ಕೇಂದ್ರ ಸರ್ಕಾರದಿಂದ ಮತ್ತೆ ಕನ್ನಡ ಚಿತ್ರರಂಗಕ್ಕೆ ಅನ್ಯಾಯ!

ಕೇಂದ್ರ ಸರ್ಕಾರದಿಂದ ಮತ್ತೆ ಕನ್ನಡ ಚಿತ್ರರಂಗಕ್ಕೆ ಅನ್ಯಾಯ!

        ಈ ಬಾರಿ 4 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ಕನ್ನಡ ಚಿತ್ರರಂಗಕ್ಕೆ ಮತ್ತೆ ಅನ್ಯಾಯವಾಗಿದೆ.

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಪದ್ಮವಿಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನ, ಕೇಂದ್ರ ಸರ್ಕಾರ ಗಣರಾಜ್ಯೋತ್ಸವದ ಒಂದು ದಿನ ಮುಂಚಿತವಾಗಿ ಪ್ರಕಟಿಸಿದೆ‌.

         ಈ ಬಾರಿ 4 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಇದರಲ್ಲಿ 34 ಮಹಿಳೆಯರು ಮತ್ತು 10 ವಿದೇಶಿಯರು ಪ್ರಶಸ್ತಿಗೆ ಭಾಜನರಾಗಿದ್ದಾರೆ. 13 ಸಾಧಕರಿಗೆ ಮರಣೋತ್ತರ ಪ್ರಶಸ್ತಿ ಲಭಿಸಿದೆ. ಆದರೆ, ಕೇಂದ್ರ ಸರ್ಕಾರದಿಂದ ಕನ್ನಡ ಚಿತ್ರರಂಗಕ್ಕೆ ಮತ್ತೆ ಅನ್ಯಾಯವಾಗಿದೆ.

ಹೌದು 2022ರ ಸಾಲಿನಲ್ಲಿ ಯಾರಿಗೆ ಈ ದೇಶದ ಅತ್ಯುನ್ನತ ಪ್ರಶಸ್ತಿ ಸಿಗಬೇಕು ಎಂದು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಆಯಾ ರಾಜ್ಯದ ಜನತೆಗೆ ಆಯ್ಕೆ ಮಾಡಿ ಅಂತಾ ಕಳೆದ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಹೇಳಿದರು.

ಅದರಂತೆ ಭಾರತೀಯ ಚಿತ್ರರಂಗ ಕಂಡ ಹಾಗು ಈ ನಾಡು ಕಂಡ ಅತ್ಯಂತ ಶ್ರೇಷ್ಠ ಕಲಾವಿದರಲ್ಲಿ ಒಬ್ಬರಾದ ಹಿರಿಯ ನಟ ಅನಂತನಾಗ್​ಗೆ ಅವ್ರಿಗೆ ಪದ್ಮಶ್ರೀ ಪ್ರಶಸ್ತಿ ಕೊಡಬೇಕು ಅಂತಾ ಕನ್ನಡ ಚಿತ್ರರಂಗದಿಂದ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಮಾಡಲಾಗಿತ್ತು.

ಯಾಕೆಂದರೆ ಕನ್ನಡ ಭಾಷೆಗೆ, ನಾಡಿಗೆ, ಚಿತ್ರರಂಗಕ್ಕೆ ಕೊಡುಗೆ ಅಮೋಘ. ಎಂತಹ ಪಾತ್ರಗಳು ಆಗಲಿ ಲೀಲಾಜಾಲವಾಗಿ ಅಭಿನಯಿಸಿ ಚಿತ್ರರಸಿಕರ ಮನಗೆಲ್ಲುತ್ತಾ ಬಂದಿರುವ ಈ ಅಭಿನಯ ಬ್ರಹ್ಮ ಅನಂತ್ ನಾಗ್ ಅವ್ರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ದೊಡ್ಡ ಮಟ್ಟದಲ್ಲಿ ಅಭಿಯಾನ ಮಾಡಲಾಗಿತ್ತು.

ಆದರೆ ಕನ್ನಡ ಚಿತ್ರರಂಗ ಅಲ್ಲದೇ ಇಡೀ ರಾಜ್ಯದ ಜನತೆ ಮಾಡಿದ ಅಭಿಯಾನಕ್ಕೆ ಕೇಂದ್ರ ಸರ್ಕಾರ ಕ್ಯಾರೇ ಅಂದಿಲ್ಲ. ಇದು ಕನ್ನಡ ಚಿತ್ರರಂಗದವರಿಗೆ ಹಾಗೂ ರಾಜ್ಯದ ಜನತೆಯ ಅಸಮಾಧಾನಕ್ಕೆ ಕಾರಣವಾಗಿದೆ.

 ಕೇಂದ್ರ ಸರ್ಕಾರದಿಂದ ಮತ್ತೆ ಕನ್ನಡ ಚಿತ್ರರಂಗಕ್ಕೆ ಅನ್ಯಾಯ

ಇನ್ನು ಚಿಕ್ಕ ವಯಸ್ಸಿನಲ್ಲೇ ಅಕಾಲಿಕ ಮರಣ ಹೊಂದಿರುವ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಪ್ರತಿಭಾ ಪುರಸ್ಕಾರ ಕೊಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ.

ಇದರ ಜೊತೆಗೆ ಯಡಿಯೂರಪ್ಪ ಸಿಎಂ ಆಗಿದ್ದಾಗ ನಟ ಶಿವರಾಜ್ ಕುಮಾರ್ ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆ ಗುರುತಿಸಿ ಪದ್ಮಶ್ರೀ ಪ್ರಶಸ್ತಿ ಕೊಡುವಂತೆ, ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದರು. ಆದರೆ, ಕೇಂದ್ರ ಸರ್ಕಾರ ಮಾತ್ರ ತಮಗೆ ಇಷ್ಟವಾದವರಿಗೆ ಮಾತ್ರ ಪ್ರಶಸ್ತಿ ನೀಡಿದೆ.

 ಕೇಂದ್ರ ಸರ್ಕಾರದಿಂದ ಮತ್ತೆ ಕನ್ನಡ ಚಿತ್ರರಂಗಕ್ಕೆ ಅನ್ಯಾಯ

           ಈ ಬಾರಿ ಕನ್ನಡಕವಿ ಸಿದ್ದಲಿಂಗಯ್ಯ ಅವರಿಗೆ ಪದ್ಮಶ್ರೀ ಪುರಸ್ಕಾರ ಬಂದಿರೋದು ಬಿಟ್ಟರೆ, ಕನ್ನಡ ಚಿತ್ರರಂಗಕ್ಕೆ ಯಾವುದೇ ಪ್ರಶಸ್ತಿ ಬಂದಿಲ್ಲ. ಈ ಮೂಲಕ ಕೇಂದ್ರ ಸರ್ಕಾರದಿಂದ ಮತ್ತೆ ಮಲತಾಯಿ ಧೋರಣೆ ಅನುಸರಿಸಿರೋದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿರೊದಂತು ನಿಜ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap