ಬ್ಯುಸಿನೆಸ್ ಕಾರಿಡಾರ್’ಗಾಗಿ ಭೂಮಿ ಕಳೆದುಕೊಂಡವರಿಗೆ 3 ಪಟ್ಟು ಪರಿಹಾರ: ರಾಜ್ಯ ಸರ್ಕಾರ

ಬೆಂಗಳೂರು:

    ಬ್ಯುಸಿನೆಸ್ ಕಾರಿಡಾರ್’ಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಮೂರು ಪಟ್ಟು ಹೆಚ್ಚು ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಗುರುವಾರ ತಿಳಿಸಿದೆ.ಈ ಕುರಿತು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ. ಸಚಿವ ಸಂಪುಟದಲ್ಲಿ ಸಭೆಯಲ್ಲಿ 117 ಕಿ.ಮೀ ಉದ್ದದ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನಿಸಲಾಗಿದ್ದು, ಇದರಿಂದ ಭೂಮಿ ಕಳೆದುಕೊಂಡ ರೈತರಿಗೆ ಮೂರು ಪಟ್ಟು ಹೆಚ್ಚು ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

   ಸಚಿವ ಸಂಪುಟದಲ್ಲಿ ಸಭೆಯಲ್ಲಿ 117 ಕಿ.ಮೀ ಉದ್ದದ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಬಿಡಿಎ ಕಾಯ್ದೆ ಪ್ರಕಾರ ದುಪ್ಪಟ್ಟು ಪರಿಹಾರ ನೀಡಲು ಅವಕಾಶವಿಲ್ಲ. ಆದರೂ ನಮ್ಮ ಸರ್ಕಾರ ರೈತರಿಗೆ ಮೂರು ಪಟ್ಟು ಹೆಚ್ಚು ಪರಿಹಾರ ನೀಡಲಿದೆ ಎಂದು ತಿಳಿಸಿದ್ದಾರೆ.ಟಿಡಿಆರ್ ಅಥವಾ ಎಫ್ಐಆರ್ ನೀಡಲು ತೀರ್ಮಾನಿಸಲಾಗಿದೆ. ಹಿಂದಿನ ಯಾವ ಸರ್ಕಾರವೂ ಈ ವಿಚಾರದಲ್ಲಿ ಧೈರ್ಯ ತೋರಿಸಿರಲಿಲ್ಲ. 2007-08ರಲ್ಲಿ ತೀರ್ಮಾನವಾಗಿದ್ದರೂ ಅನುಷ್ಠಾನ ಸಾಧ್ಯವಾಗಿರಲಿಲ್ಲ ಎಂದು ಹೇಳಿದ್ದಾರೆ.

Recent Articles

spot_img

Related Stories

Share via
Copy link