15ದಿನದಲ್ಲಿ ವಿಷನ್‌ ಡಾಕ್ಯೂಮೆಂಟ್‌ ಸಿದ್ದ ಪಡಿಸುತ್ತೇನೆ : ಕುಮಾರಸ್ವಾಮಿ

ಬೆಂಗಳೂರು:

    ದೇಶಾದ್ಯಂತ ಉತ್ಪಾದನಾ ವಲಯವನ್ನು ಬಲಪಡಿಸುವ ದೂರದೃಷ್ಟಿ ನನಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

    ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರಾಗಿ ಕುಮಾರಸ್ವಾಮಿಯವರು ಇಂದು ಸಂಜೆ 5 ಗಂಟೆಗೆ ಅಧಿಕಾರ ಸ್ವೀಕರಿಸಲಿದ್ದಾರೆ.

    ಈ ವಿಚಾರವನ್ನು ಕುಮಾರಸ್ವಾಮಿ ಅವರು ತಮಗೆ ಪ್ರಮುಖ ಖಾತೆ ನೀಡಿರುವುದಕ್ಕೆ ಕನ್ನಡಿಗರ ಪರವಾಗಿ ಪ್ರಧಾನಿ ಮೋದಿಯವರಿಗೆ ಧನ್ಯವಾದ ತಿಳಿಸಿದ್ದಾರೆ.

     ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಸಮಸ್ಯೆಗಳನ್ನು ಬಗೆಹರಿಸುವ ಸವಾಲು ನಮ್ಮ ಮುಂದಿದೆ. ಮುಂದಿನ 15 ದಿನದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಇಲಾಖೆ ಕುರಿತು ವಿಷನ್ ಡಾಕ್ಯುಮೆಂಟ್ ಸಿದ್ಧಪಡಿಸಲಿದ್ದೇನೆ. ಪ್ರಧಾನಿ ಮೋದಿಯವರ ಮಾರ್ಗದರ್ಶನ ಪಡೆದು ಅವರ ಕನಸು ನನಸು ಮಾಡುವ ನಿಟ್ಟಿನಲ್ಲಿ ಸಚಿವನಾಗಿ ಕೆಲಸ ಮಾಡುತ್ತೇನೆಂದು ಹೇಳಿದರು.

     ಉತ್ಪಾದನಾ ಕ್ಷೇತ್ರದಲ್ಲಿ ಬಹಳಷ್ಟು ನಿರೀಕ್ಷೆಗಳಿವೆ. ಇಲಾಖೆಯಲ್ಲೂ ಹೊಸ ಬದಲಾವಣೆ ತರಲು ಪ್ರಯತ್ನ ಮಾಡುತ್ತೇನೆ. ಇದಕ್ಕಾಗಿ ದೇಶದಾದ್ಯಂತ ಸುತ್ತಾಡಲು ನಿರ್ಧರಿಸಿದ್ದೇನೆ. ಉದ್ಯಮಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆಂದು ತಿಳಿಸಿದರು.

      ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ವಿಶೇಷವಾಗಿ ಕಲ್ಯಾಣ-ಕರ್ನಾಟಕದಂತಹ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಉಪಕ್ರಮಗಳನ್ನು ತೆಗೆದುಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಕೃಷಿ ಖಾತೆಯ ನಿರೀಕ್ಷೆಯಲ್ಲಿದ್ದರೂ, ಕೈಗಾರಿಕೆ ಮತ್ತು ಉಕ್ಕು ಖಾತೆಯನ್ನು ನೀಡುವ ನಿರ್ಧಾರವನ್ನು ಗೌರವಿಸುತ್ತೇನೆ ಮತ್ತು ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲ.

     ಕರ್ನಾಟಕವನ್ನು ಅಭಿವೃದ್ಧಿಪಡಿಸಲು ಮತ್ತು ಎಲ್ಲಾ ಜಿಲ್ಲೆಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಾಕಷ್ಟು ಅವಕಾಶಗಳಿವೆ ಆಗಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್‌ಗಳನ್ನು ಸ್ಥಾಪಿಸುವ ಚಿಂತನೆಯಿದೆ. ದೇಶದಲ್ಲಿ ಕೈಗಾರಿಕಾ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ದೇಶಾದ್ಯಂತ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯಿದ್ದು. ಹದಿನೈದು ದಿನಗಳಲ್ಲಿ ವಿವರವಾದ ಬ್ಲರ್ಪ್ರಿಂಟ್ ಸಿದ್ಧಪಡಿಸಲಾಗುವುದು ಎಂದರು.

Recent Articles

spot_img

Related Stories

Share via
Copy link
Powered by Social Snap