ನವದೆಹಲಿ:
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳಿಗೆ ಕೇಂದ್ರ ಸಚಿವ ಸಂಪುಟವು ಶುಕ್ರವಾರ 14.2 ಕೆಜಿ ಸಿಲಿಂಡರ್‌ಗೆ ವರ್ಷಕ್ಕೆ 12 ರೀಫಿಲ್‌ಗಳಿಗೆ ತಲಾ 200 ರೂ ಸಬ್ಸಿಡಿ ನೀಡಿಕೆಗೆ ಅನುಮೋದನೆ ನೀಡಿದೆ. ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಸಿಸಿಇಎ ಸಭೆ ನಡೆಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ