ಜೆಡಿಎಸ್‌ ನಿಂದ ಸಿಎಂ ಇಬ್ರಾಹೀಂ ಉಚ್ಛಾಟನೆ….!

ಬೆಂಗಳೂರು: 

    ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು ಅವರನ್ನು ಪಕ್ಷದಿಂದ ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದೆ.

    ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ ಜಾತ್ಯತೀತ ಜನತಾದಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ಇಂದು ನಡೆದಿದ್ದು ಈ ಸಭೆಯಲ್ಲಿ ಉಚ್ಚಾಟನೆ ಪ್ರಸ್ತಾಪಕ್ಕೆ ಒಮ್ಮತದಿಂದ ಅನುಮೋದನೆ ಸಿಕ್ಕಿದೆ.

    ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಷ್ಟ್ರೀಯ ಕಾರ್ಯಕಾರಿಣಿ ಮಂಡಳಿಯ ಎಲ್ಲಾ ಸದಸ್ಯರು, ಇತರ ರಾಜ್ಯ ಘಟಕಗಳ ಅಧ್ಯಕ್ಷರು ಭಾಗಿಯಾಗಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿತ್ತು. ಇದನ್ನು ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಇಬ್ರಾಹಿಂ ತೀವ್ರವಾಗಿ ವಿರೋಧಿಸಿದ್ದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link