ಬಸ್-ಕಾರು ಡಿಕ್ಕಿ ; ಕಾರಿನಲ್ಲಿದ್ದ ಐವರು ಸಜೀವ ದಹನ!!

ಜಾರ್ಖಂಡ್ :

    ಬಸ್​ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಐವರು ಸಾವನ್ನಪ್ಪಿದ ದಾರುಣ ಘಟನೆ ಜಾರ್ಖಂಡ್​ನ ರಾಮಗರ್ ಜಿಲ್ಲೆಯಲ್ಲಿ ಸಂಭವಿಸಿದೆ.

     ರಾಮಘರ್​ – ಗೋಲಾ ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್​ ಹಾಗೂ ವಾಗನಾರ್​ ಕಾರು ಬೆಳಗ್ಗೆ 8 ಗಂಟೆ ಸುಮಾರಿಗೆ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು​ ಮಾಹಿತಿ ನೀಡಿದರು.

fire-in-bus-and-car-in-jharkhands-ramgarh-after-collision

     ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಓರ್ವ ಅಪ್ರಾಪ್ತ ಈ ದುರಂತದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪಾಟ್ನಾದವರಾಗಿದ್ದು ಅವರ ವಿಳಾಸವನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap