ಬೆಂಗಳೂರು:
ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಫಾರ್ಮಸಿ, ನ್ಯಾಚುರೋಪಥಿ ಮತ್ತು ಯೋಗ ಹಾಗೂ ಬಿ.ಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳ ಪ್ರವೇಶಾತಿಯ ಸಿಇಟಿ ಪರೀಕ್ಷೆ ಶನಿವಾರದಿಂದ ನಡೆಯಲಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದಾರೆ.
ಮೇ20 ಮತ್ತು 21ರಂದು ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು ಈ ಬಾರಿ ಒಟ್ಟು 2,61,610 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿಯಾಗಿದ್ದಾರೆ.
ಎಂದಿನಂತೆ ಈ ಬಾರಿಯೂ ರಾಜ್ಯದಲ್ಲಿ ಇಂಜಿನಿಯಂರಿಂಗ್ ಮುಂತಾದ ವೃತ್ತಿಪರ ಕೋರ್ಸ್ಗಳಿಗಾಗಿ ಭಾರಿ ಸ್ಪರ್ಧೆ ಏರ್ಪೆಟ್ಟಿದೆ. ಪರೀಕ್ಷಾ ಅಕ್ರಮ ತಡೆಗಟ್ಟಲು 592 ವೀಕ್ಷಕರು, 1,184 ಮಂದಿ ಇರುವ ವಿಶೇಷ ಸ್ಕ್ವಾಡ್, 592 ಕಸ್ಟೋಡಿಯನ್ಸ್ ಸೇರಿದಂತೆ ಒಟ್ಟು 23 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ