ಹುಬ್ಬಳ್ಳಿ:
ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ಭಾನುವಾರ ರಾತ್ರಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡಿದ್ದರು. ಕಾರ್ಯಕ್ರಮದ ನಂತರ ಸಚಿವರು ಉಪ್ಪಿಟ್ಟು ಸೇವಿಸಿದ್ದರು. ಆದರೆ ಅಲ್ಲಿಂದ ಮರಳುವಾಗ ಸಚಿವರು, ಸಚಿವರ ಗನ್ಮ್ಯಾನ್, ಅವರ ಆಪ್ತಕಾರ್ಯದರ್ಶಿ ಸೇರಿ ನಾಲ್ವರಿಗೆ ವಾಂತಿ ಆಗಿತ್ತು, ಎನ್ನಲಾಗಿದೆ.
ಇದೇ ವೇಳೆ ಅಸ್ವಸ್ಥರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಸಚಿವರು ಚೇತರಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
