ರಾಜಕೀಯ ನಿವೃತ್ತಿ ಘೋಷಿಸಿದ ಚಾಮರಾಜನಗರದ ಸಂಸದ…!

ಮೈಸೂರು:

      ಕರ್ನಾಟಕ ವಿಧಾನಸಭಾ ಚುನಾವಣೆಗೆ  ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ   ನಾಯಕರು ಪಕ್ಷ ತೊರೆದು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುತ್ತಿದ್ದಾರೆ. ಈ ಮಧ್ಯೆ, ಕೇಂದ್ರದ ಮಾಜಿ ಸಚಿವ, ಚಾಮರಾಜನಗರದ  ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್   ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

      ತಮ್ಮ ಸಂಸದರ ಅವಧಿ 2024 ರಲ್ಲಿ ಕೊನೆಗೊಂಡ ನಂತರ ಸಕ್ರಿಯ ರಾಜಕೀಯದಿಂದ ಹೊರನಡೆಯುವುದಾಗಿ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಬುಧವಾರ ಬಿಜೆಪಿ ಪಕ್ಷದ ಅಭ್ಯರ್ಥಿ ಸಿ ಎಸ್‌ ನಿರಂಜನ್‌ಕುಮಾರ್‌ ಪರ ಪ್ರಚಾರ ನಡೆಸಿದ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.

     2013ರ ವಿಧಾನಸಭೆ ಚುನಾವಣೆ ತಮ್ಮ ಕೊನೆಯ ಚುನಾವಣೆ ಎಂದು ಶ್ರೀನಿವಾಸ್‌ ಪ್ರಸಾದ್ ಈ ಹಿಂದೆಯೇ ಘೋಷಿಸಿದ್ದರು. ಆದರೆ 2016 ರಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ಅವರು ಕಂದಾಯ ಸಚಿವ ಸ್ಥಾನದಿಂದ ಕೈಬಿಟ್ಟಾಗ ಶ್ರೀನಿವಾಸ್‌ ಪ್ರಸಾದ್‌ ಅವರು ಕಾಂಗ್ರೆಸ್‌ಗೆ ವಿದಾಯ ಹೇಳಿ ಬಿಜೆಪಿ ಸೇರಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ