3 ನ್ನು ಅನುಷ್ಠಾನಗೊಳಿಸಲಾಗುವುದು

10:31 AM ಆರ್ಥಿಕವಾಗಿ ಹಿಂದುಳಿದವರಿಗೆ ವಸತಿ ಯೋಜನೆ

ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ
30
ಲಕ್ಷ ಮಹಿಳೆಯರಿಗೆ ಉಚಿತ ಪಾಸ್
ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್
1
ಲಕ್ಷ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ
ಬೊಮ್ಮಾಯಿ ಬಜೆಟ್ನಲ್ಲಿ ಸ್ತ್ರೀ ಸಬಲೀಕರಣಕ್ಕೆ ಬಂಪರ್

10:31 AM   ರೈತರಿಗೆ ಭೂ ಸಿರಿ ಯೋಜನೆ

ಕಿಸಾನ್ ಕ್ರಿಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಯೋಜನೆ
ಭೂ ಸಿರಿ ಯೋಜನೆಯಡಿ 10 ಸಾವಿರ ರೂ. ಹೆಚ್ಚುವರಿ ಪ್ರೋತ್ಸಾಹ
ಬೀಜ, ರಸಗೊಬ್ಬರ, ಕ್ರಿಮಿನಾಶಕ ಖರೀದಿಸಲು ಪ್ರೋತ್ಸಾಹ
ಮಹಿಳಾ ಕಾರ್ಮಿಕರಿಗೆ 500 ರೂ. ಸಹಾಯಧನ
30
ಲಕ್ಷ ಮಹಿಳೆಯರಿಗೆ ಉಚಿತ ಪಾಸ್
ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್

10:30 AM  ದೇವಸ್ಥಾನ, ಮಠಗಳ ಜೀರ್ಣೋದ್ಧಾರಕ್ಕೆ ಸಾವಿರ ಕೋಟಿ ಅನುದಾನ

ಬಿಜೆಪಿ ಸರಕಾರದಲ್ಲಿ ಮಠ ಮಾನ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿದ್ದು. ವರ್ಶವೂ ಸಾವಿರ ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ದತ್ತಿ ಇಲಾಖೆಗಳ ವರ್ಷದ ಅನುದಾನ 60 ಸಾವಿರಕ್ಕೆ ಹೆಚ್ಚಿಸಲಾಗಿದೆ

10:29 AM  ನೀರಿನ ಸಂರಕ್ಷಣೆಗೆ ಆದ್ಯತೆ

ಅರೆ ಮಲೆನಾಡು ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗಾಗಿ ಬಾವಿ ಕಿಂಡಿ ಅಣೆ, ನಾಲಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಎರಡೂ ಯೋಜನೆಗಳಿಗೆ 75 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ.ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣಾ ಕಾಮಗಾರಿಗಳಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು. ಇದರಡಿಯಲ್ಲಿ ನರೇಗಾ ಯೋಜನೆಯ ಸಮನ್ವಯದೊಂದಿಗೆ ಎಲ್ಲಾ ರೈತರಿಗೆ ತಮ್ಮ ಜಮೀನಿನಲ್ಲಿ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹಿಸಲಾಗುವುದುಕರ್ನಾಟಕವು ತೋಟಗಾರಿಕೆ ವಲಯದಲ್ಲಿ ಅಪಾರ ಸಾಧನೆ ಮಾಡಿ ದೇಶದಲ್ಲಿಯೇ ಅತ್ಯುತ್ತಮ ತೋಟಗಾರಿಕೆ ರಾಜ್ಯ ಎಂದು ಪ್ರಶಸ್ತಿ ಪಡೆದಿದೆ. ರಾಜ್ಯದ 26.21 ಲಕ್ಷ ಹೆಕ್ಟೇರ್ ವಿಸ್ತೀರ್ಣ ಪ್ರದೇಶದ ತೋಟಗಾರಿಕೆ ಬೆಳೆಗಳಿಂದ ಲಭಿಸುವ 242 ಲಕ್ಷ ಮೆಟ್ರಿಕ್ಟನ್ವಾರ್ಷಿಕ ಉತ್ಪನ್ನದ ಮೌಲ್ಯವು 66,263 ಕೋಟಿ ರೂ. ಗಳಾಗಿದ್ದು, ಇದು ರಾಜ್ಯದಲ್ಲಿನ ಸಮಗ್ರ ಕೃಷಿ ವಲಯದ ಒಟ್ಟಾರೆ ಆದಾಯದ ಶೇ.30 ರಷ್ಟಿದೆ.

10:27 AM ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್

ಮಹಿಳಾ ಸಬಲೀಕರಣಕ್ಕೆ ಹೆಚ್ಚು ಆದ್ಯತೆ ನೀಡಿದ ಬೊಮ್ಮಾಯಿ. ವಿದ್ಯಾರ್ಥಿನಿಯರಿಗೆ ಉಚಿತ ಪಾಸ್ ಘೋಷಿಸಿದ ಸಿಎಂ.

10:27 AM ಕೃಷಿ ಮತ್ತು ಪೂರಕ ಚಟುವಟಿಕೆಗಳು

ಮಣ್ಣಿನ ಕೊಡುಗೆಗೆ ನೋವಿಗೆ ನಲಿವಿಗೆ ಕನ್ನಡಿ ಹಿಡಿವಾಸ ಮಾನವ ಹೃದಯದ ಕರುಣೆಗೆ ಒಲವಿಗೆ ದನಿಗೂಡಿಸುವಾಸೆ– ಕೆ. ಎಸ್‌. ನರಸಿಂಹಸ್ವಾಮಿಕೃಷಿ ಕ್ಷೇತ್ರದಲ್ಲಿ ನಮ್ಮ ಸರ್ಕಾರ ಹಲವು ಮಹತ್ವಪೂರ್ಣ ಕ್ರಮಗಳನ್ನು ಕೈಗೊಂಡಿದೆ. ತಂತ್ರಜ್ಞಾನ ಹಾಗೂ ವೈಜ್ಞಾನಿಕ ಪದ್ಧತಿಗಳ ಅಳವಡಿಕೆಯೊಂದಿಗೆ ರೈತರು ಮಾಹಿತಿಪೂರ್ಣ ನಿರ್ಧಾರ ಕೈಗೊಳ್ಳಲು ಪೂರಕ ಕ್ರಮಗಳನ್ನು ನಮ್ಮ ಸರ್ಕಾರ ಜಾರಿಗೊಳಿಸಲಿದೆ. ಇದಲ್ಲದೆ, ಕೃಷಿಯನ್ನು ಲಾಭದಾಯಕವಾಗಿಸಲು ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆ ಮತ್ತು ರಪ್ತಿಗೆ ಒತ್ತು ನೀಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿಯನ್ನು ಪ್ರೋತ್ಸಾಹಿಸುವ ಮೂಲಕ ರೈತರ ಆದಾಯದಲ್ಲಿ ಸ್ಥಿರತೆಯನ್ನು ತರಲು ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ

10:25 AMಜಿ20 ಶೃಂಗಸಭೆಗೆ ಪೂರಕವಾಗಿ ರಾಜ್ಯದಲ್ಲಿ 4 ಸಭೆಗಳು

*ರಾಜ್ಯದ ಮಾನವ ಅಭಿವೃದ್ಧಿ ಹಾಗೂ ಆರ್ಥಿಕ ಅಭಿವೃದ್ಧಿಗೆ ಸಮಾನ ಆದ್ಯತೆ
*ಅಲ್ಪಸಂಖ್ಯಾತ, ಮಹಿಳೆ ಹಾಗೂ ದುರ್ಬಲ ವರ್ಗದ ಮಹಿಳೆಯರ ಅಭಿವೃದ್ಧಿಗೆ ಒತ್ತು
*24 ಸಾವಿರ ಪೌರಕಾರ್ಮಿಕರ ಉದ್ಯೋಗ ಕಾಯಂ 
*ವಿವಿಧ ಮಾಸಾಶನ ಹೆಚ್ಚಳ

10:24 AM ಬಜೆಟ್‌ನಲ್ಲಿ ರೈತರಿಗೆ ಬಂಪರ್ ಗಿಫ್ಟ್

ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ. ಸಾಲ
3 ಲಕ್ಷದವರೆಗಿನ  ಶೂನ್ಯ ಬಡ್ಡಿದರದ ಸಾಲದ ಮೊತ್ತ 5 ಲಕ್ಷಕ್ಕೆ ಏರಿಕೆ
ಪಿಎಂ-ಕಿಸಾನ್ ಯೋಜನೆಯಡಿ ಕೇಂದ್ರ 10,930 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 4,822 ಕೋಟಿ ರೂ. ಒಟ್ಟಾರೆ 15,752 ಕೋಟಿ ರೂ. ಗಳನ್ನು ರೈತರ ಖಾತೆಗೆ ನೇರ ಜಮೆ ಮಾಡಲಾಗಿದೆ.
* ಕಳೆದ ವರ್ಷ ಘೋಷಿಸಿದ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ ಒದಗಿಸಲಾಗಿದೆ. 400 ಕೋಟಿ
ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸಲು 2,037 ಕೋಟಿ ರೂ., ಒದಗಿಸಲಾಗಿದೆ.
* ಕೃಷಿ ಮತ್ತು ತೋಟಗಾರಿಕೆಯಲ್ಲಿ ಹನಿ ನೀರಾವರಿಗಾಗಿ 2,900 ಕೋಟಿ ರೂ., ಮಾರುಕಟ್ಟೆ ನೆರವು ನೀಡಲಾಗಿದೆ.
– ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮುಂತಾದ ಪರಿಕರಗಳಿಗೆ 962 ಕೋಟಿ ರೂ. ವೆಚ್ಚ ಮಾಡಲಾಗಿದೆ

10:24 AM ಕಿವಿ ಮೇಲೆ ಚೆಂಡು ಹೂ ಇಟ್ಕೊಂಡು ಬಂದ ಕಾಂಗ್ರೆಸ್ಸಿಗರು.

ಕುವೆಂಪು ಕವನ ವಾಚನದೊಂದಿಗೆ ಬಜೆಟ್ ಮಂಡನೆ ಆರಂಭಿಸಿದ ಸಿಎಂ ಬೊಮ್ಮಾಯಿ ವಿರುದ್ಧ ಸದನದಲ್ಲಿ ಘೋಷಣೆಗಳು ಮೊಳಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಕಿವಿ ಮೇಲೆ ಹೂವಿಟ್ಟುಕೊಂಡು ಬಂದು, ವಿರೋಧ ವ್ಯಕ್ತಪಡಿಸಿದರು. 

10:22 AM,   ಸಿಎಂ ಟಾಂಗ್ ಕೊಟ್ಟ ಕಾಂಗ್ರೆಸ್‌ ಮತ್ತು ಜೆಡಿಎಸ್‌

ಇಷ್ಟು ದಿನ ಜನರ ಕಿವಿಗೆ ಹೂ ಇಟ್ಟಿದೆ ಎಂದು ಬಜೆಟ್ ಭಾಷಣ ಆರಂಭದಲ್ಲಿ ಟಾಂಗ್ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ. ಇದಕ್ಕೆ ಆಕ್ಷೇಪಿಸಿ ಕಿಡಿ ಕಾರಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಇತರ ನಾಯಕರು.

10:20 AM, 17 FEB ಬಜೆಟ್ ಭಾಷಣ ಆರಂಭಿಸಿದ ಸಿಎಂ

 ಆರಂಭದ ವೇಳೆ ರಾಷ್ಟ್ರಕವಿ ಕುವೆಂಪು ಅವರ ಕವನ ವಾಚಿಸಿದ ಬೊಮ್ಮಾಯಿ. ಹೊಸ ಕಾಲ ಬರುತ್ತಿದೆ. ನಾವು ಅಮೃತ ಕಾಲದಲ್ಲಿದ್ದೇವೆ ಎಂದು ಹೇಳಿ ಬಜೆಟ್ ಆರಂಭ

10:16 AM, 17 FEB ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮನ
ಕಾಂಗ್ರೆಸ್‌ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬೆಳಗ್ಗೆ ವಿಧಾನಸೌಧಕ್ಕೆ ಆಗಮಿಸಿದರು. ವಿಧಾನಸಭೆ ಮೊಗಸಾಲೆಯಲ್ಲಿ ಸಚಿವ ನಿರಾಣಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಾಲು ಮುಟ್ಟಿ ನಮಸ್ಕರಿಸಿದ್ದು ಕಂಡುಬಂತು.
10:15 AM, 17 FEB ಸದನದಲ್ಲಿ ಬಜೆಟ್ ಪ್ರತಿ ಹಂಚಿಕೆ 
ಬಜೆಟ್ ಮಂಡನೆಗೆ ಕೆಲವೇ ಕ್ಷಣಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಸದನಕ್ಕೆ ಬಜೆಟ್ ಪುಸ್ತಕಗಳನ್ನು ಕೊಂಡೊಯ್ಯತ್ತಿರುವ ವಿಧಾನಸೌಧ ಸಿಬ್ಬಂದಿ. ಭಾಷಣ ಆರಂಭವಾಗುತ್ತಿದ್ದಂತೆ ಸದನದ ಸದಸ್ಯರಿಗೆ ಪ್ರತಿ ಹಂಚಿಕೆ

 

10:09 AM, 17 FEB ತಮ್ಮ ಚೇಂಬರ್‌ ಕಡೆಗೆ ತೆರಳಿದ ಸಿಎಂ

    ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಚೇಂಬರ್‌ಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ. ವಿಧಾನಸಭೆ ಸಭಾಂಗಣದ ಪಕ್ಕದಲ್ಲಿರುವ ಸಿಎಂ ಚೇಂಬರ್. ಕೆಲವೇ ಕ್ಷಣಗಳಲ್ಲಿ ವಿಧಾನಸಭೆಯ ಸಭಾಂಗಣಕ್ಕೆ ಆಗಮಿಸಲಿರುವ ಬೊಮ್ಮಾಯಿ.

10:04 AM, 17 FEB  ಸಚಿವ ಸಂಪುಟ ಸಭೆ ಅಂತ್ಯ
ವಿಧಾನಸೌಧದಲ್ಲಿ ಬಜೆಟ್‌ಗೂ ಮುನ್ನ ನಡೆದ ಸಚಿವ ಸಂಪುಟ ಸಭೆ ಮುಕ್ತಾಯ. ಸಿಎಂ ಬೊಮ್ಮಾಯಿ ನೇತೃತ್ವದ ಮಹತ್ವ ಸಚಿವ ಸಂಪುಟ ಸಭೆ ಅಂತ್ಯ.

 

10:00 AM, 17 FEB ಬಜೆಟ್ ಗಾತ್ರ ಹೆಚ್ಚಿಸಲಾಗಿದೆ!

ಕಳೆದ ವರ್ಷ (2022)ರಲ್ಲಿ 2.56 ಲಕ್ಷ ಕೋಟಿ ಗಾತ್ರ ಬಜೆಟ್ ಮಂಡಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಈ ಬಾರಿಯ ಬಜೆಟ್ ಗಾತ್ರ 03 ಲಕ್ಷ ಕೋಟಿಗೆ ಹಿಗ್ಗುವ ಸಾಧ್ಯತೆ ಇದೆ.

9:58 AM, 17 FEB ಇದು ಜನಪರ ಬಜೆಟ್

ಮಂಡಿಸಲಿರುವ ಬಜೆಟ್ ಬಡವರ ಪರವಾದ ಜನಸ್ನೇಹಿ ಬಜೆಟ್ ಮಂಡಿಸಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ.

9:41 AM, 17 FEB ಮಹಿಳೆಯರಿಗೆ ನೆರವಾಗುವ ಬಜೆಟ್: ಆರ್.ಅಶೋಕ್

   ಪ್ರಸ್ತುತ ರಾಜ್ಯ ಬಜೆಟ್ ವಿಶೇಷವಾಗಿ ಮಹಿಳೆಯರಿಗೆ ಸಹಾಯವಾಗುವಂತೆ ಇರಲಿದೆ. ಈ ಕುರಿತು ಮುಖ್ಯಮಂತ್ರಿಗಳ ನಮ್ಮೊಂದಿಗೆ ಚರ್ಚಿಸಿದ್ದಾರೆ. ರೈತಾಪಿ ‌ಜನರಿಗೆ, ಮಹಿಳೆಯರಿಗೆ, ದೀನದಲಿತರಿಗೆ, ಸಾಮಾನ್ಯ ಜನರಿಗೆ ಪೂರಕ ಬಜೆಟ್ ಆಗಿರುತ್ತದೆ ಎಂದು ಕಂದಾಯ ಸಚಿವ ಆರ್‌ ಅಶೋಕ್ ಹೇಳಿದರು.

9:25 AM, 17 FEB  2023-24 ನೇ ಸಾಲಿನ ಬಜೆಟ್ ಪ್ರತಿಹಸ್ತಾಂತರ

    ಹಣಕಾಸು ಇಲಾಖೆ ಅಧಿಕಾರಿಗಳಾದ ಐಎಸ್‌ಎನ್ ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap