ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ: ದಳ ಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಚನ್ನಪಟ್ಟಣ

   ಬಿಜೆಪಿ, ಜೆಡಿಎಸ್ ಮಿತ್ರಪಕ್ಷಗಳ ನಾಯಕರ ಟಿಕೆಟ್ ಗುದ್ದಾಟವನ್ನೇ ಅಸ್ತ್ರ ಮಾಡಿಕೊಂಡ ಕಾಂಗ್ರೆಸ್ ಪಡೆ ಸಿಪಿ ಯೋಗೇಶ್ವರ್‌ರನ್ನ ಪಕ್ಷಕ್ಕೆ ಸೆಳೆದಿದ್ದರ ಜತೆಗೆ, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ದಳಪತಿಗಳ ಸಾಮ್ರಾಜ್ಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಅಸಲಿ ಯುದ್ಧಕ್ಕೆ ರಣಕಹಳೆ ಊದಿದ್ದಾರೆ.

   ಚನ್ನಪಟ್ಟಣದಲ್ಲೇ ತಂಗಿದ್ದ ಸಿಪಿವೈ ಮಂಗಳವಾರಪೇಟೆಯಲ್ಲಿರುವ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ಒಂದೂವರೆ ಕಿಲೋ ಮೀಟರ್ ಱಲಿ ನಡೆಸಿದರು. ಱಲಿಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡರು. ಱಲಿಯುದ್ದಕ್ಕೂ ಘೋಷಣೆ ಮೊಳಗಿಸಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ಱಲಿಯಲ್ಲಿ ಪಾಲ್ಗೊಂಡರು.

   ರೋಡ್‌ ಶೋ ವೇಳೆ ಹಿಂದೆ ನಿಂತಿದ್ದ ಸಿಪಿ ಯೋಗೇಶ್ವರ್‌ರನ್ನ ಗಮನಿಸಿದ ಸಿಎಂ ಮುಂದೆ ಕರೆದರು. ಈ ವೇಳೆ, ‘ಇರಲಿ ಪರವಾಗಿಲ್ಲ ನಿಲ್ಲಿ ಸರ್’ ಅಂತಾ ಯೋಗೇಶ್ವರ್ ಹೇಳಿದ್ದಾರೆ.ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ಸಿಪಿ ಯೋಗೇಶ್ವರ್ ಉಮೇದುವಾರಿಕೆ ಸಲ್ಲಿಸಿದರು. ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರು ಶಾಸಕರು ಉಪಸ್ಥಿತರಿದ್ದರು.

   ಸಿಪಿವೈ ಬಂದಿದ್ದಕ್ಕೆ ಚನ್ನಪಟ್ಟಣ ಕಾಂಗ್ರೆಸ್‌ನಲ್ಲಿ ಅಸಮಾಧಾನ ಎಂಬ ಚರ್ಚೆಗೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದರು. ಚನ್ನಪಟ್ಟಣದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು. ಸಂಡೂರು ಅಖಾಡದಿಂದ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ನಾಮಪತ್ರ ಸಲ್ಲಿಸಿದ್ದಾರೆ. ಸಂಡೂರಿನ ಎಪಿಎಂಸಿಯಿಂದ ತಾಲೂಕು ಕಚೇರಿವರೆಗೆ ಬೃಹತ್ ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಿದರು. ಈ ವೇಳೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್, ಸಚಿವ ಸಂತೋಷ್ ಲಾಡ್, ಸಂಸದ ತುಕಾರಾಂ ಮಾಜಿ ಸಚಿವ ನಾಗೇಂದ್ರ, ಸೇರಿದಂತೆ ಕೈ ನಾಯಕರು ಭಾಗಿಯಾಗಿದರು.

Recent Articles

spot_img

Related Stories

Share via
Copy link
Powered by Social Snap