ಮತ್ತೊಂದು ವಿವಾದದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ….!

ಬೆಂಗಳೂರು

     ಇತ್ತೀಚಿಗೆ ಜಯನಗರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಲಾಂಗ್ ಹಿಡಿದುಕೊಂಡು ಫೋಟೋಗೆ ಪೋಸ್ ಕೊಟ್ಟು ಮತ್ತೊಂದು ವಿವಾದದಲ್ಲಿ .

    ರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದ ನಟ ದರ್ಶನ್ ಹಾಗೂ ಅಭಿಷೇಕ್ ಅಂಬರೀಶ್ ಅವರನ್ನು ಭರ್ಜರಿಯಾಗಿ ಸನ್ಮಾನಿಸಿದ್ದಾರೆ. ಈ ವೇಳೆ ದರ್ಶನ್ ಮತ್ತು ಅಭಿಗೆ ಬೆಳ್ಳಿ ಕಿರೀಟ, ಲಾಂಗ್ ಉಡುಗೊರೆ ನೀಡಿದ್ದಾರೆ. ದರ್ಶನ್ ಲಾಂಗ್​ ಹಿಡಿದು ಪೋಸ್​ ಕೊಟ್ಟಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ನಟರು ಸಾರ್ವಜನಿಕವಾಗಿ ಈ ರೀತಿ ಲಾಂಗ್ ಹಿಡಿದು ಫೋಟೋಗೆ ಪೋಸ್ ನೀಡುವುದು ಸರಿಯಲ್ಲ ಎಂದು ನೆಟ್ಟಿಗರು ಪ್ರತಿಕ್ರಿಯಿಸುತ್ತಿದ್ದಾರೆ. ಈ ಬಗ್ಗೆ ದೂರು ದಾಖಲಾಗುವ ಸಾಧ್ಯತೆಯಿದೆ. ಇತ್ತೀಚಿಗೆ ಮನೆಯ ನಾಯಿ ಮಹಿಳೆಯೊಬ್ಬರಿಗೆ ಕಚ್ಚಿದ ಹಿನ್ನೆಲೆಯಲ್ಲಿ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು, ಇದೀಗ ಹೊಸ ಸಮಸ್ಯೆ ಎದುರಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap