ಪ್ರವಾಹ ಪೀಡಿತ ಜನರೊಂದಿಗೆ ಕೇಂದ್ರ ಸರ್ಕಾರ ನಿಲ್ಲಲಿದೆ: ಪ್ರಧಾನಿ

ನವದೆಹಲಿ:

    ಪ್ರವಾಹ ಪೀಡಿತ ಜನರೊಂದಿಗೆ ಕೇಂದ್ರ ಸರ್ಕಾರ ನಿಲ್ಲಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ.ಪ್ರವಾಹ ಪೀಡಿತ ಹಾಗೂ ಭೂಕುಸಿತದಿಂದ ನಲುಗಿರುವ ಹಿಮಾಚಲ ಪ್ರದೇಶ ಹಾಗೂ ಪಂಜಾಬ್ ರಾಜ್ಯಕ್ಕೆ ಮೋದಿಯವರು ಇಂದು ಭೇಟಿ ನೀಡುತ್ತಿದ್ದು, ಪರಿಸ್ಥಿತಿಯನ್ನು ಅವಲೋಕನ ನಡೆಸಲಿದ್ದಾರೆ.

   ಭೇಟಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ಸಂಕಷ್ಟದ ಸಮಯದಲ್ಲಿ ಪ್ರವಾಹ ಪೀಡಿತರೊಂದಿಗೆ ಕೇಂದ್ರ ಸರ್ಕಾರ ಹೆಗಲು ಕೊಟ್ಟು ನಿಲ್ಲಲಿದೆ ಎಂದು ಹೇಳಿದ್ದಾರೆ.ಮೊದಲಿಗೆ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿರುವ ಮೋದಿಯವರು, ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ನಂತರ ಪಂಜಾಬ್ ರಾಜ್ಯಕ್ಕೂ ಭೇಟಿ ನೀಡಲಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

    ಪ್ರಧಾನಿ ಮೋದಿ ಅವರು ಎರಡೂ ರಾಜ್ಯಗಳ ಅಧಿಕಾರಿಗಳೊಂದಿಗೆ ಈಗಾಗಲೇ ಉನ್ನತ ಮಟ್ಟದ ಚರ್ಚೆ ನಡೆಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರವಾಹ ಪೀಡಿತ ಸ್ಥಳೀಯ ನಿವಾಸಿಗಳು ಹಾಗೂ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ  ಮತ್ತು ಆಪ್ದಾ ಮಿತ್ರ ತಂಡಗಳ ಸಿಬ್ಬಂದಿಯೊಂದಿಗೂ ಸಂವಾದ ನಡೆಸಿದರು. ಎಂದು ಹೇಳಿದ್ದಾರೆ.

Recent Articles

spot_img

Related Stories

Share via
Copy link