ಯು ಟಿ ಖಾದರ್‌ ವಿರುದ್ಧದ ಪ್ರಕರಣ ರದ್ದು ….!

ಬೆಂಗಳೂರು 

     ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಿದ್ದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿತ್ತು. ಇದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ ಸಂಬಂಧ ಹಾಲಿ ಸ್ಪೀಕರ್‌ ಯು.ಟಿ ಖಾದರ್‌ ವಿರುದ್ಧದ ಕ್ರಿಮಿನಲ್ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.

    ಯು.ಟಿ ಖಾದರ್‌ ಪ್ರಕರಣ ಸಂಬಂಧ ತಮ್ಮ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಶಿವಾಜಿನಗರ ಠಾಣೆ ಸಬ್ ಇನ್ಸ್‌ಪೆಕ್ಟರ್ ದಾಖಲಿಸಿದ್ದ ಖಾಸಗಿ ದೂರು ಮತ್ತು ಆ ಕುರಿತ ಎಸಿಎಂಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಮಾನ್ಯ ಮಾಡಿದೆ.

    ಮೈಸೂರಿನಲ್ಲಿ 6 ಕೋವಿಡ್ ಪ್ರಕರಣ ಹಿಂದಿನ ಆದೇಶದಂತೆ ಕ್ರಮ ಇದೇ ಪ್ರಕರಣ ಸಂಬಂಧ ಈ ಹಿಂದೆ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಸೇರಿದಂತೆ ಕಾಂಗ್ರೆಸ್‌ನ ಹಲವು ಮುಖಂಡರ ವಿರುದ್ಧ ಶಿವಾಜಿ ನಗರ ಠಾಣಾ ಪೊಲೀಸರು ದಾಖಲಿಸಿದ್ದ ದೂರು ರದ್ದುಪಡಿಸಿ ಹೈಕೋರ್ಟ್‌, 2023ರ ಜು.7ರಂದು ಆದೇಶಿಸಿತ್ತು. ಅದೇ ಆದೇಶವನ್ನು ಆಧರಿಸಿ ಯು.ಟಿ. ಖಾದರ್‌ ಅವರ ವಿರುದ್ಧದ ಪ್ರಕರಣವನ್ನೂ ರದ್ದುಪಡಿಸಿ ಹೈಕೋರ್ಟ್‌ ಆದೇಶಿಸಿದೆ.

    ಹಾಗಾಗಿ ಸ್ಪೀಕರ್ ಯು.ಟಿ. ಖಾದರ್ ಸದ್ಯ ನಿರಾಳರಾಗುವಂತಾಗಿದೆ.  ವಿಚಾರಣೆ ನೆಪದಲ್ಲಿ ಜಾರಿ ನಿರ್ದೇಶನಾಲಯವು ರಾಹುಲ್ ಗಾಂಧಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ವತಿಯಿಂದ 2022ರ ಜೂನ್‌16ರಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು.

   ಅದರಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ , ಯು.ಟಿ ಖಾದರ್‌ ಸೇರಿದಂತೆ ಕಾಂಗ್ರೆಸ್‌ನ ಹಲವು ಮುಖಂಡರು ಪ್ರತಿಭಟನೆ ನಡೆಸಿದ್ದರು. ಇದರಿಂದ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಶಿವಾಜಿನಗರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅವರು ಕರ್ನಾಟಕ ಪೊಲೀಸ್ ಕಾಯ್ದೆಯಡಿ ಖಾಸಗಿ ದೂರು ದಾಖಲಿಸಿದ್ದರು. ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತ್ರ ಪ್ರತಿಭಟನೆ ನಡೆಸುವುದನ್ನು ಕಡ್ಡಾಯಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಮಾಡಿದ್ದಾರೆ.

   ಈ ಆದೇಶ ಉಲ್ಲಂಘಿಸಿ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಪ್ರತಿಭಟನೆ ನಡೆಸಿದ್ದಾರೆ. ಆ ಮೂಲಕ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡಿದ್ದಾರೆ. ಮತ್ತೊಂದೆಡೆ ಪ್ರತಿಭಟನೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಸಹ ಪಡೆದಿಲ್ಲ ಎಂದು 2022ರ ಜೂನ್‌ 16ರಂದು ದಾಖಲಿಸಿದ ಖಾಸಗಿ ದೂರಿನಲ್ಲಿ ದೂರುದಾರರು ಆರೋಪಿಸಿದ್ದರು. ಈ ದೂರು ರದ್ದುಪಡಿಸಲು ಕೋರಿ ಖಾದರ್‌ ಹೈಕೋರ್ಟ್‌ಗೆ ಕ್ರಿಮಿನಲ್‌ ಅರ್ಜಿ ಸಲ್ಲಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap