ಸಿಟಿ ರವಿ ವಿರುದ್ಧದ ಆರೋಪ ನಿಜ : ಸಿಐಡಿ

ಬೆಂಗಳೂರು

   ಬೆಳಗಾವಿ ಅಧಿವೇಶನದಲ್ಲಿ  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​   ವಿರುದ್ಧ ಪರಿಷತ್ ಸದಸ್ಯ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಸಿಐಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗಗೊಂಡಿದೆ. ರಾಜ್ಯ ಆಡಳಿತ ಮತ್ತು ಸಿಬ್ಬಂಧಿ ಸುಧಾರಣೆ ಇಲಾಖೆ (ಡಿಎಪಿಆರ್​) ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢವಾಗಿದೆ.

   ನಾಲ್ಕು ಗಂಟೆಯ ವಿಡಿಯೋ ರೆಕಾರ್ಡ್​ನಲ್ಲಿ ಒಟ್ಟು ಏಳು ಬಾರಿ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದಬಂದಿದೆ, ಹೀಗಾಗಿ, ಅವಾಚ್ಯ ಶಬ್ದ ಬಳಸಿದ ಧ್ವನಿ ಪತ್ತೆಗೆ ಸಿಟಿ ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ. ಆದರೆ ತಾನು ಅವಾಚ್ಯ ಶಬ್ದ ಬಳಸಿಲ್ಲ ಎಂದು ಸಿಟಿ ರವಿ ಹೇಳುತ್ತಿದ್ದಾರೆ. ಜೊತೆಗೆ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದಾರೆ. ಹೀಗಾಗಿ, ನ್ಯಾಯಾಲಯದ ಮೂಲಕ ವಿಚಾರಣೆಗೆ ಮತ್ತು ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ. 

   ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್​ 19 ರಂದು ಪರಿಷತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಮಾತಿನ ಚಕಮಕಿ ನಡುವೆ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಂಸದೀಯ ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

   ಈ ಬಗ್ಗೆ ಹಿರೇಬಾಗೇವಾಡಿ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ಕೂಡ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಐಡಿ, ಆ ದಿನ ನಡೆದಿದ್ದ ಘಟನಾವಳಿ ಕುರಿತ ವಿಡಿಯೋ ನೀಡುವಂತೆ ಡಿಎಪಿಆರ್​ಗೆ ಪತ್ರ ಬರೆದಿತ್ತು. ಈ ಕೋರಿಕೆ ಹಿನ್ನೆಲೆಯಲ್ಲಿ ಸಿಐಡಿಗೆ ಡಿಎಪಿಆರ್ ಇಲಾಖೆ ವಿಡಿಯೋ ನೀಡಿದೆ.

   ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ವಿರುದ್ಧ ಫ್ರಸ್ಟ್ರೇಟ್​ ಎಂಬ ಪದ ಬಳಸಿದ್ದೇನೆ ಹೊರತು ನಿಂದಿಸಿಲ್ಲ ಎಂದು ಸಿಟಿ ರವಿ ಅವರು ಹೇಳುತ್ತಿದ್ದಾರೆ. ಅಲ್ಲದೇ ತಾನು ನಿಂದಿಸಿದ್ದಕ್ಕೆ ಅಸಲಿ ವಿಡಿಯೋವೇ ಇಲ್ಲ ಎಂದು ಹೇಳಿದ್ದರು. ಇನ್ನೊಂದಡೆ, ರವಿ ಅವರು ನಿಂದಿಸಿ ಕುರಿತು ಯಾವುದೇ ಆಡಿಯೋ-ವಿಡಿಯೋ ಇಲ್ಲವೆಂದು ವಿಧಾನಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಕೂಡ ತಿಳಿಸಿದ್ದರು.

Recent Articles

spot_img

Related Stories

Share via
Copy link