ಬೆಂಗಳೂರು
ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿರುವ ಕೇಂದ್ರದ ವರ್ತನೆ ಕುರಿತಾಗಿ ಸಾಮಾನ್ಯ ಜನರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ ಇತ್ತೀಚಿನ ದಿನಗಳಲ್ಲಿ ಮೊದಲೆ ತಮ್ಮ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ತಮ್ಮ ನೌಕರಿ ಇರುತ್ತದೋ ಇಲ್ಲವೋ ಎಂಬ ಅನಿಶ್ಚಿತತೆ ಇರುವಾಗ ಸರ್ಕಾರದ ಈ ಬೆಲೆ ಏರಿಕೆ ಜನರಿಗೆ ಶಾಕ್ ನೀಡಿದೆ. ಈ ಕುರಿತು ರಾಜ್ಯ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಕಿಡಿಕಾರಿದೆ.
ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಮೋದಿಯವರು ಒಮ್ಮೆ ಕೈಬೀಸಿ ಹೋದರೆಂದರೆ ಜನತೆ ಬರೆ ಎಳೆದು ಹೋದರು ಎಂದೇ ಅರ್ಥ. ಗೃಹಬಳಕೆಯ ಸಿಲಿಂಡರ್ ದರ ಇಂದಿನಿಂದ ಮತ್ತೆ 50 ಏರಿಕೆಯಾಗಿದೆ. ಮೋದಿಜಿಯ ಅಚ್ಛೆ ದಿನಗಳಲ್ಲಿ ಜನರು ಕಾಡುಮೇಡು ಅಲೆದು ಗೆಡ್ಡೆಗೆಣಸು ತಿಂದು ಬದುಕುವ ಹಂತಕ್ಕೆ ಬರುವುದು ನಿಶ್ಚಿತ ಎಂದು ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.ಈ ಅಮಾನವೀಯ ಬೆಲೆ ಏರಿಕೆಯಲ್ಲಿ ನೆರವು ನೀಡಲೆಂದೇ ನಮ್ಮ ಗೃಹ ಲಕ್ಷ್ಮಿ ಯೋಜನೆ ಘೋಷಿಸಿದ್ದೇನೆ ಎಂದು ಕಾಂಗ್ರೆಸ್ ಹೇಳದೆ.