ನವದೆಹಲಿ:
ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನ.3ಮತ್ತು 12ರಂದು ಮತದಾನ ನಡೆಯಲಿದೆ.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ನಡೆಯುತ್ತಿರುವ ಮೊದಲ ಉಪಚುನಾವಣೆ ಇದಾಗಿರುವುದರಿಂದ ಮೂರು ಪಕ್ಷಗಳಿಗೆ ಇದು ನಿರ್ಣಾಯಕವಾಗಲಿದೆ.
ನವೆಂಬರ್ 3 ರಂದು ಶಿವಮೊಗ್ಗ, ಬಳ್ಳಾರಿ, ಮಂಡ್ಯ ಲೋಕಸಭಾ ಕ್ಷೇತ್ರಗಳಿಗೆ ಹಾಗೂ ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. ಅಲ್ಲದೇ, ರಾಮನಗರ ಹಾಗೂ ಜಮಖಂಡಿ ವಿಧಾನ ಸಭೆ ಚುನಾವಣೆ ನವೆಂಬರ್ 12ರಂದು ನಡೆಯಲಿದ್ದು, ಒಟ್ಟು ಫಲಿತಾಂಶ ಡಿಸೆಂಬರ್ 11ಕ್ಕೆ ಪ್ರಕಟವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ