ಬೆಂಗಳೂರು :
ಜುಲೈ.10ರ ನಾಳೆಗೆ ಅಂತ್ಯಗೊಳ್ಳಲಿದ್ದಂತ ಸಿಇಟಿ-2021ರ ವೃತ್ತಿಪರ ಕೋರ್ಸ್ ಗಳ ಸೀಟುಗಳ ಆಯ್ಕೆಗಾಗಿ ನಡೆಯುವಂತ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ.16, 2021ರವರೆಗೆ ವಿಸ್ತರಣ ಮಾಡಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಸಿಇಟಿ-2021ರ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು, ಅನೇಕ ವಿದ್ಯಾರ್ಥಿಗಳು, ಪೋಷಕರು ಅರ್ಜಿ ಸಲ್ಲಿಸಲು ಅವಕಾಶ ನೀಡಲು ಕೋರಿರುವುದರಿಂದ, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ.
ನೊಂದಣಿ ಮಾಡಿಕೊಳ್ಳದೇ ಇರುವ ವಿದ್ಯಾರ್ಥಿಗಳು ದಿನಾಂಕ 16-07-2021ರ ವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿ ಹಾಗೂ ಶುಲ್ಕವನ್ನು ದಿನಾಂಕ 19-07-2021ರವರೆಗೆ ಪಾವತಿಸಬಹುದಾಗಿ ಎಂದು ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ