ಮುಂದಿನ ಸೂಚನೆ ಬರುವವರೆಗೆ ಬಾಂಗ್ಲಾದೇಶಕ್ಕೆ ಹೋಗಬೇಡಿ: ಕೇಂದ್ರ ಸರ್ಕಾರ

ನವದೆಹಲಿ: 

    ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ 100ಕ್ಕೂ ಹೆಚ್ಚು ನಾಗರಿಕರು ಪ್ರಾಣಕಳೆದುಕೊಂಡಿದ್ದು, ಭಾರತವು ತನ್ನ ಪ್ರಜೆಗಳಿಗೆ ಮುಂದಿನ ಸೂಚನೆ ಬರುವವರೆಗೆ ಬಾಂಗ್ಲಾದೇಶಕ್ಕೆ ಪ್ರಯಾಣಿಸದಂತೆ ಎಚ್ಚರಿಕೆ ನೀಡಿದೆ.

   ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಸ್ತುತ ಬಾಂಗ್ಲಾದೇಶದಲ್ಲಿ ವಾಸಿಸುತ್ತಿರುವ ತನ್ನ ನಾಗರಿಕರಿಗೆ ಅತ್ಯಂತ ಜಾಗರೂಕರಾಗಿರಿ, ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಬರುವಂತೆ ಸೂಚಿಸಿದೆ.

   ಬಾಂಗ್ಲಾದೇಶದಲ್ಲಿ ಈಗ ನಡೆಯುತ್ತಿರುವ ಬೆಳವಣಿಗೆಗಳ ದೃಷ್ಟಿಯಿಂದ, ಮುಂದಿನ ಸೂಚನೆ ಬರುವವರೆಗೂ ಬಾಂಗ್ಲಾದೇಶಕ್ಕೆ ಪ್ರಯಾಣಿಸದಂತೆ ಭಾರತೀಯ ಪ್ರಜೆಗಳಿಗೆ ಸಲಹೆ ನೀಡಲಾಗಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

    ಪ್ರಸ್ತುತ ಬಾಂಗ್ಲಾದೇಶದಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ತೀವ್ರ ಎಚ್ಚರಿಕೆ ವಹಿಸಲು, ತಮ್ಮ ಚಲನವಲನಗಳನ್ನು ನಿರ್ಬಂಧಿಸಲು ಮತ್ತು ಢಾಕಾದಲ್ಲಿರುವ ಭಾರತದ ಹೈಕಮಿಷನ್ ಅವರ ತುರ್ತು ದೂರವಾಣಿ ಸಂಖ್ಯೆಗಳಾದ 8801958383679, 8801958383680, 8801937400591ಗೆ ಸಂಪರ್ಕಿಸಲು ಸೂಚಿಸಲಾಗಿದೆ.

   ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದ್ದು, 13 ಪೊಲೀಸ್ ಅಧಿಕಾರಿಗಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 100ರ ಗಡಿ ದಾಟಿದೆ. ಹಲವರು ಗಾಯಗೊಂಡಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ.

Recent Articles

spot_img

Related Stories

Share via
Copy link
Powered by Social Snap