ಬೆಂಗಳೂರು :
ರಾಜಕಾರಣಿ, ವಿಐಪಿ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಅವರನ್ನು ಹನಿ ಟ್ರ್ಯಾಪ್ ಮೂಲಕ ಬಲೆಗೆ ಬೀಳಿಸಿ ಕೊಂಡು ನಂತರ ಅವರಿಂದ ಕೋಟ್ಯಾಂತರ ರೂಪಾಯಿ ಹಣದ ಬೇಡಿಕೆ ಇಟ್ಟು ಬ್ಲ್ಯಾಕ್ ಮೆಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಂದು ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಹೌದು ಹನಿ ಟ್ರ್ಯಾಪ್ ಮೂಲಕ ಬ್ಲಾಕ್ ಮೇಲ್ ಮಾಡುತ್ತಿದ್ದ ಇಬ್ಬರನ್ನು ಇದೀಗ ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಮೈಸೂರು ಮೂಲದ ಸಂತೋಷ ಮತ್ತು ಪುಟ್ಟರಾಜು ಬಂಧಿತ ಆರೋಪಿಗಳು ಎಂದು ಹೇಳಲಾಗುತ್ತಿದೆ.ಕೋಟ್ಯಾಂತರ ರೂಪಾಯಿಗೆ ಬೇಡಿಕೆ ಇಟ್ಟು ಆರೋಪಿಗಳು ಬ್ಲಾಕ್ ಮೇಲ್ ಮಾಡಿದ್ದರು.
ಈ ಸಂಬಂಧ ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ದೂರು ದಾಖಲಿಸಿದ್ದರು. ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದರು.ಅಲ್ಲದೆ ವಿಶ್ವವಿದ್ಯಾಲಯ ಒಂದರ ಉಪಕುಲಪತಿಗೂ ಕೂಡ ಬ್ಲಾಕ್ ಮೇಲ್ ಮಾಡಿದ್ದರು. ಬಂಧಿತ ಆರೋಪಿಗಳ ಗ್ಯಾಂಗ್ನಲ್ಲಿ ಓರ್ವ ಯುವತಿ ಸಹ ಭಾಗಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಪ್ರಭಾವಿಗಳ ಸಂಪರ್ಕ ಮಾಡಿ ಆರೋಪಿಗಳು ಅವರನ್ನು ಫಾಲೋ ಮಾಡುತ್ತಿದ್ದರು.ಬಳಿಕ ವಿಐಪಿಗಳನ್ನು ಭೇಟಿ ಮಾಡುತ್ತಿದ್ದರು.
ವಿಐಪಿ ಗಳು ಖಾಲಿ ಮಾಡಿದ ರೂಮ್ ಪಡೆದು ಈ ಗ್ಯಾಂಗ್ ಆ ರೂಂ ಅಲ್ಲಿ ಇರುತ್ತಿತ್ತು. ನಂತರ ಯುವತಿಯನ್ನು ಬಳಸಿಕೊಂಡು ವಿಡಿಯೋ ರೆಕಾರ್ಡ್ ಮಾಡುತ್ತಿದ್ದರು. ಹಿಡನ್ ಕ್ಯಾಮೆರಾ ಇಟ್ಟ ರೀತಿಯಲ್ಲಿ ವಿಡಿಯೋಗಳನ್ನು ಮಾಡಿಕೊಳ್ಳುತ್ತಿದ್ದರು.ಬಳಿಕ ನಿಮ್ಮದೇ ವಿಡಿಯೋ ಎಂದು ಕಳುಹಿಸಿ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರು.ಕೋಟ್ಯಾಂತರ ರೂಪಾಯಿಗೆ ಆರೋಪಿಗಳು ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇದೀಗ ಸಿಸಿಬಿ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ