ವಿಶ್ವದ ಅತಿ ದೊಡ್ಡ ಪಕ್ಷ ಸೇರಿದ್ದಕ್ಕಾಗಿ ನನಗೆ ಖಷಿಯಿದೆ : ಸಿ ಆರ್‌ ಕೇಶವನ್

ಚೆನ್ನೈ:

    ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷಕ್ಕೆ ನನ್ನನ್ನು ಸೇರ್ಪಡೆಗೊಳಿಸಿಕೊಂಡಿದ್ದಕ್ಕಾಗಿ ನನಗೆ ಅತ್ಯಂತ ಖುಷಿಯಾಗಿದೆ ಎಂದು ಭಾರತದ ಮೊದಲ ಗವರ್ನರ್ ಜನರಲ್ ಸಿ ರಾಜಗೋಪಾಲಾಚಾರಿ ಅವರ ಮೊಮ್ಮಗ ಸಿಆರ್ ಕೇಶವನ್ ಅವರು ಹೇಳಿದ್ದಾರೆ

   “ಪ್ರಧಾನಿ ಮೋದಿಯವರ ಜನಕೇಂದ್ರಿತ ನೀತಿಗಳು, ಭ್ರಷ್ಟಾಚಾರ-ಮುಕ್ತ ಆಡಳಿತ ಮತ್ತು ಸುಧಾರಣೆ-ನೇತೃತ್ವದ ಅಭಿವೃದ್ಧಿ ಕಾರ್ಯಸೂಚಿಗಳು ಭಾರತವನ್ನು ದುರ್ಬಲ ಆರ್ಥಿಕತೆಯಿಂದ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಗೆ ಸಾಗುವಂತೆ ಮಾಡಿದೆ ಎಂದು ತಿಳಿಸಿದರು.

    ಕೆಲ ದಿನಗಳ ಹಿಂದಷ್ಟೇ ಕೇಶವನ್ ಅವರು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.

   ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಈ ರಾಜೀನಾಮೆ ಪತ್ರವನ್ನು ಹಂಚಿಕೊಂಡಿದ್ದರು. ರಾಜೀನಾಮೆ ಪತ್ರದಲ್ಲಿ ಎರಡು ದಶಕಗಳಿಂದ ಪಕ್ಷಕ್ಕಾಗಿ ದುಡಿಯಲು ಕಾರಣವಾದ ಯಾವುದೇ “ಮೌಲ್ಯದ ಕುರುಹು” ಈಗ ಕಾಣುತ್ತಿಲ್ಲ. ಪಕ್ಷವು ಪ್ರಸ್ತುತವಾಗಿ ಏನನ್ನು ಸಂಕೇತಿಸುತ್ತದೆಯೋ ಅದನ್ನು ನಾನು ಒಪ್ಪುತ್ತೇನೆ ಎಂದು ನಾನು ಇನ್ನು ಮುಂದೆ ಒಳ್ಳೆಯ ಆತ್ಮಸಾಕ್ಷಿಯಿಂದ ಹೇಳಲಾರೆ…” ಎಂದು ಬರೆದಿದ್ದರು.

   ಇದಕ್ಕಾಗಿಯೇ ನಾನು ಇತ್ತೀಚೆಗೆ ರಾಷ್ಟ್ರೀಯ ಮಟ್ಟದಲ್ಲಿ ಸಾಂಸ್ಥಿಕ ಜವಾಬ್ದಾರಿಯನ್ನು ನಿರಾಕರಿಸಿದ್ದೇನೆ ಮತ್ತು ಅದರಿಂದ ದೂರವಿದ್ದೇನೆ. ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸದೆ ದೂರ ಇದ್ದೆ. “ನಾನು ಹೊಸ ಮಾರ್ಗವನ್ನು ಕಂಡುಕೊಳ್ಳುವ ಸಮಯ ಬಂದಿದೆ ಮತ್ತು ಆದ್ದರಿಂದ ನಾನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ. ತಮಿಳುನಾಡು ಕಾಂಗ್ರೆಸ್ ಸಮಿತಿ ಚಾರಿಟಬಲ್ ಟ್ರಸ್ಟ್‌ನ ಟ್ರಸ್ಟಿ ಸ್ಥಾನಕ್ಕೆ ನನ್ನ ರಾಜೀನಾಮೆಯನ್ನು ಸೂಕ್ತ ಪ್ರಾಧಿಕಾರಕ್ಕೆ ಸಲ್ಲಿಸಿದ್ದೇನೆ ಎಂದು ಹೇಳಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link