ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯಬೇಕೆಂಬ ನಿಯಮ ಇಲ್ಲ: ಕೆಇಎ ಸ್ಪಷ್ಟನೆ

ಬೆಂಗಳೂರು:

    ಬೀದರ್‌ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಹೋದ ಇಬ್ಬರು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಬ್ರಾಹ್ಮಣ ಸಮಾಜದಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಅವರು ಸ್ಪಷ್ಟನೆ ನೀಡಿದ್ದು, ಸಿಇಟಿ ಪರೀಕ್ಷಾ ವೇಳೆ ಕೆಲವು ನಿಯಮ ಪಾಲಿಸಬೇಕು. ವಿದ್ಯಾರ್ಥಿಗಳಿಗೆ ವಸ್ತ್ರ ಸಂಹಿತೆ ಇರುತ್ತದೆ, ಅದನ್ನು ಪಾಲಿಸಬೇಕು. ಆದರೆ ಜನಿವಾರ ತೆಗಿಯಬೇಕೆಂಬ ನಿಯಮ ಇಲ್ಲ, ಜನಿವಾರ ಹಾಕಬಾರದು ಎಂದು ನಾವು ಸೂಚನೆ ಕೊಟ್ಟಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಅವರು ಸ್ಪಷ್ಟನೆ ನೀಡಿದ್ದಾರೆ.

    ಗುರುವಾರ ನಡೆದ ಸಿಇಟಿ ಪರೀಕ್ಷೆಯಲ್ಲಿ ಬೀದರ್‌ನಲ್ಲಿ ಸುಚಿವೃತ ಕುಲಕರ್ಣಿ ಎನ್ನುವ ವಿದ್ಯಾರ್ಥಿಗೆ ಪರೀಕ್ಷೆ ಬರೆಯುವ ವೇಳೆ ಜನಿವಾರ ತೆಗೆಸಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಕೂಡ ಇಂತದುದೇ ಘಟನೆ ನಡೆದಿದೆ. ಹೀಗಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.

   ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಯ ಮುನ್ನ ಏನು ನಿಯಮ ಇರುತ್ತದೋ ಅವೆಲ್ಲ ನಿಯಮಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು. ಆದರೆ ಜನಿವಾರ ತೆಗೆಯಬೇಕು, ಲಿಂಗದಕಾಯಿ ತೆಗೆಯಬೇಕು ಎಂಬ ನಿಯಮ ಎಲ್ಲಿಯೂ ಇಲ್ಲ. ಹಾಗಾಗಿ ಈ ಎರಡು ಘಟನೆಗಳ ಕುರಿತು ಈಗಾಗಲೇ ಸಚಿವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಹೇಳಿಕೆ ನೀಡಿದ್ದಾರೆ ಎಂದು ಪ್ರಸನ್ನ ಅವರು ತಿಳಿಸಿದರು.

Recent Articles

spot_img

Related Stories

Share via
Copy link