ವೀಕೆಂಡ್ ಕರ್ಪ್ಯೂ ನಲ್ಲೂ KSRTC ಬಸ್ ಸಂಚಾರ ಯಥಾಸ್ಥಿತಿ

ಬೆಂಗಳೂರು :

          ರಾಜ್ಯದಲ್ಲಿ ಕೊರೊನಾ ವೈರಸ್ ಮತ್ತು ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ರಾಜ್ಯ ಸರ್ಕಾರ ವೀಕೆಂಡ್ ಕರ್ಪ್ಯೂ ಜಾರಿ ಮಾಡಿದ್ದು, ವೀಕೆಂಡ್ ಕರ್ಪ್ಯೂ ವೇಳೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಯಥಾಸ್ಥಿತಿ ಇರಲಿದೆ.

      ವೀಕೆಂಡ್ ಕರ್ಪ್ಯೂ ವೇಳೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಯಥಾಸ್ಥಿತಿ ಇರಲಿದ್ದು, ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ ಗಳ ಸಂಚಾರ ಇರಲಿದೆ. ರಾಜ್ಯ, ಹೊರರಾಜ್ಯಗಳ ನಡುವೆ ಬಸ್ ಸಂಚಾರ ಇರಲಿದೆ.

ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ ಎಂದು ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ಕಳಸದ ಮಾಹಿತಿ ನೀಡಿದ್ದಾರೆ.

ವೀಕೆಂಡ್ ಕರ್ಪ್ಯೂ ವೇಳೆ ಬಿಎಂಟಿಸಿ ಬಸ್ ಸಂಚಾರ ಇರಲ್ಲ. ಅಗತ್ಯ ಸೇವೆಗಳಿಗ ಮಾತ್ರ ಬಿಎಂಟಪಿ ಸೇವೆ ಇರಲಿದೆ ಎಂದು ಬಿಎಂಟಿಸಿ ಎಂಡಿ ಅನ್ಪುಕುಮಾರ್ ಮಾಹಿತಿ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ