ನೆಲಮಂಗಲ:
ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.ಸ್ಥಳದಲ್ಲಿ ಮೂವರು ದಾರುಣ ಸಾವನ್ನಪ್ಪಿದರೆ, ಇನ್ನೂ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ಅಪಘಾತ ಸಂಭವಿಸಿದೆ.
ಸಾವನ್ನಪ್ಪಿದ ಮೂರು ಕಾರ್ಮಿಕರು ಕಾಂಕ್ರೀಟ್ ಕೆಲಸ ಮಾಡುವವರು ಎನ್ನಲಾಗಿದೆ. ಅಪಘಾತವು ಲಾರಿ, ಟೆಂಪೋ, ಕಾಂಕ್ರೀಟ್ ಮಿಕ್ಸರ್ ನಡುವೆ ಸಂಭವಿಸಿದೆ. ಘಟನೆಯಿಂದ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಟ್ರಾಫಿಕ್ ತೆರವು ಕಾರ್ಯ ಮಾಡುತ್ತಿದ್ದಾರೆ. ಸ್ಥಳೀಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.