ಹಣ ಹಂಚಿಕೆ ಆರೋಪ : ಡಿ.ಕೆ ಶಿವಕುಮಾರ್‌ ಮೇಲೆ ಪ್ರಕರಣ ದಾಖಲು

ಬೆಂಗಳೂರು: 

     ರಾಜ್ಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವಾಗ  ಕಾಂಗ್ರೆಸ್  ರಾಜ್ಯಾಧ್ಯಾಕ್ಷ  ಡಿಕೆ ಶಿವಕುಮಾರ್ ಅವರು ಪ್ರಜಾಧ್ವನಿ ಯಾತ್ರೆ ವೇಳೆ ಹಣವನ್ನು ಹಂಚಿದ್ದಾರೆ ಎನ್ನುವ ದೂರಿನ ಮೇರೆಗೆ ಪೊಲೀಸರು ಅವರ ವಿರುದ್ಧ ನಾನ್-ಕಾಗ್ನಿಸೆಬಲ್ ಅಪರಾಧ ಪ್ರಕರಣವನ್ನು ದಾಖಲಿಸಿದ್ದಾರೆ.

     ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸುವ ಮುನ್ನ ಮಂಗಳವಾರ ಮಂಡ್ಯ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಕಲಾವಿದರಿಗೆ ಹಣ ಎಸೆದಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

    ‘ಈ ಸಂಬಂಧ ನಾವು ಇನ್ನೂ ಎಫ್‌ಐಆರ್ ದಾಖಲಿಸಿಲ್ಲ. ನಾನ್-ಕಾಗ್ನಿಸೆಬಲ್ ಅಪರಾಧವನ್ನು ದಾಖಲಿಸಿದ್ದೇವೆ ಮತ್ತು ನಿರ್ದೇಶನವನ್ನು ಕೋರಿ ನ್ಯಾಯಾಲಯದ ಮುಂದೆ ಈ ವಿಷಯವನ್ನು ಪ್ರಸ್ತುತಪಡಿಸಲಾಗುವುದು’ ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಮೇ 10ರ ಚುನಾವಣೆಗೂ ಮುನ್ನ ಮತದಾರರಿಗೆ ಆಮಿಷವೊಡ್ಡಿ ಹಣ ಹಂಚಿದ್ದಾರೆ ಎಂಬ ಆರೋಪವನ್ನು ಅವರು ತಳ್ಳಿಹಾಕಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap