ಸಿಬಿಎಸ್ ಇ : 10ನೇ ತರಗತಿ ಫಲಿತಾಂಶ ಪ್ರಕಟ!!

ಬೆಂಗಳೂರು : 

     ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, https://cbseresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಿದೆ.

      ನಿನ್ನೆಯೇ(ಆ.2) ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇಂದು ಫಲಿತಾಂಶ ಪ್ರಕಟಿಸುವುದಾಗಿ ಸಿಬಿಎಸ್‌ಇ ಬೋರ್ಡ್ ತಿಳಿಸಿತ್ತು. ಇದೀಗ ಫಲಿತಾಂಶ ಪ್ರಕಟವಾಗಿದ್ದು, ಸುಮಾರು 20 ಲಕ್ಷ ವಿದ್ಯಾರ್ಥಿಗಳು ಫಲಿತಾಂಶ ಪಡೆದುಕೊಂಡಿದ್ದಾರೆ.

      ಈ ಬಾರಿ ಕೋವಿಡ್-19 ಎರಡನೇ ಅಲೆ ಉಲ್ಬಣವಾದ ಹಿನ್ನೆಲೆಯಲ್ಲಿ ಭೌತಿಕವಾಗಿ ಪರೀಕ್ಷೆಗಳನ್ನು ಮಂಡಳಿ ನಡೆಸಿರಲಿಲ್ಲ. ಪರ್ಯಾಯ ಮೌಲ್ಯಮಾಪನ ನೀತಿಯಡಿ ಫಲಿತಾಂಶವನ್ನು ಮಂಡಳಿ ಪ್ರಕಟಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ