ನವದೆಹಲಿ:
ದೆಹಲಿ ಆಪ್ ಸರ್ಕಾರದ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲು ಹೆಚ್ಚಿನ ಸಿಬಿಐ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದರು. ರಾಜಕೀಯ ಒತ್ತಡದಿಂದಾಗಿ ಹಾಗೆ ಮಾಡಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಭಾನುವಾರ ಸಿಸೋಡಿಯಾ ಅವರನ್ನು ಬಂಧಿಸಿದೆ.ಮನೀಶ್ ಸಿಸೋಡಿಯಾ ಬಂಧನವನ್ನು ಹೆಚ್ಚಿನ ಸಿಬಿಐ ಅಧೀಕಾರಗಳು ವಿರೋಧಿಸಿದ್ದಾರೆ ಎಂದು ಮಾಹಿತಿ ಬಂದಿದೆ. ಅವರೆಲ್ಲರಿಗೂ ಮನೀಶ್ ಅವರ ಬಗ್ಗೆ ಅಪಾರ ಗೌರವವಿದೆ ಮತ್ತು ಅವರ ವಿರುದ್ಧ ಯಾವುದೇ ಪುರಾವೆಗಳಿಲ್ಲ. ಆದರೆ, ಅವರನ್ನು ಬಂಧಿಸಲು ರಾಜಕೀಯ ಒತ್ತಡ ಹೆಚ್ಚಾಗಿದ್ದರಿಂದ ಅವರು ತಮ್ಮ ರಾಜಕೀಯ ಯಜಮಾನರಿಗೆ ವಿಧೇಯರಾಗಬೇಕಾಯಿತು’ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ಕಳೆದ ವರ್ಷ ಜೂನ್ನಲ್ಲಿ ದೆಹಲಿಯ ಆಗಿನ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಬಂಧನದ ನಂತರ ಪ್ರತಿಪಕ್ಷ ನಾಯಕರ ವಿರುದ್ಧ ಕೈಗೊಂಡಿರುವ ಕ್ರಮದ ಭಾಗವಾಗಿ ಇದೀಗ ಸಿಸೋಡಿಯಾ ಅವರ ಬಂಧನವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ