ಸಿಬಿಎಸ್‌ಇ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ!!

ನವದೆಹಲಿ: 

     ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) 12ನೇ ತರಗತಿಯ ಪರೀಕ್ಷಾ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ.

      ಈ ವರ್ಷ ಶೇಕಡಾ 99.37 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. 70 ಸಾವಿರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಶೇ. 95ರಷ್ಟು ಅಂಕಗಳಿಸಿರುವುದು ಈ ಬಾರಿಯ ವಿಶೇಷತೆ. ಶೇ. 0.54ರ ಅಂತರದಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕಳೆದ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದರು.

     65,000ಕ್ಕೂ ಹೆಚ್ಚು ಅಭ್ಯರ್ಥಿಗಳ ಫಲಿತಾಂಶವನ್ನು ಇನ್ನೂ ಸಿದ್ಧಪಡಿಸಲಾಗುತ್ತಿದ್ದು, ಆಗಸ್ಟ್ 5 ರೊಳಗೆ ಘೋಷಿಸಲಾಗುವುತ್ತದೆ ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಾರಿ ಅರ್ಹತಾ ಪಟ್ಟಿಯನ್ನು ಘೋಷಿಸಿಲ್ಲ ಎಂದೂ ಅವರು ಹೇಳಿದ್ದಾರೆ.

ಕೋವಿಡ್‌ ಎರಡನೇ ಅಲೆ ಹಿನ್ನೆಲೆಯಲ್ಲಿ ಈ ವರ್ಷ ಸಿಬಿಎಸ್‌ಇ ಪರೀಕ್ಷೆಗಳನ್ನು ರದ್ದುಪಡಿಸಲಾಗಿತ್ತು. ಹೀಗಾಗಿ ಮಂಡಳಿಯು ಪರ್ಯಾಯ ಮೌಲ್ಯಮಾಪನ ಸೂತ್ರದ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಿದೆ. ಫಲಿತಾಂಶವು ಮಂಡಳಿಯ ಅಧಿಕೃತ ವೆಬ್‌ಸೈಟ್ cbseresults.nic.in ನಲ್ಲಿ ಲಭ್ಯವಾಗಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap