ಇಂದಿನಿಂದ ಸಂಸತ್ತಿನಲ್ಲಿ ಮಧ್ಯಂತರ ಬಜೆಟ್​​​​ ಅಧಿವೇಶನ…….!

ನವದೆಹಲಿ:

    ಕೇಂದ್ರ ಬಜೆಟ್ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಲಿದ್ದು, ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ನಾರಿ ಶಕ್ತಿಯ ಹಬ್ಬವೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದರು.

    ಇಂದಿನಿಂದ ಸಂಸತ್ತಿನಲ್ಲಿ ಮಧ್ಯಂತರ ಬಜೆಟ್​​​​ ಅಧಿವೇಶನ ನಡೆಯಲಿದ್ದು, ಉಭಯ ಸದನಗಳನ್ನು ಉದ್ದೇಶಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಲಿದ್ದಾರೆ.

    ಇದಕ್ಕೂ ಮುನ್ನ ಪ್ರಧಾನಮಂತ್ರಿ ಮೋದಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಈ ವೇಳೆ ಅಶಿಸ್ತಿನ ಸಂಸದರಿಗೆ’ ಎಚ್ಚರಿಕೆಯ ಸಂದೇಶವನ್ನು ನೀಡಿದರು.

    ಅಧಿವೇಶನದಲ್ಲಿ ವಿರೋಧ ಪಕ್ಷಗಳು ಧ್ವನಿ ಎತ್ತಿದೆ, ಆದರೆ, ನಮ್ಮನ್ನು ವಿರೋಧಿಸಬೇಕು ಎಂಬ ಕಾರಣಕ್ಕೆ ವಿರೋಧಿಸಬೇಡಿ. ಅದು ಸಂಸತ್ತಿನ ಸಮಯಕ್ಕೆ ಹಾಗೂ ಚರ್ಚೆಗೆ ತೊಂದರೆ ಮಾಡಬಹುದು. ಈ ದೇಶಕ್ಕೆ ಅಥವಾ ನಮಗೆ ಬೆಳಕು ಚೆಲ್ಲುವವರನ್ನು ಆತ್ಮೀಯವಾಗಿ ಸ್ಮರಿಸಲಾಗುವುದು. ಸಂಸತ್ತಿನಲ್ಲಿ ವಿಷಾದಿಸುವ ಅವಕಾಶವಿದೆ. ಇದನ್ನು ಬಿಡಬೇಡಿ ಎಂದು ತಿಳಿಸಿದರು.
    ಇದೇ ವೇಳೆ ಸಂಸತ್ತಿನಲ್ಲಿ ಅಂಗೀಕರಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಈ ವರ್ಷದ ಗಣರಾಜ್ಯೋತ್ಸವದಲ್ಲಿ ನಾವೆಲ್ಲರೂ “ನಾರಿ ಶಕ್ತಿ”ಗೆ ಸಾಕ್ಷಿಯಾಗಿದ್ದೇವೆ. ಇಂದು ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ನಾಳೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್​​​ ಮಂಡಿಸಲಿದ್ದಾರೆ. ಇದು ನಾರಿ ಶಕ್ತಿಯ ಹಬ್ಬ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap