ಸಿ ಟಿ ರವಿಯನ್ನು ಕೂಡಲೆ ಆಸ್ಪತ್ರೆಗೆ ಸೇರಿಸಲಿ : ಡಿ ಕೆ ಶಿ

ಬೆಂಗಳೂರು

     ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ ಅವರು ಮತಿಭ್ರಮಣೆಯಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರನ್ನು ನಿಮ್ಹಾನ್ಸ್ ಅಥವಾ ಬೇರೆ ಇನ್ಯಾವುದಾದರೂ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

     ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿ ಅವರು ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ ಸುರೇಶ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಬಿಜೆಪಿ ನಾಯಕರು ಕೂಡಲೇ ರವಿ ಅವರನ್ನು ಆಸ್ಪತ್ರೆಗೆ ಸೇರಿಸಲಿ ಎಂದು ಸಲಹೆ ನೀಡುತ್ತೇನೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ಹೂಡುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದರು.

      ಈ ಹಿಂದೆ ಬಿಜೆಪಿಯ ಮತ್ತೊಬ್ಬ ಮೆಂಟಲ್ ಗಿರಾಕಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ. ಅದರ ವಿಚಾರಣೆ ನಡೆಯುತ್ತಿದೆ. ಆದರೆ ಬೇರೆ ಪ್ರಕರಣಗಳಲ್ಲಿ ಆತುರವಾಗಿ ಶಿಕ್ಷೆ ಪ್ರಕಟವಾಗುತ್ತದೆ. ಹೀಗಾಗಿ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap