ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR

ಮಂಗಳೂರು: 

    ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಧರ್ಮ-ಧರ್ಮಗಳ ನಡುವೆ ದ್ವೇಷ ಪ್ರಚೋದನೆ ಅಡಿಯಲ್ಲಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ.

   ಮಾರ್ಚ್ 9ರಂದು VHP ಆಯೋಜಿಸಿದ್ದ ಕೊರಗಜ್ಜನ‌ ಆದಿಕ್ಷೇತ್ರಕ್ಕೆ ನಮ್ಮ‌ನಡೆ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ್ದ ಸೂಲಿಬೆಲೆ ಅವರು, ಅನ್ಯ ಧರ್ಮಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಕರೆ ನೀಡಿದ್ದರು. ಇದು ಭಾರೀ ವಿವಾದ ಸೃಷ್ಟಿಸಿತ್ತು. ಈ ಸಂಬಂಧ ಇದೀಗ ಪ್ರಚೋದನಕಾರಿ ಭಾಷಣ ಮಾಡಿ,‌ ಕೋಮು ದ್ವೇಷಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಶೀದ್ ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಈ ದೂರಿನ‌ ಮೇರೆಗೆ ಉಳ್ಳಾಲ ಠಾಣೆ ಪೊಲೀಸರು FIR ದಾಖಲಿಸಿದ್ದಾರೆ.

    ಮತಾಂತರ ಎಂದು ಬಾಯಿ ಬಡಿದುಕೊಳ್ಳುವುದು ಸಾಕು. ಈಗ ಹಿಂದೂ ಧರ್ಮಕ್ಕೆ ಘರ್ ವಾಪ್ಸಿ ಮಾಡೋ ಬಗ್ಗೆ ಮಾತಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು? ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ ಅಂತ ನಮ್ಮ ಗಂಡು ಮಕ್ಕಳಿಗೆ ಕೇಳೋಣ. ಬೇರೆ ಧರ್ಮದ ಹುಡುಗಿಯರನ್ನೂ ನೋಡು ಅಂತ ಹೇಳಬೇಕು. ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ಕರೆ ನೀಡಿದ್ದರು. ನಮ್ಮ ಸಮಾಜದಲ್ಲಿ ಹೆಣ್ಣು ಮಕ್ಕಳಿಲ್ಲ ಅನ್ನೋವಾಗ ಪಕ್ಕದ ಸಮಾಜದಲ್ಲೂ ಸಮಸ್ಯೆಯಿದೆ ಎಂದು ಧೈರ್ಯ ತುಂಬಿ.

   ನಾವು ಆಕ್ರಮಣಕಾರಿಯಾಗಿ ಆಡಬೇಕು, ರಕ್ಷಣಾತ್ಮಕವಾಗಿ ಆಡಿದ್ದು ಸಾಕು. ಟೆಸ್ಟ್ ಮ್ಯಾಚ್‌ಗಳು ನಿಂತು ಹೋಯ್ತು. ಈಗ ಟ್ವೆಂಟಿ ಟ್ವೆಂಟಿ ಮ್ಯಾಚ್ ಆಡೋ ಸಮಯ ಬಂದಾಗಿದೆ. ಇರುವ ಇಪ್ಪತ್ತು ಓವರ್‌ನಲ್ಲಿ ಬಡಿಬೇಕು ಅಷ್ಟೇ. ಘರ್ ವಾಪ್ಸಿ ಹೇಗೆ ಮಾಡೋದು ಅನ್ನೋದರ ಬಗ್ಗೆ ರೀಲ್ಸ್ ಮಾಡಿ. ಹಿಂದೂ ಧರ್ಮದಿಂದ ಹೋಗಿರುವವರನ್ನ ಮೊದಲು ವಾಪಸ್ ತರೋಣ ಎಂದು ಕರೆ ನೀಡಿದ್ದರು. ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಭಾರೀ ವಿರೋಧಗಳು ವ್ಯಕ್ತವಾಗಿತ್ತು. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆ ಜೋರಾಗಿತ್ತು.

Recent Articles

spot_img

Related Stories

Share via
Copy link