ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ….!

ಬೆಂಗಳೂರು: 

    ಸ್ಯಾಂಡಲ್‌ವುಡ್‌ ನಿರ್ದೇಶಕ ನಂದಕಿಶೋರ್‌ ವಿರುದ್ಧ ಬಹುದೊಡ್ಡ ಆರೋಪವೊಂದು ಕೇಳಿಬಂದಿದೆ.  ಯುವ ನಟ ಶಬರೀಶ್ ಶೆಟ್ಟಿ ಎಂಬುವವರಿಗೆ ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ನಿರ್ದೇಶಕ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕಿಶೋರ್ ಅವರು ತಮ್ಮಿಂದ 22 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದು, ಈಗ ಹಣ ಕೊಡದೆ ಸತಾಯಿಸುತ್ತಿದ್ದಾರೆ. ಅಲ್ಲದೆ ಸುದೀಪ್ ಅವರ ಹೆಸರು ಬಳಸಿ ನನಗೆ ಬೆದರಿಕೆ ಸಹ ಹಾಕಿದ್ದಾರೆ ಎಂದು ಶಬರೀಶ್‌ ಆರೋಪ ಮಾಡಿದ್ದಾರೆ.

   9 ವರ್ಷಗಳ ಹಿಂದೆ ಶಬರೀಶ್‌ ಅವರು ನಂದಕಿಶೋರ್‌ ಅವರಿಗೆ 22 ವರ್ಷಗಳ ಹಿಂದೆ ನೀಡಿದ್ದರು. ದುಡ್ಡು ಕೊಡುವಂತೆ ಕೇಳಿದಾಗ ಚಿತ್ರಗಳಲ್ಲಿ ನಟಿಸುವ ಆಫರ್‌ ನೀಡಿದ್ದರು. ಆದರೆ ನನಗೆ ಈ ವರೆಗೆ ಯಾವುದೇ ಆಫರ್‌ ನೀಡಿಲ್ಲ. ನಾನು ಚಿನ್ನ ಅಡವಿಟ್ಟು ಹಣ ಕೊಟ್ಟಿದ್ದೆ ಎಂದು ಶಬರೀಶ್ ಹೇಳಿದ್ದಾರೆ. ಹಣ ಮರಳಿಸುವಂತೆ ಕೇಳಿದರೆ ಬೆದರಿಕೆ ಹಾಕುತ್ತಾರೆ. ನಾನು ಹಣ ಕೇಳಿದಾಗೆಲ್ಲ ಸುದೀಪ್ ಸರ್ ಹೆಸರು ಹೇಳಿ ಯಾಮಾರಿಸಿದ್ದಾರೆ.

    ಸೆಲೆಬ್ರಿಟಿ ಕ್ರಿಕೆಟ್‌ ಲೀಗ್‌  ಆಡುವ ಕನಸ್ಸು ಕಟ್ಟಿಕೊಂಡಿದ್ದೆ. ಕನ್ನಡ ಚಲನಚಿತ್ರ ಕಪ್ (ಕೆಸಿಸಿ)ಟೂರ್ನಿಯಲ್ಲಿ ನಾನು ಎರಡು ಸೀಸನ್ ಆಡಿದ್ದೇನೆ. ಹಣ ಕೇಳಿದರೆ ನಿನ್ನನ್ನು ಕೆಸಿಸಿಯಿಂದ ಹೊರ ಹಾಕಿಸುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದರು. ನಾನು ಸುದೀಪ್ ಸರ್ ಜೊತೆ ಕ್ರಿಕೆಟ್ ಆಡುವ ಆಸೆಯಿಂದ ಸುಮ್ಮನಾಗುತ್ತಿದ್ದೆ. ಈಗ ನನ್ನ ರಾಮಧೂತ ಸಿನಿಮಾ ಶೂಟಿಂಗ್ ಮುಕ್ತಾಯವಾಗಿದೆ. ಸಿನಿಮಾ ರಿಲೀಸ್ ಮಾಡಲು ನನ್ನ ಬಳಿ ಹಣ ಇಲ್ಲ. ನನ್ನ ಹಣ ವಾಪಸ್ ಕೊಡಿ ಎಂದು ಕೇಳಿದೆ. ಅದಕ್ಕವರು ನನ್ನ ಬಳಿ ಯಾವುದೇ ಹಣ ಇಲ್ಲ. ನೀನು ಎನೂ ಬೇಕಿದ್ರು ಮಾಡು ಯಾರಿಗೆ ಬೇಕಾದ್ರೂ ಹೇಳೂ ಎಂದು ಹೇಳಿದ್ದಾರೆ. 

   ನಮ್ಮಂತ ಪುಟ್ಟ ಕಲಾವಿದರು ಹೇಗೆ ಬದುಕೊದು ಗೊತ್ತಾಗ್ತಿಲ್ಲ, ನಾನು ಈ ವಿಚಾರವನ್ನು ಸುದೀಪ್ ಸರ್ ಗಮನಕ್ಕೆ ತರಲು ಪ್ರಯತ್ನ ಪಟ್ಟಾಗ ‌ನನ್ನ ತಡೆಯಲಾಯ್ತು. ನನ್ನ ಹಣ ನನಗೆ ಕೊಡದೇ ಇದ್ದರೆ ನಂದ ಕಿಶೋರ್ ವಿರುದ್ದ ಕಾನೂನು ಮೊರೆ ಹೋಗುತ್ತೀನಿ. ಈ ವಿಷಯವನ್ನು ಶಿವಣ್ಣ, ಸುದೀಪ್ ಸರ್ ಗಮನಕ್ಕೆ ತರುತ್ತೇನೆ. ಫಿಲ್ಮ್ ಚೇಂಬರ್​​ಗೆ ದೂರು ಕೊಡುತ್ತೇನೆ ಎಂದು ಅವರು ಹೇಳಿದ್ದಾರೆ.

Recent Articles

spot_img

Related Stories

Share via
Copy link