ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಿದ ಗಣಿತಶಿಕ್ಷಕ..!

ತಳಕು : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾದ ಬಳಿಕ ಅಕ್ರಮವಾಗಿ ಗರ್ಭಪಾತ ಮಾಡಿಸಿದ್ದ ಆರೋಪದ ಮೇಲೆ ಶಿಕ್ಷಕ ಮತ್ತು ವೈದ್ಯೆ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಗುರು-ಶಿಷ್ಯ ಸಂಬAಧಕ್ಕೇ ಕಳಂಕ ತರುವಂತಹ ಗಂಭೀರ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. 16 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಗಣಿತ ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗಿ, ನಂತರ ಪ್ರಕರಣ ಬಯಲಾಗದಿರಲು ಅಕ್ರಮವಾಗಿ ಗರ್ಭಪಾತ ಮಾಡಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ, ಶಿಕ್ಷಕ ಮತ್ತು ಗರ್ಭಪಾತ ಮಾಡಿಸಿದ ವೈದ್ಯೆ ವಿರುದ್ಧ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ತಳಕು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ : ಸರ್ಕಾರಿ ಪ್ರೌಢಶಾಲೆಯಲ್ಲಿ ಗಣಿತ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ. ಎಚ್.ಒ. ರಾಜಣ್ಣ ಎಂಬಾತ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಈ ದೌರ್ಜನ್ಯದಿಂದ ಬಾಲಕಿ ಗರ್ಭಿಣಿಯಾಗಿದ್ದು, ನಂತರ ಪ್ರಕರಣ ಹೊರಬರುವ ಭಯದಿಂದ ಗರ್ಭಪಾತ ಮಾಡಿಸಿದ ಘಟನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಕ್ರಮ ಗರ್ಭಪಾತ ಆರೋಪ : ವಿಷಯ ತಿಳಿದ ನಂತರ, ಆರೋಪಿತ ಶಿಕ್ಷಕ ಚಳ್ಳಕೆರೆಯ ಲಕ್ಷಿ÷್ಮÃ ಶ್ರೀನಿವಾಸ ನರ್ಸಿಂಗ್ ಆಸ್ಪತ್ರೆಯ ವೈದ್ಯೆ ಶಂಕರಲಕ್ಷಿ÷್ಮÃ ಅವರ ಸಹಾಯದಿಂದ ಬಾಲಕಿಗೆ ಅಕ್ರಮವಾಗಿ ಗರ್ಭಪಾತ ಮಾಡಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಬೆಳಕಿಗೆ ಬಂದ ನಂತರ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು: ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಚಿತ್ರದುರ್ಗ ಮಕ್ಕಳ ರಕ್ಷಣಾಧಿಕಾರಿ ರೇಖಾ ಅವರು ತಳಕು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ, ಶಿಕ್ಷಕ ರಾಜಣ್ಣ ಮತ್ತು ವೈದ್ಯೆ ಶಂಕರಲಕ್ಷಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸದ್ಯ ತನಿಖೆ ಮುಂದುವರೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ದಾಖಲಾದ ನಂತರ ಶಿಕ್ಷಕ ವಿಷ ಸೇವಿಸಿದ್ದಾರೆ . ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Recent Articles

spot_img

Related Stories

Share via
Copy link