ಬೆಂಗಳೂರು :
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾತಿಗಳಿಗೆ ಜಾತಿ ಸಿಂಧುತ್ವ ಪ್ರಮಾಣ ಪತ್ರ ನೀಡುವ ಮೊದಲು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ವರದಿ ಕಡ್ಡಾಯವಾಗಿ ಪಡೆಯಬೇಕೆಂದ ಆದೇಶವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿದೆ.
ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ನಿಯಮ 7(4) ರಲ್ಲಿದ್ದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾತಿ ಸಿಂಧುತ್ ಪ್ರಮಾಣ ಪತ್ರ ನೀಡುವಲ್ಲಿ ಯಾವುದೇ ಪ್ರಕರಣದಲ್ಲಿ ಜಾತಿ ಪ್ರಮಾಣ ಪತ್ರದ ಬಗ್ಗೆ ಅನುಮಾನಸ್ಪದವೆಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಜಾತಿ ಪರಿಶೀಲನಾ ಸಮಿತಿಗೆ ಕಂಡುಬಂದಲ್ಲಿ. ಅಂತ ಪ್ರಕರಣಗಳಲ್ಲಿ ಮಾತ್ರ ನಾಗರೀಕ ಹಕ್ಕು ಜಾರಿ ನಿರ್ದೇಶಾಲಯದಿಂದ ವರದಿ ಪಡೆದು ನಿಯಮಾನುಸಾರ ಜಾತಿ ಸಿಂಧು ಪ್ರಮಾಣ ಪತ್ರ ನೀಡಬಹುದೆಂದು ಆದೇಶಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ