ಕೊಪ್ಪಳ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಯುವಕನಿಗೆ ಚಾಕು ಇರಿತ

ಗಂಗಾವತಿ:

    ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಹಳೆ ವೈಷಮ್ಯದಿಂದ ಒಂದೇ ಸಮುದಾಯದ ಎರಡು ಗುಂಪುಗಳ ನಡುವೆ ಜಗಳ ಉಂಟಾಗಿ, ಯುವಕನೊಬ್ಬನಿಗೆ ಚಾಕು ಇರಿತವಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ಸೋಮವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಇತರ ಮೂವರ ಮೇಲೆ ಹಲ್ಲೆಯಾಗಿದ್ದು, ಗಾಯಗಳಾಗಿವೆ.

   ಚಾಕು ಇರಿತಕ್ಕೆ ಒಳಗಾದ ಅಂಬೇಡ್ಕರ್ ನಗರದ ಶಿವು (38) ಎಂಬಾತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕಳುಹಿಸಲಾಗಿದೆ. ಗಣೇಶ್, ಮಂಜು ಹಾಗೂ ಸಾಗರ್ ಹಲ್ಲೆಗೊಳಗಾದವರು.

   ಗುಂಡಮ್ಮ ಕ್ಯಾಂಪಿನಲ್ಲಿ ಗಣೇಶ ಮೂರ್ತಿ ವಿರ್ಸಜನೆ ವೇಳೆ ಡಿಜೆ ಬಳಸಿ ಯುವಕರು ಕುಣಿಯುತ್ತಿದ್ದಾಗ ಏಕಾಏಕಿ ಎರಡು ಗುಂಪುಗಳ ನಡುವೆ ವಾಗ್ವಾದ ಉಂಟಾಗಿದೆ. ಇದು ಕೈ ಕೈ ಮಿಲಾಯಿಸುವ ಹಂತ ತಲುಪಿದ್ದು, ಒಂದು ಗುಂಪಿನ ಕಡೆಯವರು ಇನ್ನೊಂದು ಗುಂಪಿನವರ ಮೇಲೆ ಹಲ್ಲೆ ನಡೆಸಿ, ಚಾಕು ಇರಿದಿದ್ದಾರೆ. ಗಾಯಾಳುಗಳನ್ನು ಗಂಗಾವತಿ ಉಪ ವಿಭಾಗ ಆಸ್ಪತ್ರೆಗೆ ಚಿಕಿತ್ಸೆಗೆ ಸೇರಿಸಲಾಗಿದೆ. 

   ಈ ಘಟನೆಗೆ ಹಳೆ ವೈಷಮ್ಯ ಕಾರಣ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಘಟನೆ ಸಂಬಂಧ ಒಟ್ಟು 20 ಜನರ ವಿರುದ್ಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recent Articles

spot_img

Related Stories

Share via
Copy link