ಬೆಂಗಳೂರು :
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದಿದ್ದ ಉನ್ನತ ಶಿಕ್ಷಣ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ.
ಮೈಸೂರಿನ ಮೇಘನ್ ಹೆಚ್.ಕೆ. – ಮೊದಲ ಸ್ಥಾನ ಪಡೆದರೆ, ಬೆಂಗಳೂರಿನ ಪ್ರೇಮಂಕುರ್ ಎರಡನೇ ಸ್ಥಾನ ಪಡೆದಿದ್ದಾರೆ, ಬಿ.ಎಸ್. ಅನಿರುಧ್ ಮೂರನೇ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಸೋಮವಾರ ಫಲಿತಾಂಶ ಪ್ರಕಟಿಸಿದ್ದು, ಮೈಸೂರಿನ ಎಚ್.ಕೆ. ಮೇಘನ್ ಎಲ್ಲಾ ವಿಭಾಗಗಳಲ್ಲೂ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಇಂಜಿನಿಯರಿಂಗ್, ನ್ಯಾಚೊರೋಪತಿ, ಕೃಷಿ, ಪಶು ವೈದ್ಯಕೀಯ, ಯೋಗಿಕ್ ಸೈನ್ಸ್ ನಲ್ಲೂ ಮೇಘನ್ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಆಗಸ್ಟ್ ತಿಂಗಳಲ್ಲಿ ನಡೆದ ಸಿಇಟಿ ಪರೀಕ್ಷೆ ನಡೆದಿದ್ದು, 2 ಲಕ್ಷದ 1 ಸಾವಿರದ 834 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, 1 ಲಕ್ಷದ 93 ಸಾವಿರದ 413 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಎಂದು ಅವರು ವಿವರಿಸಿದರು.
ಫರೀಕ್ಷೆ ಫಲಿತಾಂಶವನ್ನು ಸಂಜೆ ನಾಲ್ಕು ಗಂಟೆಗೆ ಮಂಡಳಿಯ ಅಧಿಕೃತ ವೆಬ್’ಸೈಟ್ http://kea.kar.nic.in ಹಾಗೂ http://karresults.nic.in ನಲ್ಲಿ ಪ್ರಕಟ ಮಾಡಲಾಗುವುದು. ವಿದ್ಯಾರ್ಥಿಗಳಯ ಈ ಜಾಲತಾಣಕ್ಕೆ ಭೇಟಿ ನೀಡಿ ಫಲಿತಾಂಶ ನೋಡಬಹುದಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ