ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 45 ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸಂಪುಟ ಸಭೆಯಲ್ಲಿ ಅನುಮತಿ ಸಿಕ್ಕಿದೆ. 31 ಸಮುದಾಯ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. 9 ತಾಲೂಕು ಆಸ್ಪತ್ರೆ ಉಪ ವಿಭಾಗೀಯ ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಏರಿಸಲು ನಿರ್ಧರಿಸಲಾಗಿದೆ. 2 ತಾಲೂಕು ಆಸ್ಪತ್ರೆಗಳು ಜಿಲ್ಲಾ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಲಿವೆ. ಒಟ್ಟು 890 ಕೋಟಿ ರೂ. ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ಬಗ್ಗೆ ಚರ್ಚೆ ನಡೆಸಲಾಗಿದೆ.
ಕೊಪ್ಪಳದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಕಾಮಗಾರಿಗೆ 56 ಕೋಟಿ ರೂ. ಮೊತ್ತದಲ್ಲಿ ಅನುದಾನ ನೀಡಲು ಒಪ್ಪಿಗೆ ಪಡೆಯುವ ಬಗ್ಗೆ ಚರ್ಚೆ ನಡೆಸಲಾಗಿದೆ. ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ತೆಲಂಗಾಣ ಗಡಿ ಪುಟ್ಟ ಪಾಕ ರಾಜ್ಯ ಹೆದ್ದಾರಿ ಕಾಗಿನ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಯನ್ನು 53 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಸಲಾಗಿದೆ.
ಆಸ್ಪತ್ರೆಗಳಿಗೆ ಪೀಠೋಭಕರಣಗಳ ಗಳ ಖರೀದಿ ಹಾಗೂ ಮಾನವ ಸಂಪನ್ಮೂಲಗಳ ಪಡೆಯುವ ಸಲುವಾಗಿ ಒಟ್ಟು 890 ಕೋಟಿ ರೂ. ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ಬಗ್ಗೆ ಕ್ಯಾಬಿನೆಟ್ನಲ್ಲಿ ಚರ್ಚೆ ನಡೆದಿದೆ. ಕೊಪ್ಪಳ ಜಿಲ್ಲೆಯಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಕಾಮಗಾರಿಯನ್ನು 56 ಕೋಟಿ ರೂಪಾಯಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ಬಗ್ಗೆ ಚರ್ಚೆ ನಡೆಸಲಾಗಿದೆ.
ಇದರ ನಡುವೆ, ಕೊಪ್ಪಳ ಜಿಲ್ಲೆ ಅಂಜನಾದ್ರಿ ಬೆಟ್ಟದಲ್ಲಿ ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳ ಕಲ್ಪಿಸಲು ನೂರು ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಹಾಗೂ 77.28 ಎಕರೆ ಸ್ವಾಧೀನ ಪಡಿಸಿಕೊಳ್ಳಲು 29.51 ಕೋಟಿಗಳನ್ನು ಕೊಪ್ಪಳ ಜಿಲ್ಲಾಧಿಕಾರಿಗೆ ಬಿಡುಗಡೆ ಮಾಡಲು ಕ್ಯಾಬಿನೆಟ್ ಅನುಮೋದನೆ ಸಿಗುವ ಸಾಧ್ಯತೆಯಿದೆ.
ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಅಂಜನಾದ್ರಿ ಬೆಟ್ಟ, ಬಳ್ಳಾರಿ ಕೋಟೆ, ಬೈಲಾಪುರ ಮೈಲಾರಲಿಂಗೇಶ್ವರ ದೇವಸ್ಥಾನಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ರೋಪ್ ವೇ ಅಭಿವೃದ್ಧಿಪಡಿಸಲು ತಾತ್ವಿಕ ಅನುಮೋದನೆ ನೀಡುವ ಸಾಧ್ಯತೆಯಿದೆ. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿರುವ ಅಶೋಕನ ಶಿಲಾ ಶಾಸನ ಪ್ರದೇಶದಲ್ಲಿ 10 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಗತ್ಯ ಪ್ರವಾಸಿ ಸೌಲಭ್ಯಗಳನ್ನು ಒದಗಿಸಲು ಅನುಮೋದನೆ ಸಿಗುವ ನಿರೀಕ್ಷೆಯಿದೆ. ಕಲಬುರಗಿ ಜಿಲ್ಲೆಯಲ್ಲಿ 515 ನೂತನ ಅಂಗನವಾಡಿ ಕಟ್ಟಡಗಳನ್ನು 118.45 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಕ್ಯಾಬಿನೆಟ್ ಅನುಮೋದನೆ ಸಾಧ್ಯತೆಯಿದೆ.
ಕಲಬುರಗಿ ಸೇಡಂ ತಾಲೂಕಿನ ಕಾಚೂರ ಗ್ರಾಮದ ಹತ್ತಿರ ಏತ ನೀರಾವರಿ ಯೋಜನೆಯನ್ನು 82.5 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ಸಾಧ್ಯತೆಯಿದೆ. 77.28 ಎಕರೆ ಸ್ವಾಧೀನ ಪಡಿಸಿಕೊಳ್ಳಲು 29.51 ಕೋಟಿಗಳನ್ನು ಕೊಪ್ಪಳ ಜಿಲ್ಲಾಧಿಕಾರಿಗೆ ಬಿಡುಗಡೆ ಮಾಡಲು ಕ್ಯಾಬಿನೆಟ್ ಅನುಮೋದನೆ ಸಾಧ್ಯತೆಯಿದೆ. ಕನ್ನಡದ ಪ್ರಾಚೀನ ವಿಶ್ವವಿದ್ಯಾನಿಲಯವೆಂದು ಪ್ರಖ್ಯಾತಿ ಹೊಂದಿರುವ ನಾಗಾವಿ ಪಾರಂಪರಿಕ ಪ್ರದೇಶದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು 68 ಕೋಟಿ ರೂ. ಅಂದಾಜು ಮೊತ್ತಕ್ಕೆ ಕ್ಯಾಬಿನೆಟ್ ಅನುಮೋದನೆ ಸಾಧ್ಯತೆಯಿದೆ. ಯಾದಗಿರಿ ಜಿಲ್ಲೆ, ಯಾದಗಿರಿ ಕೋಟೆಯ ಸಮಗ್ರ ಅಭಿವೃದ್ಧಿ ಮತ್ತು ಸಂರಕ್ಷಣೆ ಕಾಮಗಾರಿಗಳನ್ನು ಕೈಗೊಳ್ಳಲು 95 ಕೋಟಿ ರೂ. ಅಂದಾಜು ವೆಚ್ಚಕ್ಕೆ ಅನುಮೋದನೆ ನೀಡುವ ಸಾಧ್ಯತೆಯಿದೆ.