ಭಾರತದ ಪರ ತಮ್ಮ ವರಸೆ ಬದಲಿಸಿದ ಕೆನಡಾ ಪ್ರಧಾನಿ…!

ನವದೆಹಲಿ :

     ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಆರೋಪ ಮಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಇದೀಗ ಭಾರತದ ಪರ ಮೃದು ಧೋರಣೆ ಹೊಂದಿರುವಂತೆ ಕಾಣುತ್ತಿದೆ.

     ಕೆನಡಾದೊಂದಿಗೆ ಭಾರತದ ಸಂಬಂಧ ಮತ್ತು ನಡೆಯುತ್ತಿರುವ ವಿಷಯದ ಬಗ್ಗೆ ಕೆನಡಾದ ಮಿತ್ರರಾಷ್ಟ್ರಗಳ ಮೌನದ ಬಗ್ಗೆ ಕೇಳಿದ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಜಸ್ಟಿನ್ ಟ್ರುಡೊ, ಭಾರತ ಅಭಿವೃದ್ಧಿ ಪ್ರಧಾನ ದೇಶ ಎಂಬುದರಲ್ಲಿ ಎರಡು ಮಾತಿಲ್ಲ. ಅಂತಹ ದೇಶದೊಂದಿಗೆ ನಾವು ಜೊತೆಗೂಡಿ ಪ್ರಾದೇಶಿಕ ಹಾಗೂ ಜಾಗತಿಕ ಏಳಿಗೆ ದಿಸೆಯಲ್ಲಿ ಕೆಲಸ ಮಾಡುವ ಅಗತ್ಯವಿದೆ.

    ಹಾಗಾಗಿ, ನಾವು ಪ್ರಚೋದನೆ ನೀಡುವ ಹಾಗೂ ಯಾವುದೇ ಸಮಸ್ಯೆ ಸೃಷ್ಟಿಸುವ ಪ್ರಯತ್ನ ಮಾಡುವುದಿಲ್ಲ ಎಂದ ಅವರು. ಕೆನಡಿಯನ್ನರ ಮೌಲ್ಯಗಳನ್ನು ರಕ್ಷಿಸುವುದಕ್ಕೆ ನಾವು ಪ್ರಾಮುಖ್ಯತೆ ನೀಡುತ್ತೇವೆ ಎಂದು ಮೃದುವಾಗಿ ಮಾತನಾಡಿದ್ದಾರೆ.

    ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನ ಉಚ್ಚಾಟನೆಗೊಳಿಸಿದ ಬಳಿಕ ಭಾರತವೂ ಹಲವು ಕ್ರಮಗಳ ಮೂಲಕ ತಿರುಗೇಟು ನೀಡಿದೆ. ಭಾರತದಲ್ಲಿರುವ ಕೆನಡಾ ರಾಯಭಾರಿಯನ್ನ ಉಚ್ಚಾಟನೆ ಮಾಡುವ ಜೊತೆಗೆ ಕೆನಡಾ ನಾಗರಿಕರಿಗೆ ವೀಸಾ ನೀಡುವುದನ್ನೂ ಸ್ಥಗಿತಗೊಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap