ಕ್ಯಾಪ್ಟನ್‌ ವಿಜಯಕಾಂತ್‌ ಆಸ್ಪತ್ರೆಗೆ ದಾಖಲು

ಚೆನ್ನೈ:     

     ಕಳೆದೆರಡು ದಿನಗಳಿಂದ ವಿಜಯಕಾಂತ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.

    ವಿಜಯಕಾಂತ್ ಅತೀವ್ರ ಜ್ವರ, ಕೆಮ್ಮು ಮತ್ತು ಶೀತದಿಂದ ಬಳಲುತ್ತಿದ್ದು, ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೆಂಟಿಲೇಟರ್‌ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇದು ಸುಳ್ಳೆಂದು ಡಿಎಂಡಿಕೆ ಪಕ್ಷದ ಕಾರ್ಯಕರ್ತರು ಹೇಳಿದ್ದಾರೆ.

 
    ಇದರ ನಡುವಲ್ಲೇ ತಮಿಳುನಾಡು ಆರೋಗ್ಯ ಸಚಿವರು ನೀಡಿದ ಮತ್ತೊಂದು ಹೇಳಿಕೆ ಅಭಿಮಾನಿಗಳನ್ನು ಆತಂಕಕ್ಕೆ ದೂಡಿದೆ.
 
    ಖಾಸಗಿ ಆಸ್ಪತ್ರೆಯ ಆಡಳಿತ ಮಂಡಳಿಯೊಂದಿಗೆ ಮಾತನಾಡಿದ್ದೇನೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಸಹಜವಾಗಿಯೇ ವಿಜಯಕಾಂತ್ ಆರೋಗ್ಯದ ಬಗ್ಗೆ ಗೊಂದಲ ಮೂಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ