ಬೆಂಗಳೂರು:
ಆಗಸ್ಟ್ 28 ಹಾಗೂ 29ರಂದು ಸಿಇಟಿ ಪರೀಕ್ಷೆಗಳು ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಇಂದು ನಡೆದ ಸಭೆ ಬಳಿಕ ಮಾತನಾಡಿದ ಅವರು, ಜೂನ್ 15ರಿಂದ ಸಿಇಟಿ ನೋಂದಣಿ ಆರಂಭವಾಗಲಿದೆ. ಆಗಸ್ಟ್ 28 ಹಾಗೂ ಆಗಸ್ಟ್ 29ರಂದು ಸಿಇಟಿ ನಡೆಯಲಿದ್ದು, ಮೊದಲ ದಿನ ಗಣಿತ, ಜೀವಶಾಸ್ತ್ರ ಪರೀಕ್ಷೆಗಳು ನಡೆಯುತ್ತದೆ. ಎರಡನೇ ದಿನ ರಸಾಯನಶಾಸ್ತ್ರ, ಭೌತಶಾಸ್ತ್ರ ಪರೀಕ್ಷೆ ನಡೆಯಲಿದೆ. 3ನೇ ದಿನ ಆಗಸ್ಟ್ 30ರಂದು ಗಡಿನಾಡ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.
ಆಗಸ್ಟ್ 28 – ಜೀವಶಾಸ್ತ್ರ, ಗಣಿತ
ಆಗಸ್ಟ್ 29 – ಭೌತಶಾಸ್ತ್ರ, ರಸಾಯನಶಾಸ್ತ್ರ
ಆಗಸ್ಟ್ 30 – ಗಡಿನಾಡು, ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ
ಎಲ್ಲಾ ಕೋರ್ಸ್ ಗಳಿಗೂ ಸಿಇಟಿ ಅಂಕ ಪರಿಗಣಿಸಲಾಗುತ್ತದೆ. ಇನ್ನು ಸಿಇಟಿಯಲ್ಲಿ ನೀಟ್ ನಂತೆ ಕನಿಷ್ಠ ಅಂಕ ಪರಿಗಣಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.