ಬೆಂಗಳೂರು :
ಹೊಸ ವರ್ಷಾಚರಣೆ ಮುಗಿಸಿ ಆಂಧ್ರದಿಂದ ಬೆಂಗಳೂರಿನ ವೈಟ್ ಫೀಲ್ಡ್ ಗೆ ಬರುವಾಗ ಡಿವೈಡರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ಬೆಳಗಿನ ಜಾವ ಮೂರು ಗಂಟೆ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಆಂಧ್ರ ಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಆಂಧ್ರದ ಪಶ್ಚಿಮ ಗೋದಾವರಿ ಮೂಲದ ಶ್ರೀನಾಥ್(40), ಶ್ರೀಲೇಖಾ(36), ಶ್ರೀಲತಾ(32) ಮೃತ ದುರ್ದೈವಿಗಳು. ಇವರು ಹೊಸ ವರ್ಷಾಚರಣೆ ಮುಗಿಸಿ ಆಂಧ್ರದಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.
ಹೊಸ ವರ್ಷಾಚರಣೆ ಮುಗಿಸಿ ಊರಿಗೆ ಮರಳುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಸಂಬಂಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
