ಕಲಬುರಗಿ:
ಗುರುಮಿಠ್ಕಲ್ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವರ ಕಾರು ಅಪಘಾತ ಕ್ಕೊಳಗಾಗಿದೆ. ರಾತ್ರಿ ಸುಮಾರು 1 ಗಂಟೆಗೆ ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ಅಪಘಾತ ನಡೆದಿದೆ. ಚಿಂಚನಸೂರ ಅವರ ಮುಖ ಮತ್ತು ಕಾಲುಗಳಿಗೆ ಗಾಯವಾಗಿದ್ದು, ಸ್ಥಳೀಯರು ನಗರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಂಚನಸೂರ್ ಅವರ ಜೊತೆಯಲ್ಲಿದ್ದ ಗನ್ ಮ್ಯಾನ್ ಮತ್ತು ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ. ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ.
ಬಾಬುರಾವ್ ಚಿಂಚನಸೂರ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಯಾವುದೇ ಅಪಾಯವಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ.ಶುಕ್ರವಾರ ಚುನಾವಣಾ ಪ್ರಚಾರ ಮುಗಿಸಿ ಯಾದಗಿರಿಯಿಂದ ಕಲಬುರಗಿಯತ್ತ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕಾರ್ನಲ್ಲಿ ಇಬ್ಬರು ಚಾಲಕರು, ಓರ್ವ ಗನ್ ಮ್ಯಾನ್ ಸೇರಿದಂತೆ ನಾಲ್ಕು ಜನರಿದ್ದರು ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ