ಬೆಂಗಳೂರು:
ಕರ್ನಾಟಕದ ಶಕ್ತಿ ಕೇಂದ್ರ ವಿಧಾನಸೌಧ ಜಗಜ್ಯೋತಿ ಬಸವೇಶ್ವರ ಹಾಗೂ ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮ ಮಾ.26ರ ಸಂಜೆ 6.30ಕ್ಕೆ ನಡೆಯಲಿದ್ದು, ಕೇಂದ್ರ ಸಚಿವ ಅಮಿತ್ ಶಾ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ.
ಸುಮಾರು ರೂ.8 ಕೋಟಿ ವೆಚ್ಚದಲ್ಲಿ ಪ್ರತಿಮೆ ಸಿದ್ಧಗೊಂಡಿದ್ದು, ಕಳೆದ ಜನವರಿಯಲ್ಲಿ ಪ್ರತಿಮೆ ಸ್ಥಾಪನೆ ಸಂಬಂಧ ಶಂಕುಸ್ಥಾಪನೆ ನೆರವೇರಿಸಲಾಗಿತ್ತು.
ಕಾರ್ಯಕ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶೀ ಕೇಂದ್ರ ಸ್ವಾಜೀಮಿ, ಆದಿಚುಂಚನಗಿರಿ ಮಠದ ನಿರ್ಮಲಾನಾಂದನಾಥ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಸಿದ್ದಗಂಗಾಮಠದ ಸಿದ್ದಲಿಂಗ ಸ್ವಾಮೀಜಿ, ಮಾದಾರ ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಗುರುಗುಂಡಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆಂದು ತಿಳಿದುಬಂದಿದೆ.
ಈಗಾಗಲೇ ವಿಧಾನಸೌಧದ ಮುಂಭಾಗದಲ್ಲಿ ನಾಡಪ್ರಭು ಕೆಂಪೇಗೌಡ ಮತ್ತು ಬಸವೇಶ್ವರರ ಪ್ರತಿಮೆಗಳನ್ನು ಕ್ರೇನ್ ಮೂಲಕ ಅಳವಡಿಸಲಾಗಿದ್ದು, ವಿಧಾನಸೌಧದ ಆವರಣ ಮದುವಣಗಿತ್ತಿಯಂತೆ ಕಂಗೊಳಿಸುತ್ತಿದೆ.