ಕೇಂದ್ರ ಬಜೆಟ್‌ : ಕೇಂದ್ರ ಸರ್ಕಾರಿ ನೌಕರರಿಂದ ಪ್ರಮುಖ ಬೇಡಿಕೆ

ವದೆಹಲಿ:

    ದೇಶದ ಜನ ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ಕೇಂದ್ರ ಬಜೆಟ್‌ಗೆ  ದಿನಾಂಕ ನಿಗದಿಯಾಗಿದೆ. ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ  ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್‌  ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ.

    ಕೇಂದ್ರ ಸರ್ಕಾರಿ ನೌಕರರ ಒಕ್ಕೂಟವು 8ನೇ ವೇತನ ಆಯೋಗ ಜಾರಿ ಸೇರಿ ಕೇಂದ್ರ ಸರ್ಕಾರಕ್ಕೆ 7 ಬೇಡಿಕೆಗಳನ್ನು ಇಟ್ಟಿದ್ದಾರೆ. ಸಂಪುಟ ಕಾರ್ಯದರ್ಶಿಗೆ ನೌಕರರ ಒಕ್ಕೂಟವು 7 ಬೇಡಿಕೆಗಳನ್ನು ಸಲ್ಲಿಸಿದ್ದು, ಅವುಗಳ ಕುರಿತ ಮಾಹಿತಿ ಇಲ್ಲಿದೆ.

ನೌಕರರ 7 ಬೇಡಿಕೆಗಳು

  1. ಕೂಡಲೇ 8ನೇ ವೇತನ ಆಯೋಗ ಜಾರಿಗೊಳಿಸಬೇಕು
  2. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು
  3. ಕೇಂದ್ರ ನೌಕರರಿಗೆ ಬಾಕಿ ಇರುವ 18 ತಿಂಗಳ ತುಟ್ಟಿಭತ್ಯೆ ನೀಡಬೇಕು
  4. ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಇರುವ ಶೇ.5ರಷ್ಟು ಗರಿಷ್ಠ ಮಿತಿ ತೆಗೆದು, ನಿಧನರಾದ ಎಲ್ಲ ನೌಕರರ ಮಕ್ಕಳಿಗೂ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಬೇಕು
  5. ಕೇಂದ್ರ ಸರ್ಕಾರದ ಎಲ್ಲ ಬಾಕಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಬೇಕು
  6. ಸಂಘಟನೆಗಳ ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನು ದೃಢಪಡಿಸುವುದು
  7. ಒಕ್ಕೂಟಗಳಿಗೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವುದು

ಆಯುಷ್ಮಾನ್‌ ಭಾರತ್‌ ವಿಮಾ ಮೊತ್ತ ದ್ವಿಗುಣ?

     ದೇಶದ ಸುಮಾರು 50 ಕೋಟಿ ಬಡವರಿಗೆ ಆಯುಷ್ಮಾನ್‌ ಭಾರತ್‌ ಯೋಜನೆ ಅಡಿಯಲ್ಲಿ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಇನ್ನು, 70 ವರ್ಷ ದಾಟಿದ ಎಲ್ಲರಿಗೂ ಆಯುಷ್ಮಾನ್‌ ಭಾರತ್‌ ಯೋಜನೆಯ ಸೌಲಭ್ಯವನ್ನು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಇದರ ಜತೆಗೆ, ವಿಮಾ ಮೊತ್ತವನ್ನು 5 ಲಕ್ಷ ರೂ.ನಿಂದ 10 ಲಕ್ಷ ರೂ.ಗೆ ಏರಿಕೆ ಮಾಡುವ ಕುರಿತು ಕೂಡ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,076 ಕೋಟಿ ರೂ. ಹೆಚ್ಚುವರಿಯಾಗಿ ಖರ್ಚಾಗಲಿದೆ ಎಂದು ತಿಳಿದುಬಂದಿದೆ.

    ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap