ನವದೆಹಲಿ:
ವಿದೇಶಗಳಿಂದ ಅಕ್ರಮವಾಗಿ ದೇಣಿಗೆ ಸಂಗ್ರಹಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಾರಿಯಾಗಿರುವ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಲೇಖಕ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಹರ್ಷ ಮಂದರ್ ಅವರ ಎನ್ಜಿಒ ಅಮನ್ ಬಿರಾದಾರಿ ವಿರುದ್ಧ ಕೇಂದ್ರ ಗೃಹ ಸಚಿವಾಲಯ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ.
ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಸೋನಿಯಾ ಗಾಂಧಿ ನೇತೃತ್ವದ ರಾಷ್ಟ್ರೀಯ ಸಲಹಾ ಮಂಡಳಿಯ ಸದಸ್ಯರಾಗಿದ್ದ ಮಂದರ್ ಅವರು ಅಮನ್ ಬಿರಾದಾರಿ ಎಂಬ ಎನ್ ಜಿಒ ಸ್ಥಾಪಿಸಿದ್ದರು. ವಿದೇಶಿ ದೇಣಿಗೆ(ನಿಯಂತ್ರಣ) ಕಾಯ್ದೆಯ ವಿವಿಧ ನಿಬಂಧನೆಗಳ ಉಲ್ಲಂಘನೆಗಾಗಿ ಅಮನ್ ಬಿರಾದಾರಿ ವಿರುದ್ಧ ಸಿಬಿಐ ತನಿಖೆಗೆ ಶಿಫಾರಸು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2023/03/Untitled-10-7.jpg)