
ಬಸ್ ಚಾಲನೆ ವೇಳೆ ಮೊಬೈಲ್ ಬಳಕೆ ಮಾಡುತ್ತಿದ್ದಾಗ ಏನಾದರೂ ದುರ್ಘಟನೆ ಸಂಭವಿಸಿದ್ದರೆ ಯಾರು ಜವಾಬ್ದಾರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಇಂತಹ ಬೇಜವಾಬ್ದಾರಿ ಬಸ್ ಚಾಲಕನ ವಿರುದ್ಧ ಸಾರಿಗೆ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ..
ಕೆಎಸ್ಆರ್ಟಿಸಿ ಚಾಲಕನೊಬ್ಬ ಮೊಬೈಲ್ ಬಳಸುತ್ತಾ ಬಸ್ ಚಲಾಯಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ಚಾಲಕನ ಈ ಬೇಜವಾಬ್ದಾರಿತನಕ್ಕೆ ಟೀಕೆ ವ್ಯಕ್ತವಾಗಿದೆ.
ಜ.27ರಂದು ಬೆಂಗಳೂರಿನಿಂದ ಹಾನಗಲ್ಗೆ ತೆರಳುತ್ತಿದ್ದ ಕೆಎ 27ಎಫ್ 0777 ನಂಬರ್ ಬಸ್ ಚಾಲಕ ಕಿಲೋಮೀಟರ್ಗಟ್ಟಲೆ ಮೊಬೈಲ್ನಲ್ಲಿ ಚಾಟಿಂಗ್ ಮಾಡಿಕೊಂಡು ಬಸ್ ಚಲಾಯಿಸಿದ್ದಾರೆ.
ಮೊಬೈಲ್ನಲ್ಲಿ ಚಾಟ್ ಮಾಡುತ್ತಾ ಬಸ್ ಓಡಿಸಿದ ಚಾಲಕತುಮಕೂರಿನಿಂದ ಶಿರಾ ಮಾರ್ಗವಾಗಿ ಹಾನಗಲ್ಗೆ ತೆರಳುತ್ತಿದ್ದಾಗ ಪ್ರಯಾಣಿಕರೊಬ್ಬರು ಬಸ್ ಚಾಲಕನ ಈ ಕೃತ್ಯವನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಬಸ್ ಚಾಲನೆ ವೇಳೆ ಮೊಬೈಲ್ ಬಳಕೆ ಮಾಡುತ್ತಿದ್ದಾಗ ಏನಾದರೂ ದುರ್ಘಟನೆ ಸಂಭವಿಸಿದ್ದರೆ ಯಾರು ಜವಾಬ್ದಾರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಇಂತಹ ಬೇಜವಾಬ್ದಾರಿ ಬಸ್ ಚಾಲಕನ ವಿರುದ್ಧ ಸಾರಿಗೆ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
